ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೆ ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಲ್ಲಿ ಶೇಕಡಾ 2 ಮೀಸಲಾತಿಯನ್ನು ಮಂಜೂರಾದ ವೃಂದಬಲದಲ್ಲಿ ನಿಗದಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆ ಮೂಲಕ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಬೆಂಗಳೂರು, ಸೆಪ್ಟೆಂಬರ್ 20: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ (athlete) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಲ್ಲಿ ಶೇ.2ರಷ್ಟು ಮಂಜೂರಾದ ಮೀಸಲಾತಿಯನ್ನು ವೃಂದಬಲದಲ್ಲಿ ನಿಗದಿಪಡಿಸುವ ಬಗ್ಗೆ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಇತ್ತೀಗೆಚೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡಾ 3ರಷ್ಟು ಮತ್ತು ಇತರೆ ಎಲ್ಲಾ ಇಲಾಖೆಗಳಲ್ಲಿ ಶೇಕಡಾ 2ರಷ್ಟು ಮೀಸಲಾತಿ ನೀಡುವ ಕರಡು ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ. ಶೀಘ್ರದಲ್ಲೇ ಅಂತಿಮ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಇದೀಗ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?
2016-17 ರಲ್ಲಿ ಮೊದಲ ಬಾರಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾಪವನ್ನು ಮುಂದಿಡಲಾಗಿತ್ತು. ಆದರೆ ಅದು ಸಾಕಾರಗೊಂಡಿರಲಿಲ್ಲ. ಈಗ ಅದನ್ನು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ನಮ್ಮ ಕ್ರೀಡಾಪಟುಗಳು ಒಲಿಂಪಿಕ್ಸ್ ಮತ್ತು ಇತರೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಬೇಕು. ಅಂತಹ ವಾತಾವರಣವನ್ನು ಸೃಷ್ಟಿಸಲು ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದರು.
ಇದನ್ನೂ ಓದಿ: ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ
ಎ ಮತ್ತು ಬಿ ಗುಂಪುಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗಿದ್ದು, ಪೂರ್ವ ವಿಶ್ವವಿದ್ಯಾಲಯದಲ್ಲಿ ಉತ್ತೀರ್ಣರಾದವರಿಗೆ ಸಿ ಮತ್ತು ಡಿ ಗುಂಪುಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:27 pm, Fri, 20 September 24