ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್; ಇಲ್ಲಿದೆ ವಿವರ

Good news for BPL card holders; ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Edited By:

Updated on: Sep 20, 2023 | 6:38 PM

ಬೆಂಗಳೂರು, ಸೆಪ್ಟೆಂಬರ್ 20: ಬಿಪಿಎಲ್ ಕಾರ್ಡ್​​ದಾರರಿಗೆ (BPL Card Holders) ಆಹಾರ ಇಲಾಖೆ (Karnataka Food Department) ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು.

ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

ತಿದ್ದಪಡಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ತಿದ್ದುಪಡಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 117646 ಅರ್ಜಿಗಳ ತಿದ್ದುಪಡಿಗೆ ಅನುಮತಿ ನೀಡಿದ್ದಾರೆ.

ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಇದರ ಬೆನ್ನಲ್ಲೇ ತಿದ್ದುಪಡಿ ಅರ್ಜಿಗಳಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್​​​​ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್; ಹೊಸ ಕಾರ್ಡ್​​ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಸಾಧ್ಯತೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಮಹಿಳೆಯರು ವಂಚಿತರಾಗುತ್ತಿರುವುದನ್ನು ತಪ್ಪಿಸಲು ಬಿಪಿಎಲ್ ಕಾರ್ಡ್​​ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್​​​ದಾರರ ಪೈಕಿ ಪುರುಷ ಮುಖ್ಯಸ್ಥರು ಇದ್ದಾರೆ. ಹೀಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ