ಬೆಂಗಳೂರು: ಏಪ್ರಿಲ್ ತಿಂಗಳಿನಲ್ಲಿ ಚಿನ್ನದ ದರ ಏರಿಳಿತ ಕಾಣುತ್ತಲೇ ಇದೆ. ಕಳೆದೆರಡು ದಿನಗಳಿಂದ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ? ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ದರ ಹೇಗಿದೆ? ಎಂಬೆಲ್ಲಾ ವಿವರಗಳು ಇಲ್ಲಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಬದಲಾವಣೆ ಕಂಡಿದೆ. ಚಿನ್ನದ ಮೇಲಿನ ಆಮದು ಸುಂಕ ಮತ್ತು ಅಂತರರಾಷ್ಟ್ರೀಯ ಟ್ರೆಂಡ್ ಆಧರಿಸಿ ದೈನಂದಿನ ಚಿನ್ನದ ದರವನ್ನು ನಿರ್ಧರಿಸಲಾಗುತ್ತದೆ.
ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,590 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,650 ರೂಪಾಯಿ ಇದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,240 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,460 ರೂಪಾಯಿ ಇದೆ. ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,590 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,650 ರೂಪಾಯಿ ಇದೆ.
ದೇಶಾದ್ಯಂತ ಕೊರೊನಾ ಅಲೆ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ಭೀತಿ ಜನರನ್ನು ಕಂಗಾಲುಗೊಳಿಸಿದೆ. ಕೊರೊನಾ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಅಗತ್ಯ ವಸ್ತುಗಳ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದ್ದು, ಇನ್ನಿತರ ಅಂಗಡಿಗಳ ಬಾಗಿಲು ಮುಚ್ಚಿಸಲಾಗಿದೆ. ಹೀಗಿರುವಾಗ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. ಮೊದಲು ಕೊವಿಡ್ ಮೊದಲನೇ ಅಲೆ ಹರಡಲು ಆರಂಭಗೊಂಡಾಗ ಚಿನ್ನದ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತ್ತು. ಇದೀಗ ಕೊಂಚ ಇಳಿಕೆಯತ್ತ ಸಾಗುತ್ತಿದೆ.
ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,940 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,940 ರೂಪಾಯಿ ಇದೆ. ಪುಣೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,940 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10ಗ್ರಾಂ ಚಿನ್ನದ ದರ 45,940 ರೂಪಾಯಿ ಇದೆ.
ವಿವಿಧ ನಗರಗಳಲ್ಲಿ ಬೆಳ್ಳಿ ದರ ಮಾಹಿತಿ
ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿ ದರ 68,750 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 50 ರೂಪಾಯಿ ಏರಿಕೆ ಕಂಡಿದೆ. ಚೆನ್ನೈನಲ್ಲಿ 1 ಕೆಜಿ ಬೆಳ್ಳಿ ದರ 73,800 ರೂಪಾಯಿ ಇದೆ. ದೆಹಲಿಯಲ್ಲಿ ಬೆಳ್ಳಿ ದರ ಕೊಂಚ ಏರಿಕೆ ಕಂಡು ಬಂದಿದ್ದು ಇಂದು ದರ 68,750 ರೂಪಾಯಿ ಆಗಿದೆ. ಹೈದರಾಬಾದ್ನಲ್ಲಿ 1ಕೆಜಿ ಬೆಳ್ಳಿ ದರ 73,800 ರೂಪಾಯಿ ಇದೆ. ಅದೇ ರೀತಿ ಪುಣೆಯಲ್ಲಿ 1ಕೆಜಿ ಬೆಳ್ಳಿ ದರ 68,750 ರೂಪಾಯಿ ಆಗಿದೆ. ದೈನಂದಿನ ದರ ಪರಿಶೀಲನೆಯಲ್ಲಿ 50 ರೂಪಾಯಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ: Gold Rate Today: ವಿವಿಧ ನಗರಗಳಲ್ಲಿ ಚಿನ್ನದ ದರ ಹೀಗಿದೆ; ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ