ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್

ಜನವರಿ 1ರಿಂದ ಋತುಚಕ್ರ ರಜೆ ಮಂಜೂರು ಮಾಡಲು ಸಾರಿಗೆ ಇಲಾಖೆ ಗ್ರೀನ್‌ಸಿಗ್ನಲ್ ನೀಡಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಗುಡ್‌ನ್ಯೂಸ್​​ ಸಿಕ್ಕಿದೆ. ಪ್ರತಿ ತಿಂಗಳು ಒಂದು ದಿನ ರಜೆ ಪಡೆಯಬಹುದಾಗಿದೆ. ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್
ಋತುಚಕ್ರದ ರಜೆ
Edited By:

Updated on: Dec 23, 2025 | 6:53 PM

ಬೆಂಗಳೂರು, ಡಿಸೆಂಬರ್​​ 23: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ (Menstrual Leave) ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ ನಾಲ್ಕು ನಿಗಮದ ಮಹಿಳಾ ನೌಕರರಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಗುಡ್ ನ್ಯೂಸ್​​ ಸಿಕ್ಕಿದೆ.

ಆದೇಶದಲ್ಲೇನಿದೆ?

ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿದೆ.

ಇದನ್ನೂ ಓದಿ: ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್

ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 01 ಜನವರಿ 2026ರಿಂದ ಜಾರಿಗೆ ಬರುತ್ತಿದ್ದು, ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಷರತ್ತುಗಳೇನು?

  • ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
  • ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
  • ಈ ರಜೆಯನ್ನು ರಜೆ ಅಥವಾ ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
  • ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸಬಾರದು. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ಅವಕಾಶವಿರುವುದಿಲ್ಲ. ಸಂಬಂಧಪಟ್ಟವರೆಲ್ಲರೂ ಆದೇಶಕ್ಕೆ ತಕ್ಕಂತೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.