AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನದ ಅಂಗಡಿಗಳೆಲ್ಲಾ ಬಂದ್​; ಬೆಂಗಳೂರು ಸೇರಿ ಇತರ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ?

Gold Silver Price in Bangalore: ಲಾಕ್​ಡೌನ್​ ಸಮಯದಲ್ಲಿ ಮದುವೆ ಸಮಾರಂಭಗಳಿಗೆ ಹೆಚ್ಚಿನ ಜನರನ್ನು ಸೇರಿಸದೇ ಮದುವೆ ಆಚರಿಸಲು ಅವಕಾಶ ನೀಡಲಾಗಿದೆ. ಆದೆ ಪೂಜೆ ಪುನಸ್ಕಾರಗಳಿಗೆ ಚಿನ್ನ, ಬೆಳ್ಳಿ ಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂಗಡಿಗಳು ಬಂದ್​ ಆಗಿವೆ ಎಂಬುದು ಸಾರ್ವಜನಿಕರ ಅಭಿಪ್ರಾಯ.

Gold Rate Today: ಚಿನ್ನದ ಅಂಗಡಿಗಳೆಲ್ಲಾ ಬಂದ್​; ಬೆಂಗಳೂರು ಸೇರಿ ಇತರ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ?
ಸಾಂದರ್ಭಿಕ ಚಿತ್ರ
shruti hegde
| Updated By: Digi Tech Desk|

Updated on:May 10, 2021 | 11:25 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಅಂಗಡಿಗಳನ್ನೂ ಕೂಡಾ ಬಂದ್​ ಮಾಡಲಾಗಿದೆ. ಮದುವೆ ಸಮಾರಂಭಗಳಿಗೆ ಹೆಚ್ಚಿನ ಜನರನ್ನು ಸೇರಿಸದೇ ಮದುವೆ ಆಚರಿಸಲು ಅವಕಾಶ ನೀಡಲಾಗಿದೆ. ಆದೆ ಪೂಜೆ ಪುನಸ್ಕಾರಗಳಿಗೆ ಚಿನ್ನ, ಬೆಳ್ಳಿ ಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂಗಡಿಗಳು ಬಂದ್​ ಆಗಿವೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿದ್ದರೂ, ಇಂದು ಮಾರುಕಟ್ಟೆ ಬೆಲೆ ಎಷ್ಟಿದೆ ಎಂಬುದನ್ನು ನೋಡೋಣ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 44,610 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 44,600 ರೂಪಾಯಿಯಿಂದ 44,610 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದ್ದು, 48,660 ರೂಪಾಯಿ ಇದ್ದ ಚಿನ್ನದ ದರ ಇಂದು 48,670 ರೂಪಾಯಿಗೆ ಏರಿಕೆಯಾಗಿದೆ. ಮತ್ತು 1 ಕೆಜಿ ಬೆಳ್ಳಿ ದರ ಬೆಂಗಳೂರಿನಲ್ಲಿ 71,500 ರೂಪಾಯಿ ಇದೆ.

ಕೊರೊನಾ ಸೋಂಕು ವ್ಯಾಪಕವಾಗಿ ಎಲ್ಲೆಡೆ ಹರಡುತ್ತಿರುವ ಕಾರಣದಿಂದಾಗಿ ಸರ್ಕಾರ ಲಾಕ್​ಡೌನ್​ ಮೊರೆ ಹೋಗಿದೆ. ಅಗತ್ಯ ವಸ್ತುಗಳ ಪೂರೈಕೆ ಜನರಿಗೆ ಸಿಗುವಂತೆ ಮಾಡಿ ಇನ್ನಿತರ ಎಲ್ಲಾ ಕಾರ್ಯ ಚಟುವಟಿಕೆಗಳನ್ನೂ ಬಂದ್​ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದ 14 ದಿನಗಳ ಕಾಲ ಲಾಕ್​ಡೌನ್​ ಜಾರಿಯಲ್ಲಿರುತ್ತದೆ. ಹೀಗಿರುವಾಗ, ತಾವು ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಲು ಇದು ಸರಿಯಾದ ಸಮಯ ಅಂದುಕೊಂಡವರಿಗೆ ಚಿನ್ನ, ಬೆಳ್ಳಿ ಕೊಳ್ಳಲು ಸಾಧ್ಯವಾಗುತ್ತಿಲ್ಲ. ಜನಸಂದಣಿ, ಜನ ಮುತ್ತಿಗೆಯಿಂದ ಸೋಂಕು ಹರಡುವಿಕೆ ಹೆಚ್ಚಾಗುತ್ತದೆ. ಅದರಲ್ಲಿಯೂ ಅಂಗಡಿಗಳಲ್ಲಿ ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಎಲ್ಲಾ ಅಂಗಡಿಗಳನ್ನು ಬಂದ್​ ಮಾಡುವಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಹೀಗಿರುವಾಗ ಚಿನ್ನದ ಬೇಡಿಕೆಯಲ್ಲಿ ಕುಸಿತ ಕಾಣುತ್ತಿದೆ. ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ಮಾಲೀಕರು ಅಭಿಪ್ರಾಯ ಹೊರಹಾಕಿದ್ದಾರೆ. ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಮಾಹಿತಿ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 45,110 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 45,100 ರೂಪಾಯಿಯಿಂದ 45,110 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,200 ರೂಪಾಯಿಯಿಂದ 49,210 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1 ಕೆಜಿ ಬೆಳ್ಳಿ ದರ 76,100 ರೂಪಾಯಿ ಇದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,990 ರೂಪಾಯಿಯಿಂದ 46,000 ರೂಪಾಯಿಗೆ ಏರಿಕೆಯಾಗಿದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,990 ರೂಪಾಯಿಯಿಂದ 47,000 ರೂಪಾಯಿಗೆ ಇಳಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 2,990 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 1ಕೆಜಿ ಬೆಳ್ಳಿ ದರ 71,500 ರೂಪಾಯಿ ಆಗಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿ ಇತ್ತು. ಇಂದು ಕೊಂಚ ದರ ಏರಿಕೆಯ ನಂತರದಲ್ಲಿ 44,610 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 48,660 ರೂಪಾಯಿ ಇದ್ದು ಇಂದು ದರ 49,180 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 520 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಹೈದರಾಬಾದ್​ನಲ್ಲಿ 1 ಕೆಜಿ ಬೆಳ್ಳಿ ದರ 76,100 ರೂಪಾಯಿ ಇದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,900 ರೂಪಾಯಿ ಇತ್ತು. ಇಂದು ದರ 44,910 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,900 ರೂಪಾಯಿಯಿಂದ 45,910 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1 ಕೆಜಿ ಬೆಳ್ಳಿ ದರ 71,500 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ

Published On - 8:38 am, Mon, 10 May 21