Gold Rate Today: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಹೀಗಿದೆ; ದರ ವಿವರ ಇಲ್ಲಿದೆ
Gold Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,270 ರೂಪಾಯಿ ಇದೆ.
ಬೆಂಗಳೂರು: ಕಳೆದೆರಡು ವಾರದಿಂದ ಗಮನಿಸಿದರೆ ಚಿನ್ನದ ದರ ಏರುತ್ತಲೇ ಇದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,270 ರೂಪಾಯಿ ಇದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರವನ್ನು ಗಮನಿಸಿದಾಗ 46,400 ರೂಪಾಯಿ ಇದೆ. ಚೆನ್ನೈನಲ್ಲಿ 44,950 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,030 ರೂಪಾಯಿ ಆಗಿದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,070 ರೂಪಾಯಿ ಆಗಿದೆ.
ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಹೆಚ್ಚಳದ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ದಿನ ಸಾಗುತ್ತಿದ್ದಂತೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಲೇ ಇದೆ. ದೇಶದ ಆರ್ಥಿಕ ಪ್ರಗತಿ ಕೂಡಾ ಕುಸಿಯುತ್ತಿದೆ. ಕೊರೊನಾ ಸೋಂಕನ್ನು ಹೊಡೆದೋಡಿಸುವ ಪ್ರಯತ್ನದಲ್ಲಿ ದೇಶ ಹೋರಾಡುತ್ತಿದೆ. ಜೊತೆ ಜೊತೆಗೆ ಕುಗ್ಗಿ ಹೋದ ಆರ್ಥಿಕ ಪರಿಸ್ಥಿಯನ್ನೂ ಕೂಡಾ ಮೇಲೆತ್ತಬೇಕಾಗಿದೆ. ಮುಂಬರುವ ದಿನಗಳಲ್ಲಿ ಇದೇ ರೀತಿ ಚಿನ್ನದ ದರ ಏರಿಕೆಯತ್ತ ಆಗುತ್ತದೆಯೋ? ಎಂಬ ಪ್ರಶ್ನೆ ಉದ್ಭವವಾಗುತ್ತಿದ್ದಂತೆಯೇ ತಜ್ಞರು ಗ್ರಾಹಕರಿಗೆ ಆಘಾತಕಾರಿ ವಿಷಯವೊಂದನ್ನು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
22 ಕ್ಯಾರೆಟ್ ಚಿನ್ನದ ದರ 1 ಗ್ರಾಂ ಚಿನ್ನದ ದರ ನಿನ್ನೆ 4,817 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,827 ರೂಪಾಯಿ ಆಗಿದೆ. ದೈನಂದಿನ ದರ ಪರಿಶೀಲನೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 8 ಗ್ರಾಮ ಚಿನ್ನದ ದರ ನಿನ್ನೆ 38,536 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 38,616 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 4,81,700 ರೂಪಾಯಿಗೆ ಮಾರಾಟವಾಗಿದ್ದು ಇಂದು 4,82,700 ರೂಪಾಯಿಗೆ ಏರಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ದರ 1 ಗ್ರಾಂ ಚಿನ್ನದ ದರ ನಿನ್ನೆ 4,817 ರೂಪಾಯಿಗೆ ಮಾರಟವಾಗಿದ್ದು ಇಂದು ದರ 4,827 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 38,536 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 38,616 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 48,170 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 48,270 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ ನಿನ್ನೆ 4,81,700 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,82,700 ರೂಪಾಯಿ ಆಗಿದೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರವನ್ನು ಗಮನಿಸಿದರೆ ಇಂದು ಕೊಂಚ ಏರಿಕೆಯಾಗಿದೆ. 1 ಗ್ರಾಂ ಬೆಳ್ಳಿ ದರ ನಿನ್ನೆ 68.60 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 69.20 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 548.80 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 553.60 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 686 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 692 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ ನಿನ್ನೆ 6,860 ರೂಪಾಯಿಗೆ ಮಾರಾಟವಾಗುತ್ತಿದ್ದು, 6,920 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 68,600 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 69,200 ರೂಪಾಯಿ ಆಗಿದೆ. ದೈನಂದಿನ ದರ ವ್ಯತ್ಯಾಸದಲ್ಲಿ 600 ರೂಪಾಯಿ ಏರಿಕೆ ಕಂಡಿದೆ.
ಇದನ್ನೂ ಓದಿ: Gold Rate Today: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರ ಏರಿಕೆ; ಗ್ರಾಹಕರು ಕಂಗಾಲು!, ಬೆಂಗಳೂರಿನ ದರ ಇಲ್ಲಿದೆ