ಸ್ಟಿರಾಯ್ಡ್ ನೀಡುತ್ತಿರುವುದರಿಂದ ಬ್ಲ್ಯಾಕ್ ಫಂಗಸ್ ಹೆಚ್ಚಳ: ಆರೋಗ್ಯ ಸಚಿವ ಡಾ. ಸುಧಾಕರ್
1 ವಾರದವರೆಗೂ ವಿನಾಕಾರಣ ಸ್ಟಿರಾಯ್ಡ್ ನೀಡಬಾರದು. ರೋಗದ ತೀವ್ರತೆ ನೋಡಿಕೊಂಡು ಚಿಕಿತ್ಸೆ ನೀಡಬೇಕು. ಕೊರೊನಾದಿಂದ ಗುಣಮುಖರಾದವರ ಮೇಲೆ ತೀವ್ರ ನಿಗಾ ವಹಿಸಬೇಕು.
ಬೆಂಗಳೂರು: ಸ್ಟಿರಾಯ್ಡ್ ನೀಡುತ್ತಿರುವುದರಿಂದ ಬ್ಲ್ಯಾಕ್ ಫಂಗಸ್ ಹೆಚ್ಚಳವಾಗಿದೆ. ಸ್ಟಿರಾಯ್ಡ್ ಹೆಚ್ಚು ತೆಗೆದುಕೊಂಡವರಿಗೆ ಈ ರೋಗ ಬರ್ತಿದೆ ಎಂದು ಅಧಿಕಾರಿಗಳ ಜೊತೆ ನಡೆಸಿದ ಸಭೆಯ ಬಳಿಕ ಸಚಿವ ಸುಧಾಕರ್ ಹೇಳಿಕೆ ನೀಡಿದರು. ಬ್ಲ್ಯಾಕ್ ಫಂಗಸ್ ನಿಯಂತ್ರಣ ಕುರಿತು ವಿಶೇಷ ತಂಡ ರಚನೆ ಮಾಡಲಾಗಿದೆ. ಬ್ಲ್ಯಾಕ್ ಫಂಗಸ್ಗೆ ಹೆಚ್ಚು ಸ್ಟಿರಾಯ್ಡ್ ನೀಡದಂತೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
1 ವಾರದವರೆಗೂ ವಿನಾಕಾರಣ ಸ್ಟಿರಾಯ್ಡ್ ನೀಡಬಾರದು. ರೋಗದ ತೀವ್ರತೆ ನೋಡಿಕೊಂಡು ಚಿಕಿತ್ಸೆ ನೀಡಬೇಕು. ಕೊರೊನಾದಿಂದ ಗುಣಮುಖರಾದವರ ಮೇಲೆ ತೀವ್ರ ನಿಗಾ ವಹಿಸಬೇಕು. ಬ್ಲ್ಯಾಕ್ ಫಂಗಸ್ಗೆ ಈಗಿರುವ ಔಷಧ ಜೊತೆಗೆ ಮತ್ತೆರಡು ಔಷಧ ಕೊಡಲಾಗುತ್ತದೆ. ಬ್ಲ್ಯಾಕ್ ಫಂಗಸ್ಗೆ ಇನ್ನೂ ಎರಡು ಔಷಧ ನೀಡಲಾಗುತ್ತೆ ಎಂದು ಅಧಿಕಾರಿಗಳ ಜೊತೆ ಸಭೆ ಬಳಿಕ ಸಚಿವ ಸುಧಾಕರ್ ಮಾಹಿತಿ ನೀಡಿದರು.
ರೋಗದ ಮೂಲ ಪತ್ತೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಲುವಾಗಿ ವಿಕ್ಟೋರಿಯಾ ಆಸ್ಪತ್ರೆಯ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥೆ ಡಾ. ಅಂಬಿಕಾ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಸಚ್ಚಿದಾನಂದ ಅವರ ಅಧ್ಯಕ್ಷತೆಯ ಎರಡು ಪ್ರತ್ಯೇಕ ಸಮಿತಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರಿಗೆ ಬುಧವಾರ ಮಾಹಿತಿ ನೀಡಿದರು.
ಎರಡೂ ಸಮಿತಿಗಳ ತಜ್ಞರ ಜತೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಗಿದೆ. ಅವರು ನೀಡಿರುವ ಅಭಿಪ್ರಾಯಗಳ ಆಧಾರದ ಮೇಲೆ ಕೋವಿಡ್ ಚಿಕಿತ್ಸೆಗೆ ದಾಖಲಾಗುವ ರೋಗಿಗಳಿಗೆ ಮೊದಲ ವಾರ ಅನಗತ್ಯವಾಗಿ ಸ್ಟಿರಾಯ್ಡ್ ನೀಡದಂತೆ ವೈದ್ಯರಲ್ಲಿ ಮನವಿ ಮಾಡುತ್ತಿದ್ದೇನೆ. ಚಿಕಿತ್ಸೆ ಆರಂಭಿಸಿದ ಎರಡನೇ ವಾರದಲ್ಲಿ ಅಗತ್ಯವಿದ್ದರೆ ಮಾತ್ರ ಸ್ಟಿರಾಯ್ಡ್ ನೀಡಬಹುದಾಗಿದೆ. ಅದು ಕೂಡ ವೈದ್ಯರ ನಿಗಾ ವ್ಯವಸ್ಥೆಯಲ್ಲಿ ಮಾತ್ರ. ಈ ಕುರಿತು ಎಲ್ಲಾ ವೈದ್ಯರಿಗೂ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: Steroids in Covid: ಸ್ಟಿರಾಯ್ಡ್ ಎಂದರೇನು? ಕೊರೊನಾ ಸೋಂಕು ಚಿಕಿತ್ಸೆಯಲ್ಲಿ ಈ ಔಷಧವನ್ನು ಹೇಗೆ ಬಳಸಲಾಗುತ್ತದೆ?
ಕೊರೊನಾ ಸೋಂಕಿತರಿಗೆ ನೀಡುವ ಸ್ಟಿರಾಯ್ಡ್ನಿಂದ ಸಕ್ಕರೆ ಖಾಯಿಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಇಲ್ಲಿದೆ ವಿವರ
Published On - 11:34 pm, Wed, 26 May 21