AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugliest Language of India: ಕನ್ನಡಿಗರ ಕ್ಷಮೆ ಕೇಳಿದ ಗೂಗಲ್​; ಕನ್ನಡದಲ್ಲೇ ಟ್ವೀಟ್​ ಮಾಡಿ ತಪ್ಪೊಪ್ಪಿಕೊಂಡ ಸಂಸ್ಥೆ

Google Apology: ನಮ್ಮ ಅಲ್ಗೋರಿದಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲರಾಗಿರುವುದನ್ನು ಮುಂದುವರೆಸುತ್ತೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ ಎಂದು ಗೂಗಲ್ ಕ್ಷಮೆ ಕೇಳಿದೆ.

Ugliest Language of India: ಕನ್ನಡಿಗರ ಕ್ಷಮೆ ಕೇಳಿದ ಗೂಗಲ್​; ಕನ್ನಡದಲ್ಲೇ ಟ್ವೀಟ್​ ಮಾಡಿ ತಪ್ಪೊಪ್ಪಿಕೊಂಡ ಸಂಸ್ಥೆ
ಕನ್ನಡಕ್ಕೆ ಗೂಗಲ್​ ಅಪಮಾನ
TV9 Web
| Edited By: |

Updated on:Jun 03, 2021 | 9:39 PM

Share

ತಂತ್ರಜ್ಞಾನ ದೈತ್ಯ ಗೂಗಲ್​ನಲ್ಲಿ Ugliest Language of India ಎಂದು ಸರ್ಚ್ ಮಾಡಿದರೆ ಕನ್ನಡ ಎಂದು ಪ್ರದರ್ಶಿಸುತ್ತಿದ್ದ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗೂಗಲ್ ಈ ಬಗ್ಗೆ ಕ್ಷಮೆ ಯಾಚಿಸಿದೆ. ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿರುವ ಗೂಗಲ್, ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ ಎಂದು ಕನ್ನಡಿಗರ ಕ್ಷಮೆ ಯಾಚಿಸಿದೆ. ಕನ್ನಡಿಗರ ಆಗ್ರೋಶಕ್ಕೆ ಮಣಿದು ವೆಬ್​ಸೈಟ್​ ಗೋಚರವಾಗದಂತೆ ಮಾಡಿದ್ದ ಗೂಗಲ್ ಇದೀಗ ಕನ್ನಡಿಗರಲ್ಲಿ ಬೇಷರತ್ ಕ್ಷಮೆ ಯಾಚಿಸಿದೆ.

ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್​ನೆಟ್​ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಕ್ರಮ ಕೈಗೊಳ್ಳುತ್ತೇವೆ. ಮತ್ತು ನಮ್ಮ ಅಲ್ಗೋರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲರಾಗಿರುವುದನ್ನು ಮುಂದುವರೆಸುತ್ತೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ ಎಂದು ಗೂಗಲ್ ಕ್ಷಮೆ ಕೇಳಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಗೂಗಲ್​ನಂತಹ ದೊಡ್ಡ ಸಂಸ್ಥೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದರು.. debtconsolidationsquad.com ಎಂಬ ಜಾಲತಾಣದಲ್ಲಿ ಇದು ಮೊದಲು ಕಂಡುಬಂದಿದ್ದು, ಸದ್ಯ ಆ ಲೇಖನವನ್ನು ಹಿಂಪಡೆಯಲಾಗಿತ್ತು.

ಗೂಗಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದ ಸಚಿವ ಅರವಿಂದ ಲಿಂಬಾವಳಿ ಕನ್ನಡವನ್ನು ಕೊಳಕು ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡಿಗರ ಆಕ್ರೋಶಕ್ಕೆ ಮಣಿದು ಕರ್ನಾಟಕ ಕೀಳು ಭಾಷೆಯೆಂಬ ( Ugliest Language in India) ಲೇಖನವನ್ನು ಗೂಗಲ್ ಕೈಬಿಟ್ಟಿದೆಯಾದರೂ  ಕರ್ನಾಟಕ ರಾಜ್ಯ ಸರ್ಕಾರ ಗೂಗಲ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತದ ಕೊಳಕು ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ, ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ, ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್ ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಸ್ಲಂ, ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ತ್ವರಿತವಾಗಿ ಲಸಿಕೆ ವಿತರಿಸಿ: ಹೈಕೋರ್ಟ್​ನಿಂದ ರಾಜ್ಯ ಸರ್ಕಾರಕ್ಕೆ ಸೂಚನೆ

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ತೀರ್ಮಾನ ಮಾಡಿಲ್ಲ: ಸಿಎಂ ಯಡಿಯೂರಪ್ಪ

(Google apologizes Kannadigas for Ugliest Language in India Kannada As Search result)

Published On - 9:30 pm, Thu, 3 June 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ