ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಸಿಹಿ ಸುದ್ದಿ: ಪರಿಹಾರ ಹಣದ ಜತೆಗೆ ಹೊಸ ಮನೆ

ವರುಣಾರ್ಭಟಕ್ಕೆ ಕರ್ನಾಟಕ ಥರಗುಟ್ಟಿದೆ. ನದಿಗಳ ಪ್ರವಾಹದ ಹೊಡೆತಕ್ಕೆ ಜನಜೀವನವೇ ಅಲ್ಲೋಲ ಕಲ್ಲೋಲವಾಗಿದೆ. ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸಂಭವಿಸಿವೆ. ನದಿಗಳ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸಚಿವ ಕೃಷ್ಣಭೈರೇಗೌಡ ಗುಡ್​ ನ್ಯೂಸ್​ ನೀಡಿದ್ದಾರೆ. 2.5 ಲಕ್ಷ ರೂ. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.

ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಸಿಹಿ ಸುದ್ದಿ: ಪರಿಹಾರ ಹಣದ ಜತೆಗೆ ಹೊಸ ಮನೆ
ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಸಿಹಿ ಸುದ್ದಿ: ಪರಿಹಾರ ಹಣದ ಜತೆಗೆ ಹೊಸ ಮನೆ
Follow us
Gopal AS
| Updated By: ಗಂಗಾಧರ​ ಬ. ಸಾಬೋಜಿ

Updated on: Jul 31, 2024 | 6:46 PM

ಕೊಡಗು, ಜುಲೈ 31: ನದಿಗಳ ಪ್ರವಾಹದಿಂದ (flood) ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂ. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡುತ್ತೇವೆ ಎಂದು ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಶಾಲನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಶೀಘ್ರವೇ ನಾವು ಆದೇಶವನ್ನು ಹೊರಡಿಸುತ್ತೇವೆ ಎಂದು ಹೇಳಿದ್ದಾರೆ.

ವಯನಾಡಿನಲ್ಲಿ ಆಗಿದ್ದು ನಮ್ಮ ರಾಜ್ಯದದಲ್ಲೂ ಆಗಬಹುದು: ಕೃಷ್ಣಭೈರೇಗೌಡ 

ವಯನಾಡು ದುರಂತಕ್ಕೆದ ಬಗ್ಗೆ ಪ್ರತಿಕ್ರಿಯಿಸಿದ್ದು, ವಯನಾಡಿನಲ್ಲಿ ಆಗಿದ್ದು ನಮ್ಮ ರಾಜ್ಯದದಲ್ಲೂ ಆಗಬಹುದು. ಪರಿಸರದ‌ ಮೇಲೆ ಆಗುತ್ತಿರೋ ಹಾನಿ ನಾವು ಗಮನಿಸುತ್ತಿಲ್ಲ. ಸಿಕ್ಕ ಸಿಕ್ಕ ಕಡೆ ರಸ್ತೆ ಮಾಡುತ್ತಿದ್ದೇವೆ, ಮರ ಕಡಿಯುತ್ತೇವೆ. ನಮ್ಮ ಕಾಲಿಗೆ ನಾವೇ ಕೊಡಲಿ ಹಾಕ್ತಿದ್ದೇವೆ. ಇವೆಲ್ಲದರ ಸಂಘಟಿತ ಪ್ರತಿಫಲವೇ ವಯನಾಡಲ್ಲಿ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ನಮ್ಮ ಆಸೆ ದುರಾಸೆಗಳಿಗೆ ನಾವು ಇತಿಮಿತಿ ಹಾಕಬೇಕಿದೆ. ಎಲ್ಲಿ ದುರ್ಘಟನೆ ಆಗುತ್ತೆಂದು ಡಿಸಿಗಳು ಅಂದಾಜಿಸಬೇಕು. ಅಂಥ ಸ್ಥಳಗಲ್ಲಿ ಜನರನ್ನ ಬಲವಂತವಾಗಿ ತೆರವುಗೊಳಿಸಬೇಕು. ಜನ ಒಪ್ಪೋದಿಲ್ಲ ಅಂತ ಡಿಸಿಗಳು ನಿರ್ಲಕ್ಷ್ಯ ಮಾಡಬಾರದು. ನಮ್ಮ ಕೆಲವು ಡಿಸಿಗಳು ರಾಜಕಾರಣಿಗಳಿಗಿಂತ ಉದಾರ. ಪ್ರವಾಹ ದಾಟುವುದು, ಸೆಲ್ಫಿ ತೆಗೆಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಎಲ್ಲಾ ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ ನೀಡಿದ್ದಾರೆ.

ಕೇರಳದ ವಯನಾಡಿನಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮಿಪದ ಗುಹ್ಯ ಗ್ರಾಮದ 9 ವರ್ಷದ ಬಾಲಕ ರೋಹಿತ್ ಸಾವನ್ನಪ್ಪಿದ್ದಾನೆ. ತಾಯಿಯ ಜತೆ ವಯನಾಡಿಗೆ ಸಂಬಂಧಿಕರ‌ ಮನೆಗೆ  ರೋಹಿತ್ ತೆರಳಿದ್ದ. ಮೃತ ರೋಹಿತ್ ತಾಯಿ ಕವಿತಾ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಸದ್ಯ ಕೇರಳದ ವಯನಾಡಿಗೆ ಕವಿತಾ ಪತಿ ರವಿ ತೆರಳಿದ್ದಾರೆ.

ಇದನ್ನೂ ಓದಿ: ಶಿರಾಡಿ ಘಾಟ್​​ನಲ್ಲಿ ಮಣ್ಣು ತೆರವು: ಚಿಕ್ಕಮಗಳೂರಿನಲ್ಲಿ ಸಾಲು ಸಾಲು ಗುಡ್ಡ ಕುಸಿತ, ಹೆಚ್ಚಾದ ಆತಂಕ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್​ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ನೀಡಿದ ಸಚಿವ ಕೃಷ್ಣಭೈರೇಗೌಡ ಪರಿಶೀಲನೆ ಮಾಡಿದ್ದಾರೆ. ಹಾಸನ ಡಿಸಿ, ಎಸ್​​ಪಿ ಹಾಗೂ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ನಿನ್ನೆ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?