ಬರದಿಂದ ಕಂಗೆಟ್ಟಿದ್ದ ಕರ್ನಾಟಕಕ್ಕೆ ಶುಭ ಸುದ್ದಿ: ಮುಂಗಾರು ಶುರುವಾದ 10 ದಿನಗಳಲ್ಲಿ ಶೇ 80ರಷ್ಟು ಹೆಚ್ಚುವರಿ ಮಳೆ

Monsoon Rain in Karnataka: 2023 ರಲ್ಲಿ ಜೂನ್ 1-14 ರ ಅವಧಿಯಲ್ಲಿ ಶೇ 66 ರಷ್ಟು ಮಳೆ ಕೊರತೆಯಾಗಿತ್ತು. ಈ ವರ್ಷ ಮುಂಗಾರು ಮಳೆ ಚೆನ್ನಾಗಿ ಸುರಿಯುತ್ತಿದೆ. ಮೊದಲ ಹತ್ತು ದಿನಗಳಲ್ಲಿ ವಾಡಿಕೆಗಿಂತ ಹೆಚ್ಚೇ ಮಳೆಯಾಗಿದೆ. ಆದರೆ, ಮೂರು ದಿನಗಳ ನಂತರ, ಮಳೆ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಸುಳಿವು ನೀಡಿದ್ದಾರೆ.

ಬರದಿಂದ ಕಂಗೆಟ್ಟಿದ್ದ ಕರ್ನಾಟಕಕ್ಕೆ ಶುಭ ಸುದ್ದಿ: ಮುಂಗಾರು ಶುರುವಾದ 10 ದಿನಗಳಲ್ಲಿ ಶೇ 80ರಷ್ಟು ಹೆಚ್ಚುವರಿ ಮಳೆ
ಬರದಿಂದ ಕಂಗೆಟ್ಟಿದ್ದ ಕರ್ನಾಟಕಕ್ಕೆ ಶುಭ ಸುದ್ದಿ: ಮುಂಗಾರು ಶುರುವಾದ 10 ದಿನಗಳಲ್ಲಿ ಶೇ 80ರಷ್ಟು ಹೆಚ್ಚುವರಿ ಮಳೆ
Follow us
|

Updated on: Jun 11, 2024 | 10:30 AM

ಬೆಂಗಳೂರು, ಜೂನ್ 11: ಕಳೆದ ವರ್ಷ ಬಿರು ಬೇಸಗೆ ಹಾಗೂ ಬರದಿಂದ ಕಂಗೆಟ್ಟಿದ್ದ ಕರ್ನಾಟಕಕ್ಕೆ (Karnataka) ಈ ವರ್ಷ ಮುಂಗಾರು ಮಳೆ (Monsoon Rain) ಶುಭ ಸುದ್ದಿ ನೀಡಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾದ ಕೇವಲ ಹತ್ತು ದಿನಗಳಲ್ಲಿ ವಾಡಿಕೆಗಿಂತ ಶೇ 80ರಷ್ಟು ಹೆಚ್ಚುವರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಸಾಮಾನ್ಯ ಮಳೆಯ ಪ್ರಮಾಣ 47.6 ಮಿಮೀಗೆ ಬದಲಾಗಿ ರಾಜ್ಯದಲ್ಲಿ 85.6 ಮಿಮೀ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ಅನುಕ್ರಮವಾಗಿ ಶೇ 26, ಶೇ 3 ಮತ್ತು ಶೇ 30 ರಷ್ಟು ಕೊರತೆ ದಾಖಲಾಗಿದೆ. ಒಟ್ಟಾರೆಯಾಗಿ ಕರಾವಳಿ ಕರ್ನಾಟಕದಲ್ಲಿ ಶೇ 25ರಷ್ಟು ಅಧಿಕ ಮಳೆ ದಾಖಲಾಗಿದೆ. 155.6 ಮಿಮೀ ವಾಡಿಕೆ ಮಳೆಗೆ ವಿರುದ್ಧವಾಗಿ, ಈ ಪ್ರದೇಶದಲ್ಲಿ 192.4 ಮಿಮೀ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಶೇ 140 ರಷ್ಟು ಅಧಿಕ ಮಳೆ ದಾಖಲಾಗಿದೆ. ಈ ಪ್ರದೇಶದಲ್ಲಿ ವಾಡಿಕೆಯ 33 ಮಿಮೀ ಮಳೆಗೆ ಬದಲಾಗಿ 79.3 ಮಿಮೀ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ 82 ರಷ್ಟು ಅಧಿಕ ಮಳೆ ದಾಖಲಾಗಿದೆ. ಇಲ್ಲಿ ವಾಡಿಕೆಯ 38.5 ಮಿಮೀಗೆ ಬದಲಾಗಿ 70.2 ಮಿಮೀ ಮಳೆಯಾಗಿದೆ.

ವಿಜಯಪುರದಲ್ಲಿ ಗರಿಷ್ಠ ಶೇ 329 ರಷ್ಟು ಹೆಚ್ಚು ಮಳೆಯಾಗಿದೆ. ನಂತರ ಬೆಂಗಳೂರು ಗ್ರಾಮಾಂತರದಲ್ಲಿ ಶೇ 272 ರಷ್ಟು ಅಧಿಕ ಮಳೆ ದಾಖಲಾಗಿದೆ. ರಾಮನಗರ ಮತ್ತು ವಿಜಯನಗರದಲ್ಲಿ ಶೇ 222ರಷ್ಟು ಅಧಿಕ ಮಳೆ ದಾಖಲಾಗಿದೆ. ಉಡುಪಿಯಲ್ಲಿ ಶೇ 5ರಷ್ಟು ಅಧಿಕ ಮಳೆ ದಾಖಲಾಗಿದೆ.

ಬೆಂಗಳೂರು ನಗರ ಪ್ರದೇಶದಲ್ಲಿ ಶೇ 145ರಷ್ಟು ಅಧಿಕ ಮಳೆ ದಾಖಲಾಗಿದೆ. ಜೂನ್ 1-10ರವರೆಗೆ ವಾಡಿಕೆಯ 37 ಮಿಮೀ ಮಳೆಗೆ ಬದಲಾಗಿ 90.6 ಮಿಮೀ ಮಳೆಯಾಗಿದೆ.

ಇದನ್ನೂ ಓದಿ: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಜೋರಿರಲಿದೆ ವರುಣನ ಆರ್ಭಟ, ಆರೆಂಜ್​ ಅಲರ್ಟ್​

2023 ರಲ್ಲಿ ಜೂನ್ 1-14 ರ ಅವಧಿಯಲ್ಲಿ ಶೇ 66 ರಷ್ಟು ಮಳೆ ಕೊರತೆಯಾಗಿತ್ತು. ಈ ವರ್ಷ ಮುಂಗಾರು ಮಳೆ ಚೆನ್ನಾಗಿ ಸುರಿಯುತ್ತಿದೆ. ಆದರೆ, ಮೂರು ದಿನಗಳ ನಂತರ, ಮಳೆ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಸುಳಿವು ನೀಡಿದ್ದಾರೆ. ಪ್ರಸಕ್ತ ಮುಂಗಾರಿನ ಕೊನೆಯ ವರೆಗೂ ಹೆಚ್ಚುವರಿ ಮಳೆಯಾಗಬಹುದೇ ಎಂಬುದನ್ನು ಈಗಲೇ ಊಹಿಸಲಾಗದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್-ಪವಿತ್ರಾ ಗೌಡ ಅವರನ್ನು ನ್ಯಾಯಾಲಯಕ್ಕೆ ಕರೆತಂದ ವಿಡಿಯೋ
ದರ್ಶನ್-ಪವಿತ್ರಾ ಗೌಡ ಅವರನ್ನು ನ್ಯಾಯಾಲಯಕ್ಕೆ ಕರೆತಂದ ವಿಡಿಯೋ
ದರ್ಶನ್ ಕೇಸ್ನಲ್ಲಿ ಒತ್ತಡ ಹಾಕ್ತಿರೋ ಆ ಸಚಿವ ಯಾರು? ಜಾರಕಿಹೊಳಿ ಏನಂದ್ರು
ದರ್ಶನ್ ಕೇಸ್ನಲ್ಲಿ ಒತ್ತಡ ಹಾಕ್ತಿರೋ ಆ ಸಚಿವ ಯಾರು? ಜಾರಕಿಹೊಳಿ ಏನಂದ್ರು
ಸಫಾರಿ ಕಾರಿನಲ್ಲಿ ಬಂದು ಬಿಡಾಡಿ ದನ ಕಳ್ಳತನಕ್ಕೆ ಯತ್ನ; ವಿಡಿಯೋ ವೈರಲ್​
ಸಫಾರಿ ಕಾರಿನಲ್ಲಿ ಬಂದು ಬಿಡಾಡಿ ದನ ಕಳ್ಳತನಕ್ಕೆ ಯತ್ನ; ವಿಡಿಯೋ ವೈರಲ್​
ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
ಕೊಲೆಗಡುಕರಿಗೆ ಶಿಕ್ಷೆ ಆಗಲಿ; MLA ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ಕೊಲೆಗಡುಕರಿಗೆ ಶಿಕ್ಷೆ ಆಗಲಿ; MLA ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ಲಕ್ಷ ವೃಕ್ಷ ಯೋಜನೆಗೆ ಸಿದ್ದರಾಮಯ್ಯ ಚಾಲನೆ: 5ಕೋಟಿ ಗಿಡ ಬೆಳೆಸುವ ಗುರಿ
ಲಕ್ಷ ವೃಕ್ಷ ಯೋಜನೆಗೆ ಸಿದ್ದರಾಮಯ್ಯ ಚಾಲನೆ: 5ಕೋಟಿ ಗಿಡ ಬೆಳೆಸುವ ಗುರಿ
ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ