Gold Rate Today: ಚಿನ್ನ, ಬೆಳ್ಳಿ ದರ ಏರಿಕೆ.. ಆಭರಣ ಪ್ರಿಯರಿಗೆ ಮೇಲಿಂದ ಮೇಲೆ ನಿರಾಸೆ!

Gold Silver Price in Bangalore: ದಿನ ಸಾಗುತ್ತಿದ್ದಂತೆಯೇ ಚಿನ್ನದ ದರ ಏರುತ್ತಲೇ ಇದೆ. ಬೆಳ್ಳಿ ದರವೂ ಇಂದು ಏರಿಕೆಯಾಗಿದೆ. ಹಾಗಿದ್ದಲ್ಲಿ ವಿವಿಧ ನಗರಗಳಲ್ಲಿ ಚಿನ್ನದ ದರ ವಹಿವಾಟು ಹೇಗಿದೆ ಎಂಬುದರ ವಿವರ ಇಲ್ಲಿದೆ.

Gold Rate Today: ಚಿನ್ನ, ಬೆಳ್ಳಿ ದರ ಏರಿಕೆ.. ಆಭರಣ ಪ್ರಿಯರಿಗೆ ಮೇಲಿಂದ ಮೇಲೆ ನಿರಾಸೆ!
ಚಿನ್ನದ ಆಭರಣ (ಪ್ರಾತಿನಿಧಿಕ ಚಿತ್ರ)
Follow us
shruti hegde
|

Updated on:Apr 09, 2021 | 8:24 AM

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಏರಿಕೆಯಾಗಿದೆ. ಕಳೆದ ವಾರದಿಂದ ಚಿನ್ನದ ದರ ಏರುತ್ತಲೇ ಇದೆ. ಇಂದು ಬೆಂಗಳೂರಿಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,000 ರೂಪಾಯಿ ಇದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,900 ರೂಪಾಯಿಗೆ ಏರಿದೆ. ಬೆಳ್ಳಿ ದರವೂ ಇಂದು ಏರಿಕೆಯಾಗಿದ್ದು, 1ಕೆಜಿ ಬೆಳ್ಳಿ ದರ ಇಂದು 66,660 ರೂಪಾಯಿಗೆ ಏರಿಕೆಯಾಗಿದೆ.

ಹಾಗೆಯೇ ವಿವಿಧ ನಗರಗಳಲ್ಲಿ ಚಿನ್ನದ ದರವನ್ನು ಗಮನಿಸಿದಾಗ, ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ ಚಿನ್ನದ ದರ ಏರಿಕೆಯಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರ 44 ರೂಪಾಯಿ ಗಡಿ ದಾಟಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ದರ 48 ಸಾವಿರದ ಗಡಿ ಏರಿಕೆಯಾಗಿದೆ. ಚೆನ್ನೈನಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ದರ 42,970 ರೂಪಾಯಿಗೆ ಮಾರಾಟವಾಗಿದೆ. 24 ಕ್ಯಾರೆಟ್ ಚಿನ್ನದ ದರ 46,890 ರೂಪಾಯಿ ಆಗಿದೆ.

ಇನ್ನು, ಕೊಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44 ಸಾವಿರ ರೂಪಾಯಿ ಗಡಿ ದಾಟಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47 ಸಾವಿರದ ಆಸು-ಪಾಸಿನಲ್ಲಿದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ದರ 44,309 ರೂಪಾಯಿಗೆ ನಿನ್ನೆ ಮಾರಾಟವಾಗಿತ್ತು.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ 1 ಗ್ರಾಂ ಚಿನ್ನದ ದರ ಇಂದು 4,265 ರೂಪಾಯಿಗೆ ಮಾರಾಟವಾಗಿದ್ದು ಇಂದು 4,300 ರೂಪಾಯಿಗೆ ಜಿಗಿದಿದೆ. 8 ಗ್ರಾಂ ಚಿನ್ನದ ದರ ನಿನ್ನೆ 34,120 ರೂಪಾಯಿಗೆ ಮಾರಾಟವಾಗಿದ್ದು ಇಂದು 34,400 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 42,650 ರೂಪಾಯಿಗೆ ಮಾರಾಟವಾಗಿದ್ದು ಇಂದು 43,000 ರೂಪಾಯಿಗೆ ಜಿಗಿದಿದೆ. 100 ಗ್ರಾಂ ಚಿನ್ನದ ದರ ನಿನ್ನೆ 4,26,500 ರೂಪಾಯಿಗೆ ಮಾರಾಟವಾಗಿದ್ದು ಇಂದು 4,30,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,500 ರೂಪಾಯಿ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ ಮಾಹಿತಿ 1 ಗ್ರಾಂ ಚಿನ್ನದ ದರ ನಿನ್ನೆ 4,653 ರೂಪಾಯಿಗೆ ಮಾರಾಟವಾಗಿತ್ತು. ಇಂದು ದರ 4,690 ರೂಪಾಯಿಗೆ ಏರಿಕೆಯಾಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 37,520 ರೂಪಾಯಿಗೆ ಮಾರಾಟವಾಗಿದ್ದು ಇಂದು 37,520 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 46,530 ರೂಪಾಯಿಗೆ ಏರಿಕೆಯಾಗಿದ್ದು ಇಂದು ದರ 46,900 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ ನಿನ್ನೆ 4,65,300 ರೂಪಾಯಿಗೆ ಮಾರಾಟವಾಗಿದ್ದು ಇಂದು 4,69,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,700 ರೂಪಾಯಿ ಏರಿಕೆಯಾಗಿದೆ.

ಬೆಳ್ಳಿ ದರ ಮಾಹಿತಿ 1 ಗ್ರಾಂ ಬೆಳ್ಳಿ ದರ ನಿನ್ನೆ 66.30 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಏರಿಕೆಯ ನಂತರ 66.66 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 530.40 ರೂಪಾಯಿಗೆ ಮಾರಾಟವಾಗಿದ್ದು ಇಂದು 533.28 ರೂಪಾಯಿಗೆ ಏರಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 663 ರೂಪಾಯಿ ಇದ್ದು, ಇಂದು ದರ 666.60 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ನಿನ್ನೆ 6,630 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 6,666 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 66,300 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 66,660 ರೂಪಾಯಿಗೆ ಏರಿದೆ. ದೈನಂದಿನ ದರ ಬದಲಾವಣೆಯಲ್ಲಿ 360 ರೂಪಾಯಿ ಏರಿಕೆಯಾಗಿದೆ.

ಇದನ್ನೂ ಓದಿ: Gold Rate Today: ಇಂದೂ ಏರಿದೆ ಚಿನ್ನದ ಮೌಲ್ಯ.. ಇಲ್ಲಿದೆ ದರ ವಿವರ!

Gold Rate Today: ಅಮ್ಮನಿಗೆ ಚಿನ್ನದ ಉಡುಗೊರೆ ಕೊಡುವ ಮನಸ್ಸಿದೆಯೇ?‌ ಕೊಳ್ಳುವುದಾದರೆ ಇಂದಿನ ಚಿನ್ನದ ದರ ಗಮನಿಸಿ!

Published On - 8:21 am, Fri, 9 April 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ