ಕರ್ನಾಟಕ ಪೊಲೀಸರಿಗೆ ಗುಡ್​ ನ್ಯೂಸ್​: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ

2023ರಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಂದು ಗುಂಪು ವಿಮಾ ಮೊತ್ತವನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆಯೇ ಇದೀಗ ಪೊಲೀಸರಿಗೆ 20 ಲಕ್ಷದಿಂದ 50 ಲಕ್ಷಕ್ಕೆ ವಿಶೇಷ ಗುಂಪು ವಿಮಾ ಯೋಜನೆ ಮೊತ್ತ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಪೊಲೀಸರಿಗೆ ಗುಡ್​ ನ್ಯೂಸ್​: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ
ಕರ್ನಾಟಕ ಪೊಲೀಸರಿಗೆ ಗುಡ್​ ನ್ಯೂಸ್​: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 18, 2024 | 7:57 PM

ಬೆಂಗಳೂರು, ಅಕ್ಟೋಬರ್​ 18: ಪೊಲೀಸರಿಗೆ (police) ವಿಶೇಷ ಗುಂಪು ವಿಮಾ ಯೋಜನೆ ಮೊತ್ತವನ್ನು 20 ಲಕ್ಷದಿಂದ ರೂ. 50 ಲಕ್ಷಕ್ಕೆ ಹೆಚ್ಚಳ ಮಾಡಿ ಶುಕ್ರವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕದ ಪೊಲೀಸ್​ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್​ ನೀಡಲಾಗಿದೆ.

2023ರಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಂದು ಗುಂಪು ವಿಮಾ ಮೊತ್ತವನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆ ಮೂಲಕ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಸಕಾರಾತ್ಮಕ ಬೆಂಬಲವನ್ನು ವ್ಯಕ್ತಪಡಿಸಲಾಗಿತ್ತು.

ಇದನ್ನೂ ಓದಿ: ಕೆ‌ಎಸ್‌ಆರ್‌ಟಿಸಿ 63ನೇ ಸಂಸ್ಥಾಪನಾ ದಿನಾಚರಣೆ: ಕರ್ತವ್ಯದಲ್ಲಿದ್ದಾಗ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ ಚೆಕ್ ವಿತರಣೆ

ಇದೀಗ ಭರವಸೆಯಂತೆ ಸರ್ಕಾರ ವಿಶೇಷ ಗುಂಪು ವಿಮಾ ಯೋಜನೆ ಮೊತ್ತ ಹೆಚ್ಚಳ ಮಾಡಿದೆ. ಕರ್ತವ್ಯದಲ್ಲಿರುವಾಗ ಪೊಲೀಸರು ಮೃತಪಟ್ಟರೆ ಈ ವಿಶೇಷ ಗುಂಪು ವಿಮಾ ನೀಡಲಾಗುತ್ತದೆ. ಫಾಲೋವರ್, ಪಿಸಿಯಿಂದ ಡಿಜಿ & ಐಜಿಪಿವರೆಗೂ ಅನ್ವಯವಾಗಲಿದೆ.

ಪೊಲೀಸ್​ ಅಧಿಕಾರಿಗಳು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುತ್ತಾರೆ. ಹಾಗಾಗಿ ಅವರು ಮತ್ತು ಅವರ ಕುಟುಂಬಗಳ ಕಲ್ಯಾಣವನ್ನು ಪರಿಗಣಿಸುವುದು ಮುಖ್ಯವಾಗುತ್ತದೆ. ಹಾಗಾಗಿ ಕಾನೂನು ಸುವ್ಯವಸ್ಥೆಯನ್ನು ರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದ ಏಳಿಗೆಗೆ ಸರ್ಕಾರ ಪ್ರಥಮ ಆದ್ಯತೆ ಆಗಿದೆ.

ಇದನ್ನೂ ಓದಿ: ಅಪಘಾತದ ವಿಮಾ ಹಣ ನೀಡಲು ಕಂಪನಿ ನಿರಾಕರಣೆ; ವಿಚಾರಣೆ ನಡೆಸಿ ತಾಯಿ-ಮಗಳಿಗೆ 15 ಲಕ್ಷ ರೂ. ಕೊಡುವಂತೆ​ ಆಯೋಗ ಆದೇಶ

ಆ ಮೂಲಕ ಈ ಯೋಜನೆ ಮೂಲಕ ಅಧಿಕಾರಿ- ಸಿಬ್ಬಂದಿಗಳ ಮನೋಸ್ಥಿತಿಯನ್ನು ಸುಧಾರಿಸುವ ಮೂಲಕ, ಮುಂದೆ ಅವರು ಮಾಡುವ ಕರ್ತವ್ಯದಲ್ಲಿ ಹೆಚ್ಚು ಪ್ರೇರಣೆ ಸಿಗಲಿದೆ ಎನ್ನುವುದು ಸರ್ಕಾರ ನಿರೀಕ್ಷೆಯಾಗಿದೆ.

ಇನ್ನು ಇತ್ತೀಚೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಅಂದು ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಮೂರು ಕುಟುಂಬಕ್ಕೆ 1 ಕೋಟಿ ರೂ ಚೆಕ್​ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 pm, Fri, 18 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ