ಪ್ರತಿಷ್ಠಿತ ವಿವಿ ಅಧ್ಯಯನದಿಂದ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ಯಾನ್ಸರ್ ಕಾರಕವಲ್ಲ ಪ್ರತಿಬಂಧಕ!

ರಾಜ್ಯದ ಪ್ರತಿಷ್ಠಿತ ವಿವಿಯ ಅಧ್ಯಯನದಿಂದ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ದೊರೆತಿದೆ. ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಎಂದು ಅಧ್ಯಯನ ವರದಿ ಹೇಳಿದೆ. ಇದರಿಂದಾಗಿ ಕರಾವಳಿ, ಮಲೆನಾಡು ಭಾಗದ ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಅಧ್ಯಯನ ವರದಿ ಹೇಳಿದ್ದೇನು? ವಿವರ ಇಲ್ಲಿದೆ.

ಪ್ರತಿಷ್ಠಿತ ವಿವಿ ಅಧ್ಯಯನದಿಂದ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ಯಾನ್ಸರ್ ಕಾರಕವಲ್ಲ ಪ್ರತಿಬಂಧಕ!
ಅಡಿಕೆ (ಸಾಂದರ್ಭಿಕ ಚಿತ್ರ)
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on: Dec 18, 2024 | 8:27 AM

ಮಂಗಳೂರು, ಡಿಸೆಂಬರ್ 19: ಅಡಿಕೆ ಕ್ಯಾನ್ಸರ್​​ ಕಾರಕ ಎಂಬ ಇಂಟರ್​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್​​ಸಿ) ಮಾಹಿತಿ ಆಧಾರಿತ ವಿಶ್ವ ಅರೋಗ್ಯ ಸಂಸ್ಥೆಯ ವರದಿ, ಮುಖ್ಯವಾಗಿ ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಆದರೆ, ಇದೀಗ ರಾಜ್ಯದ ಪ್ರತಿಷ್ಠಿತ ವಿವಿಯೊಂದರ ಅಧ್ಯಯನ ವರದಿ ಭಿನ್ನವಾದುದನ್ನೇ ಹೇಳಿದೆ. ನಿಟ್ಟೆ ವಿವಿ‌ಯ ವಿಜ್ಞಾನಿ ಪ್ರ. ಇಡ್ಯಾ ಕರುಣಾಸಾಗರ್‌ ಮತ್ತವರ ತಂಡ ಮಹತ್ವದ ಸಂಶೋಧನೆ ನಡೆಸಿದ್ದು, ಅಡಿಕೆ ಕ್ಯಾನ್ಸರ್​ ಕಾರಕವಲ್ಲ. ಬದಲಿಗೆ ಕ್ಯಾನ್ಸರ್​ ಪ್ರತಿಬಂಧಕ ಅಂಶ ಅಡಿಕೆಯಲ್ಲಿದೆ ಎಂದು ತಿಳಿಸಿದೆ.

ಅಡಿಕೆ ರಸ ಕ್ಯಾನ್ಸರ್‌ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎಂಬುದನ್ನು ಪತ್ತೆ ಮಾಡಿರುವುದಾಗಿ ನಿಟ್ಟೆ ವಿವಿ‌ಯ ವಿಜ್ಞಾನಿಗಳ ತಂಡ ಪ್ರತಿಪಾದಿಸಿದೆ. ಅಡಿಕೆಯ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದಿದೆ.

ಸಮಗ್ರ ಅಧ್ಯಯನಕ್ಕೆ ಕ್ಯಾಂಪ್ಕೋ ಆಗ್ರಹ

ನಿಟ್ಟೆ ವಿವಿ‌ಯ ವಿಜ್ಞಾನಿಗಳ ತಂಡದ ಸಂಶೋಧನೆಯನ್ನು ಪರಿಗಣಿಸಿ ಅಡಿಕೆಯ ಬಗ್ಗೆ ಸಮಗ್ರ ಅಧ್ಯಯನವಾಗಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಕ್ಯಾಂಪ್ಕೋ ವಾದವೇನು?

ಅಡಿಕೆಯನ್ನು ಕ್ಯಾನ್ಸರ್ ಕಾರಕ ಎಂದು ಐಎಆರ್​ಸಿ ಅಧ್ಯಯನ ವರದಿ ಏಕಾಏಕಿ ವರ್ಗೀಕರಿಸಿತ್ತು. ಪಾನ್‌, ಪಾನ್‌ ಮಸಾಲಾ, ಗುಟ್ಕಾ ಇತ್ಯಾದಿ ಸೇವಿಸುವುದರಿಂದ ಉಂಟಾಗುವ ವಿಷಯವನ್ನು ಮುಖ್ಯವಾಗಿಟ್ಟುಕೊಂಡು ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗಿತ್ತು. ಆದರೆ, ಇದು ಪರಿಪೂರ್ಣ ಅಧ್ಯಯನ ಅಲ್ಲ ಎಂದು ಕ್ಯಾಂಪ್ಕೋ ವಾದಿಸಿತ್ತು.

ಬಹುರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋ, ಭಾರತದಾದ್ಯಂತ ಸಂಗ್ರಹಣೆ ಮತ್ತು ಮಾರುಕಟ್ಟೆ ಜಾಲವನ್ನು ಹೊಂದಿದೆ. ಅಡಿಕೆ, ಕೊಕ್ಕೊ, ರಬ್ಬರ್ ಮತ್ತು ಕಾಳುಮೆಣಸು ಮಾರಾಟ ಮತ್ತು ಸಂಸ್ಕರಣೆ ಮಾಡುತ್ತಿದೆ. ಹೀಗಾಗಿ ಕ್ಯಾಂಪ್ಕೋದ ಒತ್ತಡ ಹಿನ್ನಲೆ ಇದೀಗ ಕೇಂದ್ರ ಸರ್ಕಾರದಿಂದಲೂ ಅಡಿಕೆಯ ಮರು ಸಂಶೋಧನೆಗೆ ಒಪ್ಪಿಗೆ ದೊರೆತಿದೆ ಎನ್ನಲಾಗಿದೆ.

ಐಎಆರ್​ಸಿ ಅಧ್ಯಯನ ಮಾದರಿಗಳಲ್ಲಿ ಲೋಪ: ಕ್ಯಾಂಪ್ಕೋ ಆರೋಪ

ಐಎಆರ್​ಸಿ ಸಂಶೋಧನಾ ಅಧ್ಯಯನಗಳಿಗೆ ಬಳಸಿದ್ದ ಮಾದರಿಗಳಲ್ಲಿ ಲೋಪ ಕಂಡು ಬಂದಿದೆ ಎಂದು ಕ್ಯಾಂಪ್ಕೋ ಆರೋಪಿಸಿದೆ. ಇದೀಗ, ಇದರ ಸತ್ಯಾಸತ್ಯತೆಯ ಪರಾಮರ್ಶೆಗಾಗಿ ಅಧ್ಯಯನ ಕೈಗೊಳ್ಳಲು ಕೇಂದ್ರ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ.

ಕಾಸರಗೋಡು ಸಿಪಿಸಿಆರ್​ಐ ಉಸ್ತುವಾರಿಯಲ್ಲಿ ಅಧ್ಯಯನ

ಅಡಿಕೆಯ ಕುರಿತು ಹೆಚ್ಚಿನ ಸಂಶೋಧನೆಗೆ ಕಾಸರಗೋಡಿನಲ್ಲಿರುವ ಐಸಿಎಆರ್​ನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ಕೂಡ ಪ್ರಸ್ತಾವ ಸಲ್ಲಿಸಿತ್ತು. ಇದಕ್ಕೆ ಕೇಂದ್ರ ಕೃಷಿ ಸಚಿವಾಲಯದಿಂದ ತಾತ್ವಿಕ ಒಪ್ಪಿಗೆ ದೊರೆತಿದೆ. ಮೂರು ವರ್ಷಗಳ ಕಾಲ ನಡೆಯುವ ಈ ಅಧ್ಯಯನಕ್ಕೆ 9.90 ಕೋಟಿ ರೂ. ವೆಚ್ಚವಾಗಲಿದೆ. ಅಧ್ಯಯನಕ್ಕೆ ಅನುದಾನ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಹಣಕಾಸಿನ ನೆರವು ಲಭ್ಯವಾಗುತ್ತಿದ್ದಂತೆಯೇ ಸಿಪಿಸಿಆರ್‌ಐ ಉಸ್ತುವಾರಿಯಲ್ಲೇ ಅಧ್ಯಯನ ನಡೆಯಲಿದೆ.

ಅಡಿಕೆ ಬೆಳೆಗಾರರಿಗೆ ಆತಂಕ ಬೇಡ: ಕ್ಯಾಂಪ್ಕೋ

ಐಸಿಎಎಆರ್ ವರದಿ ಸತ್ಯಕ್ಕೆ ದೂರವಾದ ವಿಚಾರ. ಹೀಗಾಗಿ ಈ ಬಗ್ಗೆ ಅಡಿಕೆ ಬೆಳೆಗಾರರಿಗೆ ಆತಂಕ ಬೇಡ ಎಂದು ಕ್ಯಾಂಪ್ಕೋ ಅಭಯ ನೀಡಿದೆ. ನಾವು ನಿಟ್ಟೆ ವಿವಿ ಜೊತೆ ನಡೆಸಿದ ಸಂಶೋಧನೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬ ವರದಿ ಬಂದಿದೆ. ಕ್ಯಾನ್ಸರ್ ಗುಣ ಮಾಡುವ ಶಕ್ತಿ ಅಡಿಕೆಯಲ್ಲಿದೆ ಎಂದು ಮಂಗಳೂರಿನಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ ಹಡಗು ನಿರ್ಮಾಣ ಸಂಸ್ಥೆಯ ಮೈಲಿಗಲ್ಲು: ನಾರ್ವೆಗೆ ಹೊರಟಿತು ಬೃಹತ್ ಹಡಗು

ಕೆಂಪು ಅಡಿಕೆ ಮತ್ತು ಬಿಳಿ ಅಡಿಕೆ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಒಟ್ಟು ಸರ್ವೇಯಲ್ಲಿ ಅಡಿಕೆ ತಿನ್ನುವವರ ಸಂಖ್ಯೆ ಸಿಗಲಿಲ್ಲ. ಅದರ ಬಗ್ಗೆಯೂ ಅಧ್ಯಯನ ಮುಂದುವರೆದಿದೆ. ಚೆನ್ನೈನ ನಿವೃತ್ತ WHO ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಭೇಟಿ ಮಾಡಿದ್ದೇವೆ. ನಮ್ಮ ವರದಿ ಬಗ್ಗೆ ಸಕರಾತ್ಮಕ ಸ್ಪಂದನೆ ನೀಡಿದ್ದಾರೆ. ಆದರೆ ಮಾನ್ಯತೆ ಪಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಸಂಶೋಧನೆ ಮಾಡಿಸಿ ಎಂದಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯರು ಸಂಸತ್ತಿನಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಕೇಂದ್ರ ಆರೋಗ್ಯ ಸಚಿವರು ಪ್ರತ್ಯೇಕ ಸಂಶೋಧನೆ ಮಾಡುವ ಭರವಸೆ ನೀಡಿದ್ದಾರೆ. ಅಲ್ಲಿ ತನಕ ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನ ಒಪ್ಪದಿರಲು ನಿರ್ಧರಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಸರಿಯಾದ ಉತ್ತರ ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ