ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಗೂಡ್ಸ್​ ವಾಹನಗಳಿಗೆ ನಿರ್ಬಂಧ: ಪರ್ಯಾಯ ಮಾರ್ಗಗಳು ಹೀಗಿವೆ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತಗಳನ್ನು ತಡೆಯಲು ಸರಕು ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಮೈಸೂರು ರಸ್ತೆಯಲ್ಲಿನ ಟ್ರಾಫಿಕ್ ಜಾಮ್ ಮತ್ತು ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ನಿರ್ಬಂಧದ ಹೊರತಾಗಿಯೂ ಕೆಲವು ವಾಹನಗಳು ಕ್ಯಾಂಪಸ್‌ಗೆ ಪ್ರವೇಶಿಸುತ್ತಿವೆ. ಆದೇಶ ಮಾಡಿ ವಿವಿ ಸುಮ್ಮನಾಯಿತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಗೂಡ್ಸ್​ ವಾಹನಗಳಿಗೆ ನಿರ್ಬಂಧ: ಪರ್ಯಾಯ ಮಾರ್ಗಗಳು ಹೀಗಿವೆ
ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಗೂಡ್ಸ್​ ವಾಹನಗಳಿಗೆ ನಿರ್ಬಂಧ: ಪರ್ಯಾಯ ಮಾರ್ಗಗಳು ಹೀಗಿವೆ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Dec 19, 2024 | 4:01 PM

ಬೆಂಗಳೂರು, ಡಿಸೆಂಬರ್​ 19: ಬೆಂಗಳೂರಿನ ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿ (jnanabharati campus) ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸರಕು ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಟಿವಿ9 ನಿರಂತರ ಸುದ್ದಿ ಪ್ರಸಾರ ಬೆನ್ನಲ್ಲೇ ಇದೀಗ ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿನ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಲಾಗಿದೆ. ವಿದ್ಯಾರ್ಥಿಗಳ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ವಿಶ್ವವಿದ್ಯಾಲಯಕ್ಕೆ ಗೂಡ್ಸ್ ವಾಹನಗಳು ಪ್ರವೇಶಿಸಿದಂತೆ ನಿರ್ಬಂಧ ಹೇರಲಾಗಿದೆ.

ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಿಕೊಳ್ಳಲು ವಿವಿ ಕ್ಯಾಂಪಸ್​​ಗೆ ಸರಕು ವಾಹನಗಳು ನುಗ್ಗುತ್ತಿದ್ದವು. ಟಿಪ್ಪರ್, ಲಾರಿ, ಟೆಂಪೋ,ಗೂಡ್ಸ್ ಆಟೋಗಳ ಓಡಾಟದಿಂದ ಕ್ಯಾಂಪಸ್​​ನಲ್ಲಿ ಅಪಘಾತ ಹೆಚ್ಚಾಗಿತ್ತು. ಈ ಹಿಂದೆ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್‌ ಹರಿದು ವಿದ್ಯಾರ್ಥಿನಿ ಮೃತಪಟ್ಟದ್ದಳು. ಟಿವಿ9 ಈ ಬಗ್ಗೆ ಸುದ್ದಿ ಪ್ರಸಾರ ಮಾಡಿದ ಬಳಿಕ ವಿವಿ ಎಚ್ಚೆತ್ತುಕೊಂಡಿತ್ತು.

ಪರ್ಯಾಯ ಮಾರ್ಗಗಳು ಹೀಗಿವೆ

ಉಲ್ಲಾಳ, ಮರಿಯಪ್ಪನಪಾಳ್ಯ, ನಾಗರಭಾವಿ ಸರ್ಕಲ್, ಜ್ಞಾನಭಾರತಿ ಕಡೆಯಿಂದ ಯಾವುದೇ ಸರಕು ವಾಹನಗಳು ವಿಶ್ವವಿದ್ಯಾಲಯ ಪ್ರವೇಶಿದಂತೆ ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಕಡ್ಡಾಯ ಮಾಡಲಾಗಿದೆ.

ಆಟಕ್ಕುಂಟು ಲೆಕ್ಕಕ್ಕಿಲ್ಲದಂತೆ ಆಯ್ತು ಆದೇಶ

ಆದರೆ, ಬೆಂಗಳೂರು ವಿವಿ ಕ್ಯಾಂಪಸ್​ನಲ್ಲಿ ಬೃಹತ್ ಹಾಗೂ ಸರಕು ವಾಹನಗಳ ನಿಷೇಧಕ್ಕೆ ಡೋಂಟ್ ಕೇರ್ ಎನ್ನಲಾಗುತ್ತಿದೆ. ಕ್ಯಾಂಪಸ್​ನಲ್ಲಿ ಬೃಹತ್ ಹಾಗೂ ಸರಕು ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿದರೂ ವಾಹನಗಳು ಓಡಾಟ ನಡೆಸುತ್ತಿವೆ. ಕೇವಲ ಆದೇಶ ಮಾಡಿ ಪೊಲೀಸ್ ಇಲಾಖೆ ಹಾಗೂ ವಿವಿ ಸುಮ್ಮನಾಗಿದೆ. ಕ್ಯಾಂಪಸ್ ಒಳ ಪ್ರವೇಶ ನಿಷೇಧ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಎಲ್ಲಾ ರಸ್ತೆಗಳಿಂದಲೂ ವಿವಿ ಕ್ಯಾಂಪಸ್ ಗೆ ಬೃಹತ್ ಹಾಗೂ ಸರಕು ವಾಹನಗಳು ಬರುತ್ತಿವೆ.

ಇದನ್ನೂ ಓದಿ: ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರ ನಿಷೇಧಿಸಿ: ಸರ್ಕಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟ ಹೆಚ್ಚಾಗಿರುವುದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರ ವಲಯಕ್ಕೆ ಕಿರಿಕಿರಿ ಎದುರಾಗಿದೆ. ಕಳೆದ ವರ್ಷವಷ್ಟೇ ವಾಹನಗಳ ಆರ್ಭಟದಿಂದ ವಿದ್ಯಾರ್ಥಿನಿ ಬಲಿಯಾಗಿದ್ದು, ಘಟನೆ ಮಾಸುವ ಮುನ್ನವೇ ಮತ್ತೆ ವಾಹನಗಳ ಸಂಚಾರ ಏರಿಕೆ ಸಮಸ್ಯೆ ತಂದೊಡಿದೆ. ಹೀಗಾಗಿ ಸರ್ಕಾರ ಹಾಗೂ ವಿವಿ ಕಬ್ಬನ್ ಪಾರ್ಕ್​​ನಲ್ಲಿರುವಂತೆ ರೂಲ್ಸ್ ವಿವಿಯಲ್ಲಿಯೂ ಜಾರಿಗೆ ಮುಂದಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​