AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

KMF Nandini milk price reduced: ಕೇಂದ್ರದಿಂದ ಶೇ.12ರಿಂದ 5ಕ್ಕೆ ಜಿಎಸ್​​ಟಿ ಕಡಿತ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಕೆಎಂಎಫ್​​ ತನ್ನ ನಂದಿನಿ ಹಾಲಿನ ಕೆಲ ಉತ್ಪನ್ನಗಳ ದರ ಇಳಿಕೆ ಮಾಡಿದೆ. ಸೋಮವಾರದಿಂದ ಹೊಸ ದರ ಜಾರಿಗೆ ಕೆಎಂಎಫ್​ ಪ್ಲ್ಯಾನ್ ಮಾಡಿದೆ. ಯಾವುದರ ದರ ಎಷ್ಟು ಇಳಿಕೆ ಅನ್ನೋದು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ
ನಂದಿನ ಉತ್ಪನ್ನಗಳು
ಶಾಂತಮೂರ್ತಿ
| Edited By: |

Updated on:Sep 20, 2025 | 8:43 AM

Share

ಬೆಂಗಳೂರು, ಸೆಪ್ಟೆಂಬರ್​ 20: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್​​ (KMF) ಗುಡ್​​ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

ಜಿಎಸ್​​ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್​​ ಈ ಬಗ್ಗೆ ಶುಕ್ರವಾರ ಕೆಎಂಎಫ್​​ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್​ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ.

ಇದನ್ನೂ ಓದಿ: ಗುಡ್​ ನ್ಯೂಸ್: ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಇಳಿಕೆ ಸಾಧ್ಯತೆ

2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್​​ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್​ಟಿಯನ್ನ ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆ. 22ರಿಂದ ಜಾರಿಗೆ ಬರಲಿದೆ. ಆ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: ಜಿಎಸ್​ಟಿ ಕಡಿತದ ಎಫೆಕ್ಟ್; ಮದರ್ ಡೈರಿ ಹಾಲು ಬೆಲೆ 2 ರೂ, ತುಪ್ಪದ ಬೆಲೆ 30 ರೂ ಇಳಿಕೆ

ಕರ್ನಾಟಕದ ಸ್ಟಾರ್ ಬ್ರ್ಯಾಂಡ್ ಕೆಎಂಎಫ್​​ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಎಲ್ಲೆಡೆ ಭಾರೀ ಬೇಡಿಕೆ ಇದೆ. ಇತ್ತೀಚೆಗೆ ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂ. ಏರಿಕೆ ಮಾಡಲಾಗಿತ್ತು. ಅದೇ ರೀತಿಯಾಗಿ ಮೊಸರಿನ ದರ ಕೂಡ ಪ್ರತಿ ಲೀಟರ್​​ಗೆ 4 ರೂ. ಏರಿಕೆ ಮಾಡಲಾಗಿತ್ತು. ಸದ್ಯ ಈ ನಾಲ್ಕು ರೂ. ಅನ್ನು ಕೆಎಂಎಫ್​ ಕಡಿತಕ್ಕೆ ನಿರ್ಧರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 am, Sat, 20 September 25

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!