DA Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

DA Hike for Karnataka Govt Employees: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಿ (DA Hike) ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ (Dearness Allowance) 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ.

DA Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:May 30, 2023 | 5:18 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ (Karnataka Govt Employees) ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ (DA Hike) ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ (Dearness Allowance) 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಮತ್ತು ಅದರಲ್ಲಿ ಸ್ಥಗಿತ ವೇತನ ಬಡ್ತಿ, ಇತರೆ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಅದು, ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ನೀಡಲಾಗಿದ್ದಲ್ಲಿ ಅವುಗಳು ಸೇರಿರುತ್ತವೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸುವಂತಿಲ್ಲ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯುಜಿಸಿ / ಎಐಸಿಟಿಇ / ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಹಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಶಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಉತ್ತಮ ವ್ಯಕ್ತಿ, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ; ಡಿಕೆ ಶಿವಕುಮಾರ್

ಯುಜಿಸಿ / ಎಐಸಿಟಿಇ / ಐಸಿಎಆರ್‌ / ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಬೇಕು ಎಂದೂ ಸೂಚಿಸಲಾಗಿದೆ.

ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು, 2028ರ ಮೇ ತಿಂಗಳ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಬಾರದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Tue, 30 May 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!