AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ತೆರಳುವ ಕರ್ನಾಟಕ ಭಕ್ತರಿಗೆ ಗುಡ್ ನ್ಯೂಸ್: ಕನ್ನಡಿಗರ ಕಾರ್ಯಕ್ರಮಗಳಿಗೆ ಸಿದ್ಧವಾಯ್ತು ಕಲ್ಯಾಣ ಮಂಟಪ

ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ತೆರಳುವ ಕರ್ನಾಟಕದ ಭಕ್ತರಿಗೆ ಸಿಹಿ ಸುದ್ದಿಯೊಂದನ್ನು ನೀಡಲಾಗಿದೆ. ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕದ ಛತ್ರವನ್ನು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಉದ್ಘಾಟಿಸಿದ್ದಾರೆ. ಇದರಿಂದ ಕರ್ನಾಟಕದಿಂದ ತಿರುಪತಿಗೆ ತೆರಳಿ ವಾಸ್ತವ್ಯ ಹೂಡಲು ಕನ್ನಡಿಗರಿಗೆಅನುಕೂಲ ಮಾಡಿಕೊಟ್ಟಂತಾಗಿದೆ.

ತಿರುಪತಿಗೆ ತೆರಳುವ ಕರ್ನಾಟಕ ಭಕ್ತರಿಗೆ ಗುಡ್ ನ್ಯೂಸ್: ಕನ್ನಡಿಗರ ಕಾರ್ಯಕ್ರಮಗಳಿಗೆ ಸಿದ್ಧವಾಯ್ತು ಕಲ್ಯಾಣ ಮಂಟಪ
Krishna Rajendra Kalyana Mantapa
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jun 24, 2025 | 3:35 PM

Share

ತಿರುಪತಿ, (ಜೂನ್ 24): ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್‌) `ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್’ ಕಲ್ಯಾಣ ಮಂಟಪವನ್ನು (Krishna Rajendra Kalyana Mantapa) ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಉದ್ಘಾಟಿಸಿದರು. ಇದರಿಂದ ಇನ್ಮುಂದೆ ಕರ್ನಾಟಕದವರು ತಿರುಮಲದಲ್ಲಿ (Tirumala) ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ.

Ramalinga Reddy (1)

ತಿರುಮಲದಲ್ಲಿ ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ತಿರುಮಲದಲ್ಲಿ ನಿರ್ಮಾಣವಾಗಿರುವ 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ VIP ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ವೇಳೆಗೆ ಪೂರ್ಷಗೊಳ್ಳಲಿದ್ದು, ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.

ಇದನ್ನೂ ಓದಿ: ನೀರಿನ ಬಾಟಲ್‌ ಸೇರಿದಂತೆ ದೇಗುಲಗಳಲ್ಲಿ ಪ್ಲಾಸ್ಟಿಕ್‌ ನಿಷೇಧ: ಎಂದಿನಿಂದ ಜಾರಿ?

ಸೆಪ್ಟೆಂಬರ್ ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕರ್ನಾಟಕ ಸರಕಾರದಿಂದ ನಿರ್ಮಾಣಗೊಂಡಿರುವ 36 ರೂಮುಗಳ VIP ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ಉದ್ಘಾಟನೆ ನಡೆಯಲಿದೆ. ಈ ಮೂಲಕ ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನಸಸಾಗಲಿದೆ ಎಂದು ಹೇಳಿದರು.

Krishna Rajendra Kalyana Mantapa (1)

ಈ ಕಲ್ಯಾಣ ಮಂಟಪ 500 ಆಸನಗಳ ಸಾಮರ್ಥ್ಯ ಹಾಗೂ 13 ಕೊಠಡಿಗಳನ್ನು ಒಳಗೊಂಡಿದೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ. ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ನಿರ್ಮಾಣ ತಿರುಮಲಕ್ಕೆ ಆಗಮಿಸುವ ಕರ್ನಾಟಕದ ಭಕ್ತರ ಅನುಕೂಲತೆಯತ್ತ ರಾಜ್ಯ ಸರ್ಕಾರ ಕೈಗೊಂಡ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಈ ಸೇವೆಯನ್ನು ಕರ್ನಾಟಕದ ಭಕ್ತರು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯ, ಮುಜರಾಯಿ ಇಲಾಖೆ ಆಯುಕ್ತರಾದ ಎಂ. ವಿ ವೆಂಕಟೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.