ಯಾದಗಿರಿಯಲ್ಲಿ ಪ್ಲಾಟ್​ಫಾರ್ಮ್ ಹತ್ತಿದ ಗೂಡ್ಸ್ ರೈಲು, ಮುಂದೇನಾಯ್ತು?

ಯಾದಗಿರಿ: ನಗರದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದೆ. ಈ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ […]

ಯಾದಗಿರಿಯಲ್ಲಿ ಪ್ಲಾಟ್​ಫಾರ್ಮ್ ಹತ್ತಿದ ಗೂಡ್ಸ್ ರೈಲು, ಮುಂದೇನಾಯ್ತು?
ಸಾಧು ಶ್ರೀನಾಥ್​

Updated on: Nov 20, 2019 | 3:23 PM

ಯಾದಗಿರಿ: ನಗರದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದೆ.

ಈ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ ಮಾಡುವಾಗ ಈ ಘಟನೆ ನಡೆದಿದೆ.
ಸ್ಥಳಕ್ಕೆ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Published On - 12:04 pm, Wed, 20 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us