Groundwater Level: ಕರ್ನಾಟಕದ ಹಲವೆಡೆ ಅಂತರ್ಜಲ ಮಟ್ಟ ಹೆಚ್ಚಳ; ವರದಿ

ಕೋಲಾರದಲ್ಲಿ ಅತಿ ಹೆಚ್ಚು ಅಂದರೆ 50.12 ಮೀಟರ್‌ಗಳಷ್ಟು ಅಂತರ್ಜಲ ಹೆಚ್ಚಿದೆ ಎಂದು ವರದಿ ಹೇಳಿದೆ. ಅಂತರ್ಜಲ ಕುಸಿತ ಕಂಡಿರುವ ಪೈಕಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಅಗ್ರಸ್ಥಾನದಲ್ಲಿದೆ.

Groundwater Level: ಕರ್ನಾಟಕದ ಹಲವೆಡೆ ಅಂತರ್ಜಲ ಮಟ್ಟ ಹೆಚ್ಚಳ; ವರದಿ
ಸಾಂದರ್ಭಿಕ ಚಿತ್ರ

Updated on: Jul 16, 2023 | 2:53 PM

ಬೆಂಗಳೂರು, ಜುಲೈ 16: ಕೆರೆಗಳು, ಟ್ಯಾಂಕ್‌ಗಳ ಪುನರುಜ್ಜೀವನ ಮತ್ತು ಮುಚ್ಚಿಹೋಗಿರುವ ನೀರಿನ ಕಾಲುವೆಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳು ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ ಅಂತರ್ಜಲ ಮಟ್ಟವನ್ನು (Groundwater level) ಹೆಚ್ಚಿಸಲು ನೆರವಾಗಿದೆ. ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಇತ್ತೀಚಿನ ವರದಿಯ ಪ್ರಕಾರ, 10 ವರ್ಷಗಳ ಅವಧಿಯಲ್ಲಿ ರಾಜ್ಯದ 201 ಸ್ಥಳಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. 2022 ರವರೆಗಿನ ಲೆಕ್ಕಾಚಾರ ಪ್ರಕಾರ 233 ತಾಲ್ಲೂಕುಗಳಲ್ಲಿ 32 ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಕುಸಿತ ಕಂಡಿದೆ ಎಂದು ವರದಿಯಾಗಿದೆ.

ಉಭಯ ಇಲಾಖೆಗಳು ಆಯ್ದ ತಾಲ್ಲೂಕುಗಳಲ್ಲಿ 10 ವರ್ಷಗಳ ಅವಧಿಯಲ್ಲಿ ಸಂಗ್ರಹಿಸಿದ ದತ್ತಾಂಶವನ್ನು ಮೌಲ್ಯಮಾಪನ ಮಾಡಿವೆ. ಕೋಲಾರ, ಚನ್ನಪಟ್ಟಣ ಮತ್ತಿತರ ತಾಲೂಕುಗಳಲ್ಲಿ ಕೆರೆ, ಟ್ಯಾಂಕುಗಳ ಪುನರುಜ್ಜೀವನಗೊಳಿಸಿ ನೀರು ತುಂಬಿಸುವ ಕಾಮಗಾರಿ ಮಾಡಿರುವುದು ಹಾಗೂ ಮುಚ್ಚಿಹೋಗಿರುವ ನಾಲೆಗಳನ್ನು ತೆರವುಗೊಳಿಸಿ ಜಲಾವೃತ ಪ್ರದೇಶಗಳಿಂದ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ನಂತರ ಅಂತರ್ಜಲ ಮಟ್ಟ ಹೆಚ್ಚಿದೆ ಎಂದು ಪ್ರಾಧಿಕಾರದ ನಿರ್ದೇಶಕ ರಾಮಚಂದ್ರಯ್ಯ ತಿಳಿಸಿರುವುದಾಗಿ ‘ನ್ಯೂ ಸಂಡೆ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ರಾಜ್ಯ ಸರಕಾರ, ಗ್ರಾಮ ಪಂಚಾಯಿತಿಗಳು ಹಾಗೂ ಸ್ಥಳೀಯ ಪರಿಸರ ಹೋರಾಟಗಾರರ ಒಗ್ಗಟ್ಟಿನಿಂದ ಇದು ಸಾಧ್ಯವಾಗಿದೆ. ಅಂತರ್ಜಲ ಮಟ್ಟವನ್ನು ಕೂಲಂಕಷವಾಗಿ ಅಧ್ಯಯನ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕೋಲಾರದಲ್ಲಿ ಅತಿ ಹೆಚ್ಚು ಅಂದರೆ 50.12 ಮೀಟರ್‌ಗಳಷ್ಟು ಅಂತರ್ಜಲ ಹೆಚ್ಚಿದೆ ಎಂದು ವರದಿ ಹೇಳಿದೆ. ಅಂತರ್ಜಲ ಕುಸಿತ ಕಂಡಿರುವ ಪೈಕಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಅಗ್ರಸ್ಥಾನದಲ್ಲಿದೆ. ತಾಲೂಕಿನಲ್ಲಿ ಅಂತರ್ಜಲ ಮಟ್ಟ 7.42 ಮೀಟರ್ ಮಟ್ಟ ಕುಸಿದಿದೆ.

ಇದನ್ನೂ ಓದಿ: RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​

ಅಂತರ್ಜಲ ಮಟ್ಟ ಕುಸಿಯುತ್ತಿರುವ ಪ್ರದೇಶಗಳಲ್ಲಿ ಸಂಪೂರ್ಣ ಅಧ್ಯಯನದ ಅಗತ್ಯವಿದೆ. ರಾಜ್ಯ ಮತ್ತು ಕೇಂದ್ರ ಅಂತರ್ಜಲ ಮಂಡಳಿಗಳು ಅಂತರ್ಜಲ ಮಟ್ಟ ಮತ್ತು ರಾಜ್ಯದ ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟದ ಸಾಮೂಹಿಕ ಅಧ್ಯಯನವನ್ನು ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿರುವುದಾಗಿ ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Sun, 16 July 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us