AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿದೆ. ಗೋವಾ ಸರ್ಕಾರದ ಒತ್ತಡದಿಂದ ಮಹದಾಯಿ ಪ್ರವಾಹ ತಂಡ ಕಣಕುಂಬಿಗೆ ಭೇಟಿ ಕೊಡುತ್ತಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಮಹದಾಯಿ ಪ್ರವಾಹ ತಂಡ ರಚಿಸಿದೆ.

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ
ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ
ಸಹದೇವ್​ ಮಾನೆ
| Edited By: |

Updated on:Jul 06, 2024 | 3:51 PM

Share

ಬೆಳಗಾವಿ, ಜುಲೈ 06: ಕರ್ನಾಟಕ, ಗೋವಾ, ಮಹಾರಾಷ್ಟ್ರ ಮಧ್ಯೆ ಇರುವ ಜಲ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಹದಾಯಿ ಯೋಜನೆಗೆ (Mahadayi project) ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ಶುರು ಮಾಡಿದೆ. ಹೀಗಾಗಿ ಯೋಜನೆ ಸಂಬಂಧ ಕೇಂದ್ರದ ಮೇಲೆ ಗೋವಾ ಸಿಎಂ ಒತ್ತಡ ಹಾಕಿದ್ದಾರೆ. ಈ ಸಂಬಂಧ ಗೋವಾ ಸರ್ಕಾರದ ಒತ್ತಡದಿಂದ ಮಹದಾಯಿ ಪ್ರವಾಹ ತಂಡ ಕಣಕುಂಬಿಗೆ ಭೇಟಿ ಕೊಡುತ್ತಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ (Pramod Sawant) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿಯ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ನಾಳೆ ಭೇಟಿ ನೀಡಲಿದೆ. ಸದ್ಯದ ವಸ್ತು ಸ್ಥಿತಿ, ನೀರು ಹರಿದು ಎಲ್ಲಿಗೆ ಹೋಗುತ್ತಿದೆ ಅಂತಾ ಪರಿಶೀಲನೆ ಮಾಡಲಿದ್ದಾರೆ. ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಸಿಎಂ ಸಿದ್ದರಾಮಯ್ಯ, ಸಚಿವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಆದಷ್ಟು ಬೇಗ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರದಿಂದ ಮಹದಾಯಿ ಪ್ರವಾಹ ತಂಡ ಭೇಟಿ ಕೊಡುತ್ತಿದ್ದು, ನಾಳೆ 9 ಗಂಟೆಗೆ ಕಳಸಾ ಮತ್ತು ಬಂಡೂರಿ ನಾಲೆಗೆ ತಂಡ ಭೇಟಿ ನೀಡಲಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಟ್ವೀಟ್​

ನಾಡಿದ್ದು ಬೆಂಗಳೂರಿನಲ್ಲಿ ಕೆಎನ್ಎಲ್ಎಲ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದೆ. ಆ ಬಳಿಕ ತನ್ನದೇಯಾದ ವರದಿಯನ್ನ ಕೇಂದ್ರ ಸರ್ಕಾರಕ್ಕೆ ತಂಡ ಸಲ್ಲಿಕೆ ಮಾಡಲಿದೆ. ಆ ಮೂಲಕ ಕರ್ನಾಟಕಕ್ಕೆ ಪರಿಸರ ಇಲಾಖೆ ಅನುಮತಿ ಸಿಗದಂತೆ ತಡೆಯಲು ಗೋವಾ ಹುನ್ನಾರ ನಡೆಸಿದೆ ಎನ್ನಲಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕಳಸಾ, ಬಂಡೂರಿ ನಾಲೆ ತುಂಬಿ ಹರಿಯುತ್ತಿದೆ.

ಇದನ್ನೂ ಓದಿ: ಮಹದಾಯಿ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

2018 ರಲ್ಲಿಯೇ ಮಹದಾಯಿ ನ್ಯಾಯಾಧೀಕರಣದಿಂದ ತೀರ್ಪು ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ 13 ಟಿಎಂಸಿ ನೀರು ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕಳಸಾದಿಂದ 1.72 ಟಿಎಂಸಿ, ಬಂಡೂರಿಯಿಂದ 2.18 ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ: ಮಹದಾಯಿ, ಬೆಂಗಳೂರು ಅಭಿವೃದ್ಧಿ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ

ಮಹದಾಯಿ ತೀರ್ಪು ಬಂದು 6 ವರ್ಷ ಕಳೆದರೂ ಒಂದೇ ಒಂದು ಹನಿ ನೀರು ಕರ್ನಾಟಕಕ್ಕೆ ಸಿಕ್ಕಿಲ್ಲ. ನಾಲ್ಕು ಜಿಲ್ಲೆಯ 13 ತಾಲೂಕಿನ ಜನತೆಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಪರಿಸರ ಇಲಾಖೆ ಅನುಮತಿ ಕರ್ನಾಟಕಕ್ಕೆ ಸಿಗದಂತೆ ತಡೆಯಲು ಗೋವಾ ಸರ್ಕಾರದ ಹುನ್ನಾರ ಮಾಡಿತ್ತು. ಇದೇ ಕಾರಣಕ್ಕೆ ಮಹದಾಯಿ ತೀರ್ಪು ಬಂದ್ರು ಪ್ರವಾಹ ತಂಡದ ನೆಪದಲ್ಲಿ ಯೋಜನೆಗೆ ಮತ್ತೆ ಅಡ್ಡಗಾಲು ಹಾಕಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 6 July 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ