ಬಿಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್; ಹೊಸ ಕಾರ್ಡ್ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಸಾಧ್ಯತೆ
BPL Card; ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಕಾರ್ಡ್ಗಳನ್ನು ವಿತರಣೆ ಮಾಡಿದರೆ, ಹೊಸ ಕಾರ್ಡ್ಗಳಿಗೆ ಅವಕಾಶ ನೀಡಬಹುದಾಗಿದೆ. ಸದ್ಯ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲದೇ, ಅರ್ಜಿ ಸಲ್ಲಿಕೆ ಮಾಡಿದ ಕಾರ್ಡ್ಗಳೂ ಸಿಗದೆ ಜನ ರೋಸಿ ಹೋಗಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 9: ಬಿಪಿಎಲ್ ಕಾರ್ಡ್ದಾರರಿಗೆ (BPL Card) ಆಹಾರ ಇಲಾಖೆ (Food Department) ಗುಡ್ ನ್ಯೂಸ್ ನೀಡುವ ಸುಳಿವು ನೀಡಿದೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸಲ್ಲಿಕೆಯಾಗಿರುವ 3 ಲಕ್ಷ ಎಪಿಎಲ್ ಕಾರ್ಡ್ ಅರ್ಜಿಗಳಲ್ಲಿ ಶೇ 75ರ ದೃಢೀಕರಣ ಪೂರ್ಣಗೊಂಡಿದೆ. ಸದ್ಯದಲ್ಲೆ ಈ ಕಾರ್ಡ್ಗಳನ್ನು ವಿತರಣೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಕಾರ್ಡ್ಗಳನ್ನು ವಿತರಣೆ ಮಾಡಿದರೆ, ಹೊಸ ಕಾರ್ಡ್ಗಳಿಗೆ ಅವಕಾಶ ನೀಡಬಹುದಾಗಿದೆ. ಸದ್ಯ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲದೇ, ಅರ್ಜಿ ಸಲ್ಲಿಕೆ ಮಾಡಿದ ಕಾರ್ಡ್ಗಳೂ ಸಿಗದೆ ಜನ ರೋಸಿ ಹೋಗಿದ್ದಾರೆ.
ಈ ಮಧ್ಯೆ, ಬಿಪಿಎಲ್ ಕಾರ್ಡ್ಗಳಲ್ಲಿ ಮೃತಪಟ್ಟಿರುವ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿಸುವುದಲ್ಲದೇ ಆಹಾರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಬಳಸುತ್ತಿದ್ದ ಫಲಾನುಭವಿಗಳನ್ನ ಪತ್ತೆ ಮಾಡಲಾಗುತ್ತಿದೆ. ಕಳೆದ ತಿಂಗಳಷ್ಟೇ 5 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದು ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಮಿತಿಯನ್ನು ಮೀರಿದ್ದರಿಂದ ಹೊಸ ಆರ್ಜಿ ಸಲ್ಲಿಕೆಗೆ ಅವಾಕಾಶ ನೀಡಿರಲಿಲ್ಲ.
ಇದನ್ನೂ ಓದಿ: ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್!
ಇತ್ತೀಚೆಗಷ್ಟೇ ತಿದ್ದುಪಡಿಗೆ ಅವಕಾಶ ನೀಡಿದ್ದ ಸರ್ಕಾರ
ಬಿಪಿಎಲ್ ಕಾರ್ಡ್ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ ಎಂಬುದು ದಾಖಲೆಗಳಿಂದ ತಿಳಿದುಬಂದಿತ್ತು. ಹೀಗಾಗಿ ಸರ್ಕಾರ ತಿದ್ದುಪಡಿಗೆ ಅವಕಾಶ ನೀಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ