AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದ ವಾಹನಗಳ ಮೇಲೆ AI ಕಣ್ಣು: ಆಧುನಿಕ ವ್ಯವಸ್ಥೆ ಪರಿಚಯಿಸಿದ ಗೋವಾ

ಗೋವಾಗೆ ತೆರಳಬೇಕು ಅಂದಾಕ್ಷಣ ವಾಹನಗಳ ದಾಖಲೆ ಸರಿಯಾಗಿ ಇದೆಯಾ? ಅಥವಾ ಇಲ್ಲವಾ ಎಂದೂ ಯೋಚಿಸದೆ ಹೋಗ್ತೀರಾ? ಹಾಗಿದ್ದರೆ ಭಾರಿ ಮೊತ್ತದ ದಂಡ ಕಟ್ಟೋಕೆ ನೀವು ಸಿದ್ಧರಾಗಿ. ಹೌದು, 'ಗೋವಾ ವೆಹಿಕಲ್ ಆಥೆಂಟಿಕೇಶನ್ ಸಿಸ್ಟಂ' ಎಂಬ ಹೊಸ ವ್ಯವಸ್ಥೆಯನ್ನು ಇಲ್ಲಿನ ಸರ್ಕಾರ ಪರಿಚಯಿಸಿದ್ದು, ದಾಖಲೆಗಳು ಸರಿ ಇಲ್ಲದ ವಾಹನಗಳಿಗೆ ಕ್ಷಣ ಮಾತ್ರದಲ್ಲಿ ದಂಡ ವಿಧಿಸೋ ಸಾಮರ್ಥ್ಯವನ್ನು ಇದು ಹೊಂದಿದೆ.

ಹೊರ ರಾಜ್ಯದ ವಾಹನಗಳ ಮೇಲೆ AI ಕಣ್ಣು: ಆಧುನಿಕ ವ್ಯವಸ್ಥೆ ಪರಿಚಯಿಸಿದ ಗೋವಾ
ಗೋವಾ ಗಡಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Oct 12, 2025 | 5:22 PM

Share

ಕಾರವಾರ, ಅಕ್ಟೋಬರ್​ 12: ಎಲ್ಲ ಕ್ಷೇತ್ರಗಳನ್ನು ಎಐ (artificial intelligence) ವ್ಯಾಪಿಸುತ್ತಿರುವ ನಡುವೆ ರಾಜ್ಯ ಪ್ರವೇಶಿಸುವ ವಾಹನಗಳ ತಪಾಸಣೆಗೂ ಈ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ನೆರೆ ರಾಜ್ಯ ಗೋವಾ ಮುಂದಾಗಿದೆ. ವಾಹನಗಳ ದಾಖಲೆಗಳು ಸರಿಯಾಗಿ ಇಲ್ಲದಿದ್ದರೆ ನಿಮ್ಮ ಮನೆಗೇ ನೊಟೀಸ್ ಬರಲಿದ್ದು, ಸ್ವತಃ ನೀವೇ ಹೋಗಿ ಅಲ್ಲಿ ದಂಡ ತುಂಬಿ ಬರಬೇಕಾಗುತ್ತೆ. ಹೀಗಾಗಿ ಗೋವಾಕ್ಕೆ ಸ್ವಂತ ವಾಹನಗಳಲ್ಲಿ ಪ್ರಯಾಣಿಸುವ ಮೊದಲು ಈ ವಿಷಯ ನೆನಪಲ್ಲಿ ಇಟ್ಟುಕೊಂಡೇ ತೆರಳಬೇಕಿದೆ.

ಏನಿದು ಹೊಸ ವ್ವವಸ್ಥೆ?

ಕರ್ನಾಟಕದಿಂದ ಗೋವಾಕ್ಕೆ ತೆರಳುವ ಮೊಲ್ಲೆಂ ಗಡಿಯಲ್ಲಿ ‘ಗೋವಾ ವೆಹಿಕಲ್ ಆಥೆಂಟಿಕೇಶನ್ ಸಿಸ್ಟಂ’ (GoVA) ಎಂದು ಕರೆಯಲ್ಪಡುವ ಅತ್ಯಾಧುನಿಕ ಎಲೆಕ್ಟ್ರಾನಿಕ್ ತಪಾಸಣೆ ಕೇಂದ್ರ ಈಗಾಗಲೇ ಆರಂಭವಾಗಿದೆ. ಕಾರವಾರದಿಂದ ಗೋವಾಕ್ಕೆ ತೆರಳುವ ಮಾರ್ಗ ಪೊಳೆಂನಲ್ಲೂ ಈ ವ್ಯವಸ್ಥೆ ಸದ್ಯವೇ ಶುರುವಾಗಲಿದೆ. ಗೋವಾ ಸರ್ಕಾರ ಮತ್ತು ಮಿಸ್ಟೋಟೆಕ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ‘GoVA’ ವ್ಯವಸ್ಥೆ, ಕೃತಕ ಬುದ್ಧಿಮತ್ತೆ (AI) ಮತ್ತು ನೈಜ ಕಾಲದ ಡೇಟಾಬೇಸ್ ಸಂಪರ್ಕ ಬಳಸಿ ವಾಹನಗಳ ದಾಖಲೆ ಪರಿಶೀಲನೆ ನಡೆಸಲಿದೆ. ಕ್ಷಣದಲ್ಲಿಯೇ ವಾಹನಗಳ ನೋಂದಣಿ, ವಿಮೆ ಹಾಗೂ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳ ಪರಿಶೀಲನೆ ನಡೆಯಲ್ಲಿದ್ದು, ದಾಖಲೆ ಸರಿ ಇಲ್ಲದಿದ್ದರೆ ಅಥವಾ ಅವಧಿ ಮೀರಿದ್ದರೆ ತಕ್ಷಣವೇ ದಂಡ ವಿಧಿಸುವ ಸಾಮರ್ಥ್ಯವನ್ನು ಈ ವ್ಯವಸ್ಥೆ ಹೊಂದಿದೆ.

ಇದನ್ನೂ ಓದಿ: ವಿಶ್ವಮಟ್ಟದಲ್ಲೂ ಸದ್ದು ಮಾಡಿದ ಬೆಂಗಳೂರು ಟ್ರಾಫಿಕ್..!

ಭಾರಿ ಮೊತ್ತದ ದಂಡ

ವಿಮೆ ಇಲ್ಲದ ವಾಹನಗಳಿಗೆ ಮೊದಲ ಬಾರಿಗೆ 2 ಸಾವಿರ ರೂ. ಹಾಗೂ ಪುನಃ ತಪ್ಪಿದರೆ 4 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಇಲ್ಲದಿದ್ದರೆ 10 ಸಾವಿರ ರೂ. ದಂಡ ನಿಗದಿಪಡಿಸಲಾಗಿದೆ. ಅಲ್ಲದೇ ನಿಗದಿತ ಮಿತಿಯ ವರ್ಷ ಮೀರಿದ ವಾಹನಗಳಿಗೆ ಗೋವಾಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಪಾರದರ್ಶಕವಾಗಿ ದಂಡ ಸಂಗ್ರಹಿಸಲು ಗೋವಾ ಸರ್ಕಾರ ಮುಂದಾಗಿದೆ.

ಪ್ರವಾಸಿಗರ ಹಾಟ್​ ಸ್ಪಾಟ್​ ಆಗಿರೋ ಗೋವಾಗೆ ಪ್ರತಿನಿತ್ಯ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಅವರಲ್ಲಿ ಹಲವರು ವಾಹನಗಳ ದಾಖಲೆ ಸರಿ ಇಲ್ಲದೆ ರಾಜ್ಯ ಪ್ರವೇಶಿಸುತ್ತಿದ್ದು, ಅಂತವರ ನಿಯಂತ್ರಣಕ್ಕೆ ಈ ವ್ಯವಸ್ಥೆ ಜಾರಿಗೆ ಬಂದಿದೆ. ಆದರೆ ಗೋವಾ ಸರ್ಕಾರ ತಂದಿರುವ ಈ ಆಧುನಿಕ ವ್ವವಸ್ಥೆ ಪ್ರವಾಸೋದ್ಯಮ ಮತ್ತು ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರೆ, ವಾಹನಗಳ ದಾಖಲೆ ಸರಿ ಇದ್ದಲ್ಲಿ ಏನು ಸಮಸ್ಯೆ ಆಗುತ್ತೆ ಎಂದು ಇನ್ನು ಕೆಲವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:15 pm, Sun, 12 October 25

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!