ಕರ್ನಾಟಕದ ವಿವಿಧೆಡೆ ಉತ್ತಮ ಮಳೆ: ಕಲಬುರಗಿಯಲ್ಲಿ ಉಕ್ಕಿ ಹರಿದ ಹಳ್ಳ, ಉಡುಪಿಯಲ್ಲಿ ನಿರಂತರ ಮಳೆ

ಕರ್ನಾಟಕದಲ್ಲಿ ಇದೀಗ ಮಳೆ ಮತ್ತೆ ಚುರುಕಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.ನೀಡಿದೆ.

ಕರ್ನಾಟಕದ ವಿವಿಧೆಡೆ ಉತ್ತಮ ಮಳೆ: ಕಲಬುರಗಿಯಲ್ಲಿ ಉಕ್ಕಿ ಹರಿದ ಹಳ್ಳ, ಉಡುಪಿಯಲ್ಲಿ ನಿರಂತರ ಮಳೆ
ಕಲಬುರ್ಗಿ ನಗರದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 12, 2021 | 11:18 PM

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಮಳೆ ಉತ್ತಮ ಪ್ರಮಾಣದಲ್ಲಿ ಸುರಿಯುತ್ತಿದ್ದು, ರೈತರಲ್ಲಿ ಉತ್ತಮ ಬೆಳೆಯ ಆಶಾವಾದ ಮೂಡಿದೆ. ಮುಂಗಾರಿನ ಆರಂಭದಲ್ಲಿ ಅಬ್ಬರಿಸಿದ್ದ ಮಳೆ ನಂತರ ತುಸು ಬಿಡುವು ನೀಡಿತ್ತು. ಇದೀಗ ಮತ್ತೆ ಚುರುಕಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿಯಲ್ಲಿ ಉತ್ತಮ ಮಳೆ: ತುಂಬಿ ಹರಿಯುತ್ತಿವೆ ಹಳ್ಳಗಳು ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಅಬ್ಬರದಿಂದ ಸುರಿಯುತ್ತಿದೆ. ಜಿಲ್ಲೆಯ ಅನೇಕ ಕಡೆ ಹಳ್ಳಗಳು ತುಂಬಿ ಹರಿಯುತ್ತಿವೆ. ಚಿಂಚೋಳಿ ತಾಲ್ಲೂಕಿನ ಧರ್ಮಸಾಗರ ತಾಂಡಾದಲ್ಲಿ ಕುರಿಗಾಹಿಗಳು ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಪರದಾಡುತ್ತಿದ್ದಾರೆ.

ತಾಂಡಾದಿಂದ ಅರಣ್ಯಕ್ಕೆ ಮುಂಜಾನೆ ಮೇಕೆ ಮೇಯಿಸಲು ಹೋಗಿದ್ದ ಕುರಿಗಾಹಿಗಳು ವಾಪಸ್ ಬರುವಷ್ಟರಲ್ಲಿ ಹಳ್ಳ ತುಂಬಿ ಹರಿಯುತ್ತಿತ್ತು. ತಾಂಡಾದ ಜನರ ಸಹಕಾರದಿಂದ ಇಬ್ಬರು ಹಳ್ಳ ದಾಟುವಲ್ಲಿ ಯಶಸ್ವಿಯಾದರು. ತಾಂಡಾದ ಜನರು ಮೇಕೆಗಳನ್ನು ರಕ್ಷಿಸುವಲ್ಲಿಯೂ ಯಶಸ್ವಿಯಾದರು.

ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂದಿನ 5 ದಿನಗಳ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಎರಡು ದಿನ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ನಾಡದೋಣಿ ಮೀನುಗಾರಿಕೆ ನಡೆಸಬಾರದು ಎಂದು ಇಲಾಖೆ ಸೂಚಿಸಿದೆ.

ಜಿಲ್ಲೆಯ ನದಿ ಮತ್ತು ಸಮುದ್ರ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಹೇಳಿದೆ.

(Good Rain in Karnataka Monsoon Picked up in Kalaburgi and Udupi)

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಹೆಚ್ಚಾಗಲಿದೆ ಮಳೆ ಅಬ್ಬರ; ಮುಂದಿನ ಎರಡು ದಿನಗಳ ಕಾಲ ಬಹುತೇಕ ಕಡೆ ಭಾರೀ ಮಳೆಯ ನಿರೀಕ್ಷೆ

ಇದನ್ನೂ ಓದಿ: ಯಾದಗಿರಿಯಲ್ಲಿ ಜುಲೈ 12 ರಿಂದ ಮೂರು-ದಿನ ಭಾರೀ ಮಳೆಯಾಗುವ ಮುನ್ಸೂಚನೆ, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್​ ಘೋಷಿಸಿದ ಜಿಲ್ಲಾಧಿಕಾರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್