ಆಟೋ, ಕ್ಯಾಬ್ ಚಾಲಕರಿಗೆ ಗುಡ್​ ​ನ್ಯೂಸ್: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಹೈಕೋರ್ಟ್‌ನ ಆದೇಶದ ಅನುಸಾರ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರ ಹಲವು ವರ್ಷಗಳ ಹೋರಾಟಕ್ಕೆ ಗೆಲುವಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಆಟೋ, ಕ್ಯಾಬ್ ಚಾಲಕರಿಗೆ ಗುಡ್​ ​ನ್ಯೂಸ್: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
Updated By: ಗಂಗಾಧರ​ ಬ. ಸಾಬೋಜಿ

Updated on: Apr 26, 2025 | 8:13 AM

ಬೆಂಗಳೂರು, ಏಪ್ರಿಲ್​ 26: ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: Bike Taxi: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಇದನ್ನೂ ಓದಿ
ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್​ ಅನುಮತಿ, ಸಿಎಂ ಸೇರಿ ಹಲವರಿಗೆ ಢವಢವ!
ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ
ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ
ಬೆಂಗಳೂರು: ಮಹಿಳಾ ಪ್ರಯಾಣಿಕರಿಗಾಗಿ ಬಂದಿದೆ ಉಬರ್ ಮಹಿಳಾ ಬೈಕ್ ಟ್ಯಾಕ್ಸಿ

1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು.

ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಅಪ್ಲಿಕೇಶನ್ ಆಧಾರಿತ ಪ್ಲಾಟ್‌ಫಾರ್ಮ್‌ಗಳಿಗೆ ನಿಯಮಗಳ ಕೊರತೆಯೂ ಬಳಕೆದಾರರಲ್ಲಿ ಅಸುರಕ್ಷತೆ ಹೆಚ್ಚಿಸಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಪ್ರಯಾಣಿಕರಿಗಾಗಿ ಬಂದಿದೆ ಉಬರ್ ಮಹಿಳಾ ಬೈಕ್ ಟ್ಯಾಕ್ಸಿ

ಸದ್ಯ ಹೈಕೋರ್ಟ್ ಆದೇಶ ‌ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ನಿನ್ನೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟವು ಬೈಕ್ ಟ್ಯಾಕ್ಸಿಗಳನ್ನು ನಿಲ್ಲಿಸುವಂತೆ ಆದೇಶ ಮಾಡಲು ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.