Gold Rate Today: ಸಿಲಿಕಾನ್​ ಸಿಟಿಯಲ್ಲಿ ಚಿನ್ನದ ಬೆಲೆ ಹೀಗಿದೆ; ದೆಹಲಿ, ಮುಂಬೈ ನಗರಗಳಲ್ಲಿ ದರ ಎಷ್ಟಿದೆ? ಇಲ್ಲಿದೆ ವಿವರ

Gold Price Today: ಚಿನ್ನ ಕೊಡಿಸುವತ್ತ ಯೋಚಿಸುತ್ತಿದ್ದರೆ ಚಿನ್ನದ ದರ ಎಷ್ಟಿದೆ? ನೀವು ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಬಹುದೇ ಎಂದೆಲ್ಲಾ ಯೋಚಿಸಲೇ ಬೇಕಲ್ಲವೇ? ಹಾಗಿದ್ದಾಗ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

Gold Rate Today: ಸಿಲಿಕಾನ್​ ಸಿಟಿಯಲ್ಲಿ ಚಿನ್ನದ ಬೆಲೆ ಹೀಗಿದೆ; ದೆಹಲಿ, ಮುಂಬೈ ನಗರಗಳಲ್ಲಿ ದರ ಎಷ್ಟಿದೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
shruti hegde
|

Updated on:Apr 23, 2021 | 9:34 AM

ಬೆಂಗಳೂರು: ಚಿನ್ನ ಕೊಳ್ಳಲು ಯಾರಿಗೆ ಇಷ್ಟವಿಲ್ಲ ಹೇಳಿ. ಚಿನ್ನಕ್ಕೆ ಮುಗಿಬೀಳುವವರೇ ಹೆಚ್ಚು. ಚಿನ್ನ ಕೊಡಿಸುವತ್ತ ಯೋಚಿಸುತ್ತಿದ್ದರೆ ಚಿನ್ನದ ದರ ಎಷ್ಟಿದೆ? ನೀವು ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಬಹುದೇ ಎಂದೆಲ್ಲಾ ಯೋಚಿಸಲೇ ಬೇಕಲ್ಲವೇ? ಹಾಗಿದ್ದಾಗ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 41,500 ರೂಪಾಯಿ ಇದೆ. ಏಪ್ರಿಲ್​ ತಿಂಗಳ ಪ್ರಾರಂಭದಿಂದಲೂ ಚಿನ್ನದ ದರ ಏರುತ್ತಲೇ ಸಾಗುತ್ತಿದೆ. ಇಂದು ಕೂಡಾ ದರದಲ್ಲಿ ಕೊಂಚ ಏರಿಕೆ ಕಂಡುಬಂದಿದೆ.

ಮಹಿಳೆಯರಿಗೆ ಚಿನ್ನವೆಂದರೆ ಇಷ್ಟ. ಮನೆಯಲ್ಲಿ ಚಿನ್ನ ಯಾವಾಗ ಕೊಡಿಸುತ್ತಾರೆ ಎಂದು ಕಾಯುತ್ತಿರುತ್ತಾರೆ. ಇನ್ನು ಕೆಲವರಿಗೆ ತಾವು ದುಡಿದ ಸ್ವಂತ ಹಣದಲ್ಲಿ ಚಿನ್ನ ಮಾಡಿಟ್ಟುಕೊಳ್ಳುವ ಆಸೆ. ಹಾಗಿದ್ದಾಗ ಇಂದಿನ ಚಿನ್ನದ ದರ ಗಮನಿಸಿ ಕೊಳ್ಳಲು ಸುಸಮಯ ಎಂದೆನಿಸಿದರೆ ಇಂದೇ ಚಿನ್ನಕೊಳ್ಳಿರಿ. ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ವಿವಿಧ ನಗರಗಳಲ್ಲಿನ ಚಿನ್ನದ ದರವನ್ನು ಗಮನಿಸಿದಾಗ ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 45,296 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,500 ರೂಪಾಯಿ ಆಗಿದೆ. ಹಾಗೆಯೇ ದೆಹಲಿ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,650 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,850 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 45,100 ರೂಪಾಯಿ ಅಗಿದೆ. ಅಂತೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,200 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,740 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,010 ಇದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರವನ್ನು ಗಮನಿಸಿದಾಗ 1 ಗ್ರಾಂ ಚಿನ್ನದ ದರ ನಿನ್ನೆ 4,485 ರೂಪಾಯಿಗೆ ಮಾರಾಟವಾಗಿತ್ತು. ಇಂದು ದರ ಏರಿಕೆಯ ನಂತರ 4,510 ರೂ. ಆಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 35,880 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ ಏರಿಕೆಯ ನಂತರ 36,080 ರೂಪಾಯಿ ಆಗಿದೆ. ಇನ್ನು, 10 ಗ್ರಾಂ ಚಿನ್ನದ ದರವನ್ನು ಗಮನಿಸಿದಾಗ ನಿನ್ನೆ 44,850 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 250 ರೂಪಾಯಿ ಏರಿಕೆಯ ನಂತರ 45,100 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರದಲ್ಲಿ 2,500 ರೂಪಾಯಿ ಏರಿಕೆಯಾಗಿದ್ದು, ನಿನ್ನೆ 4,48,500 ರೂಪಾಯಿ ಇದ್ದ ಚಿನ್ನದ ದರ ಇಂದು 4,51,000 ರೂಪಾಯಿಗೆ ಏರಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ದರವನ್ನು ಗಮನಿಸಿದಾಗ 1 ಗ್ರಾಂ ಚಿನ್ನದ ದರ ನಿನ್ನೆ 4,893 ರೂಪಾಯಿಗೆ ಮಾರಾಟವಾಗಿದೆ. ಇಂದು ದರ 4,920 ರೂಪಾಯಿಗೆ ಏರಿಕೆಯಾಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 39,144 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 39,360 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 216 ರೂಪಾಯಿ ಏರಿಕೆ ಕಂಡು ಬಂದಿದೆ. 10 ಗ್ರಾಂ ಚಿನ್ನದ ದರ ನಿನ್ನೆ 48,930 ರೂಪಾಯಿಗೆ ಮಾರಾಟವಾಗಿದೆ. ಇಂದು 270 ರೂಪಾಯಿ ಏರಿಕೆಯಿಂದ 49,200 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರವನ್ನು ಗಮನಿಸಿದಾಗ ಇಂದು ದರ 4,92,000 ರೂಪಾಯಿ ಇದೆ.

ಬೆಳ್ಳಿ ದರ ಮಾಹಿತಿ ಎರಡು ದಿನಗಳಿಂದ ಬೆಳ್ಳಿ ದರವೂ ಏರಿಕೆಯತ್ತ ಸಾಗುತ್ತಿದೆ. 1 ಗ್ರಾಂ ಬೆಳ್ಳಿ ದರ ಇಂದು 70.30 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 550.40 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 562.40 ರೂಪಾಯಿ ಆಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 688 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 703 ರೂಪಾಯಿ ಆಗಿದೆ. ದರ ಬದಲಾವಣೆಯಲ್ಲಿ 15 ರೂಪಾಯಿ ಏರಿಕೆ ಕಂಡುಬಂದಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,880 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 7,030 ರೂಪಾಯಿ ಆಗಿದೆ. 1ಕೆಜಿ ಬೆಳ್ಳಿ ನಿನ್ನೆ 68,800 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 70.300 ರೂ.ಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂಪಾಯಿ ಏರಿಕೆ ಕಂಡಿದೆ.

ಇದನ್ನೂ ಓದಿ: Gold Rate Today: ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಹೆಚ್ಚಳದ ಸಾಧ್ಯತೆ; ಬೆಂಗಳೂರು ಸೇರಿ ವಿವಿಧ ನಗರದ ಚಿನ್ನ,ಬೆಳ್ಳಿ ದರ ಹೀಗಿದೆ!

Published On - 9:34 am, Fri, 23 April 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ