‘ಈಗ್ಲೂ ನಿಮ್ಮ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡ್ತೀನಿ’

ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್​ಗಳು ಸರಿಯಾಗಿ ಕೆಲಸ ಮಾಡಿಲ್ಲ, ಇದ್ರಿಂದ ಕೆಲವೊಂದು ಕಡೆ ಜನರಿಗೆ ಸಾಲ ಮರುವಾವತಿ ಆಗಿಲ್ಲ. ಈಗಲೂ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡಿಸುತ್ತೇನೆ ಎಂದು ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್​. ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಆದ್ರೆ, ಬಹುತೇಕ ಕಡೆ ರೈತರ ಸಾಲ ಇನ್ನೂ ಮರುಪಾವತಿಯಾಗಿಲ್ಲ. ಈ ಬಗ್ಗೆ ಮಾತನಾಡಿದ ಹೆಚ್​ಡಿಕೆ, ಈಗಲೂ ಆಧಾರ್​ ಕಾರ್ಡ್​ […]

‘ಈಗ್ಲೂ ನಿಮ್ಮ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡ್ತೀನಿ’
ಸಾಧು ಶ್ರೀನಾಥ್​

Updated on: Dec 02, 2019 | 3:38 PM

ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್​ಗಳು ಸರಿಯಾಗಿ ಕೆಲಸ ಮಾಡಿಲ್ಲ, ಇದ್ರಿಂದ ಕೆಲವೊಂದು ಕಡೆ ಜನರಿಗೆ ಸಾಲ ಮರುವಾವತಿ ಆಗಿಲ್ಲ. ಈಗಲೂ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡಿಸುತ್ತೇನೆ ಎಂದು ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್​. ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಆದ್ರೆ, ಬಹುತೇಕ ಕಡೆ ರೈತರ ಸಾಲ ಇನ್ನೂ ಮರುಪಾವತಿಯಾಗಿಲ್ಲ. ಈ ಬಗ್ಗೆ ಮಾತನಾಡಿದ ಹೆಚ್​ಡಿಕೆ, ಈಗಲೂ ಆಧಾರ್​ ಕಾರ್ಡ್​ ಕೊಟ್ರೆ ತಾವೇ ಸಾಲ ಮರುಪಾವತಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಡಿಸಿಸಿ ಬ್ಯಾಂಕ್​ಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us