AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: ಗೊರವನಹಳ್ಳಿ ಲಕ್ಮೀ ದೇವಾಲಯ ಮತ್ತು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಬೀಗ

ಈ‌ ತಿಂಗಳ 29 ರಂದು ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ನಡೆಯಬೆಕಿದ್ದ ಸಾಮೂಹಿಕ ವಿವಾಹದಲ್ಲಿ 43 ಜೋಡಿ ನೊಂದಣಿಯಾಗಿತ್ತು. ಆದರೆ ಈ ಕಾರ್ಯಕ್ರಮವನ್ನು ಕೂಡ ಮುಂದೂಡಲಾಗಿದೆ.

ಕೊರೊನಾ ಎಫೆಕ್ಟ್​: ಗೊರವನಹಳ್ಳಿ ಲಕ್ಮೀ ದೇವಾಲಯ ಮತ್ತು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಬೀಗ
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ
preethi shettigar
| Edited By: |

Updated on: Apr 22, 2021 | 11:01 AM

Share

ದೊಡ್ಡಬಳ್ಳಾಪುರ: ಕೊರೊನಾ ಎರಡನೇ ಅಲೆಯ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಮೇ 4 ರ ವರೆಗೂ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೇವಲ ಅರ್ಚಕರಿಂದ ಮಾತ್ರ ದೇವಸ್ಥಾನದ ಒಳಭಾಗದಲ್ಲಿ ಪೂಜೆ ನೆರವೇರಿಸಲಾಗುವುದು ಉಳಿದಂತೆ ಸಾರ್ವಜನಿಕರು ಮತ್ತು ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಈ‌ ತಿಂಗಳ 29 ರಂದು ನಡೆಯಬೇಕಿದ್ದ ಸಾಮೂಹಿಕ ವಿವಾಹದಲ್ಲಿ 43 ಜೋಡಿ ನೊಂದಣಿಯಾಗಿತ್ತು. ಆದರೆ ಈ ಕಾರ್ಯಕ್ರಮವನ್ನು ಕೂಡ ಮುಂದೂಡಲಾಗಿದೆ.

ಪ್ರಸಿದ್ಧ ಗೊರವನಹಳ್ಳಿ ದೇವಾಲಯವನ್ನು 14 ದಿನಗಳ ಕಾಲ ಸಂಪೂರ್ಣವಾಗಿ ಬಂದ್: ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ದೇವಾಲಯವನ್ನು 14 ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಭಕ್ತರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಗೊರವನಹಳ್ಳಿ ಸೇರಿದಂತೆ ಜಿಲ್ಲೆಯ ಇನ್ನಿತರ ಪ್ರಸಿದ್ಧ ದೇವಾಲಯಗಳನ್ನು ಮುಚ್ಚಲಾಗಿದೆ.

ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಶಿವಮೊಗ್ಗ: ಇಂದಿನಿಂದ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಇರುವ ಈ ದೇವಸ್ಥಾನದಲ್ಲಿ ಇಂದಿನಿಂದ ಪ್ರಸಾದ ಭೋಜನ, ವಸತಿ ವ್ಯವಸ್ಥೆ ಯಾವುದು ಸಹ ಇರುವುದಿಲ್ಲ. ಕೊರೊನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸರಕಾರದ ಮುಂದಿನ ಆದೇಶ ಬರುವವರೆಗೆ ದೇವಸ್ಥಾನಕ್ಕೆ ಭಕ್ತರ ಭೇಟಿ ನಿಷೇಧಿಸಲಾಗಿದೆ.

ಐತಿಹಾಸಿಕ ಯಲ್ಲಮ್ಮ ದೇವಸ್ಥಾನಕ್ಕೆ ಬೀಗ ಜಡಿದ ಆಡಳಿತ ಮಂಡಳಿ ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ಭೀಮಾ ನದಿಯಲ್ಲಿರುವ ಐತಿಹಾಸಿಕ ಯಲ್ಲಮ್ಮ ದೇವಸ್ಥಾನಕ್ಕೆ ಆಡಳಿತ ಮಂಡಳಿ ಬೀಗ ಹಾಕಿದೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದಲ್ಲಿರುವ ಈ ದೇವಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಿದ್ದರು. ನೆರೆಯ ಮಹಾರಾಷ್ಟ್ರದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು ಹೀಗಾಗಿ ದೇವಿಯ ದರ್ಶನಕ್ಕೆ ಯಾರೂ ಬರಬಾರದು ಎಂದು ಮನವಿ ಮಾಡಿರುವ ದೇವಸ್ಥಾನದ ಆಡಳಿತ ಮಂಡಳಿ ದೇವಾಲಯದ ಬಾಗಿಲನ್ನು ಮುಚ್ಚಿದೆ.

ಇದನ್ನೂ ಓದಿ:

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

Corona Death : ಕಾರಿನಲ್ಲೇ ಆಕ್ಸಿಜನ್ ಇಟ್ಕೊಂಡಿದ್ದೀನಿ.. ಕೊರೊನಾ ತುಂಬಾ ಡೇಂಜರ್ ಇದೆ.. ತಾಯಿನ ಕಳ್ಕೊಂಡೆ ! ಯುವಕ ಕಣ್ಣೀರ ಮಾತು

(Goravanahalli Lakshmi and ghati subrahmanya temple locked for devotees as surge of covid 19)

Follow Us
preethi shettigar
preethi shettigar
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!