SSLC Exam: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣ ಉಚಿತ

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವವರಿಗೆ ಉಚಿತ ಪ್ರಯಾಣದ ಅವಕಾಶ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆ (SSLC Exam) ಬರೆಯಲು ತೆರಳುವ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಘೋಷಿಸಿದೆ.

SSLC Exam: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣ ಉಚಿತ
ಕೆಎಸ್​ಆರ್​ಟಿಸಿ ಬಸ್​

Updated on: Mar 21, 2023 | 7:39 PM

ಮುಖ್ಯಾಂಶಗಳು

  • ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿಯಿಂದ ಉಚಿತ ಪ್ರಯಾಣ
  • ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವವರಿಗೆ ಈಗಾಗಲೇ ಉಚಿತ ಪ್ರಯಾಣ ಸೌಲಭ್ಯ
  • ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವವರಿಗೆ ಉಚಿತ ಪ್ರಯಾಣದ ಅವಕಾಶ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆ (SSLC Exam) ಬರೆಯಲು ತೆರಳುವ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಘೋಷಿಸಿದೆ. ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 15ರ ವರೆಗೆ ನಡೆಯಲಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್​ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.

ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉಚಿತವಾಗಿ ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ತೆರಳುತ್ತಿದ್ದಾರೆ. ಮಾರ್ಚ್ 29ರ ವರೆಗೆ ಪಿಯುಸಿ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us