AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ-ಬಾಲಚಂದ್ರ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿ ಚರ್ಚೆ; ಗೋಕಾಕ್​ನಲ್ಲಿ ಭುಗಿಲೆದ್ದ ಆಕ್ರೋಶ

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿಯನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಈ ಭೇಟಿ ನಡೆದಿದೆ.

ರಮೇಶ್ ಜಾರಕಿಹೊಳಿ-ಬಾಲಚಂದ್ರ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿ ಚರ್ಚೆ; ಗೋಕಾಕ್​ನಲ್ಲಿ ಭುಗಿಲೆದ್ದ ಆಕ್ರೋಶ
ಗೋಕಾಕ್​ ಬಂದ್​ಗೆ ಕರೆ ನೀಡುತ್ತಿರುವ ಬೆಂಬಲಿಗರು
ರಾಜೇಶ್ ದುಗ್ಗುಮನೆ
|

Updated on:Mar 03, 2021 | 4:13 PM

Share

ಗೋಕಾಕ್​ (ಮಾ.03): ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ರಮೇಶ್​ ಜಾರಕಿಹೊಳಿ. ಆದರೆ, ಈಗ ಅವರ ಅಶ್ಲೀಲ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. ಇದರ ಜತೆಗೆ ನೀರಾವರಿ ಸಚಿವ ಸ್ಥಾನ ಪಟ್ಟ ಪಡೆದ ಒಂದೇ ವರ್ಷಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತಾಗಿದೆ. ಬಿಜೆಪಿ ಸರ್ಕಾರಕ್ಕೆ ಸಾರ್ವಜನಿಕರು ಛೀಮಾರಿ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ರಮೇಶ್ ಜಾರಕಿಹೊಳಿ ಇಂದು ಭೇಟಿ ಮಾಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಈ ಭೇಟಿ ನಡೆದಿದೆ.ಮುಂದಿನ ನಡೆ ಕುರಿತು ಜಾರಕಿಹೊಳಿ ಬ್ರದರ್ಸ್​ ಮಾತುಕತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ರಾಜಕೀಯ ನಡೆ, ಪ್ರಕರಣ ಯಾವ ರೀತಿ, ಹೇಗೆ ನಿಭಾಯಿಸಬೇಕು, ಸಿಡಿ ರಿಲೀಸ್​ ಹಿಂದೆ ಯಾರ ಕೈವಾಡವಿರಬಹುದು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬೂದಿ ಮುಚ್ಚಿದ ಕೆಂಡದಂತಾದ ಗೋಕಾಕ್​ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುತ್ತಿದ್ದಂತೆ ಸ್ವಕ್ಷೇತ್ರ ಗೋಕಾಕ್​ ಬೂದಿ ಮುಚ್ಚಿದ ಕೆಂಡದಂತಾಗಿದೆ. ರಮೇಶ್​ ಜಾರಕಿಹೊಳಿ ಅಭಿಮಾನಿಗಳು ಒತ್ತಾಯಪೂರ್ವಕವಾಗಿ ಗೋಕಾಕ್ ಮಾರುಕಟ್ಟೆಯನ್ನು ಬಂದ್‌ ಮಾಡುತ್ತಿದ್ದಾರೆ. ಕೈಯಲ್ಲಿ ಕಲ್ಲು ಹಿಡಿದುಕೊಂಡು ನಿಂತು ಮಾರುಕಟ್ಟೆ ಬಂದ್ ಮಾಡಿಸುತ್ತಿದ್ದಾರೆ. ಟಾಯರ್​ಗಳಿಗೆ ಬೆಂಕಿ ಹಚ್ಚಲಾಗಿದೆ. ಸದ್ಯ, ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಾರುಕಟ್ಟೆ ಬಂದ್ ಮಾಡಲಾಗಿದೆ. ಬೆಂಬಲಿಗರನ್ನು ನಿಭಾಯಿಸಲು ಪೊಲೀಸರಿಂದ ಹರಸಾಹಸ ಪಡುತ್ತಿದ್ದಾರೆ.  ಈ ಎಲ್ಲಾ ಬೆಳವಣಿಗೆಯಿಂದ ಗೋಕಾಕ್ ನಗರ‌ ಬೂದಿಮುಚ್ಚಿದ ಕೆಂಡದಂತಾಗಿದೆ.

ರಮಶ್​ ಜಾರಕಿಹೊಳಿ ರಾಜೀನಾಮೆ ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿರುವ ರಮೇಶ್​ ಜಾರಕಿಹೊಳಿ, ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? – ಸಿದ್ದರಾಮಯ್ಯ

Published On - 4:11 pm, Wed, 3 March 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More