AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಬಸ್ ಪಾಸ್ ಶುಲ್ಕ ಮರುಪಾವತಿಗೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯದ ವಿದ್ಯಾರ್ಥಿಗಳ ಬಸ್​ಪಾಸ್ ಹಣ ಮರುಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಮತ್ತೆ ಗುಡ್ ನ್ಯೂಸ್ ನೀಡಲಾಗಿದೆ. KSRTC, BMTC ಸೇರಿದಂತೆ ನಾಲ್ಕು ನಿಗಮಗಳಿಗೆ ಮರುಪಾವತಿಸಲು ಸೂಚಿಸಲಾಗಿದೆ. ಜೂನ್​ 29ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಬಸ್ ಪಾಸ್ ಶುಲ್ಕ ಮರುಪಾವತಿಗೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ?
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jun 28, 2026 | 10:07 PM

Share

ಮುಖ್ಯಾಂಶಗಳು

  • ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ
  • ವಿದ್ಯಾರ್ಥಿಗಳ ಬಸ್​ಪಾಸ್ ಹಣ ಮರುಪಾವತಿಗೆ ಅವಕಾಶ
  • ನಾಲ್ಕು ಸಾರಿಗೆ ನಿಗಮದಿಂದ ಹಣ ಮರುಪಾವತಿಗೆ ಆದೇಶ

ಬೆಂಗಳೂರು, ಜೂನ್​​ 28: ರಾಜ್ಯ ಸರ್ಕಾರ ಇತ್ತೀಚೆಗೆ ಫ್ರೀ ಬಸ್ ಪಾಸ್ (Free Bus Pass) ಘೋಷಿಸುವ ಮೂಲಕ ವಿದ್ಯಾರ್ಥಿಗಳಿಗೆ (student) ದೊಡ್ಡ ಗುಡ್ ನ್ಯೂಸ್ ನೀಡಿತ್ತು. ಇದೀಗ ಮತ್ತೊಂದು ಸಿಹಿ ಸುದ್ದಿಯನ್ನ ನೀಡಿದೆ. ಅದೇನೆಂದರೆ, ಈಗಾಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ನಾಲ್ಕೂ ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.

ಪಾವತಿಸಲಾದ ಮೊತ್ತ ಹಿಂದಿರುಗಿಸಲು ಆದೇಶ

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರೂ ಸಹ, ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾರಿಗೆ ನಿಗಮಗಳು ನಿಯಮಾನುಸಾರ ವಿದ್ಯಾರ್ಥಿಗಳಿಂದ ಶುಲ್ಕವನ್ನು ಪಡೆದುಕೊಂಡಿದ್ದವು. ಇದೀಗ ಆ ಪಾವತಿಸಲಾದ ಮೊತ್ತವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಆದೇಶಿಲಾಗಿದೆ.

ಇದನ್ನೂ ಓದಿ: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆಗಳು ಬೇಕು? ಇಲ್ಲಿದೆ ವಿವರ

ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳು ಜಂಟಿಯಾಗಿ ಹಣ ಮರುಪಾವತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಜೂನ್ 29ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ‘ಸೇವಾಸಿಂಧು’ ಪೋರ್ಟಲ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒಟಿಪಿ ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ನಿಖರವಾದ ವಿವರಗಳನ್ನು ಸಲ್ಲಿಕೆ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ, NEFT ಅಥವಾ RTGS ವಿಧಾನದ  ಮುಖಾಂತರ ಕೇವಲ 7 ದಿನದ ಒಳಗೆ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಜಮಾವಾಗಲಿದೆ.

ಇದನ್ನೂ ಓದಿ: ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: ಸಿಎಂ ಘೋಷಿಸಿದ 6 ಕೊಡುಗೆಗಳಾವುವು?

ಬ್ಯಾಂಕ್ ಖಾತೆಯ ವಿವರಗಳನ್ನು ನೀಡುವಾಗ ಯಾವುದೇ ತಪ್ಪುಗಳು ಆದಲ್ಲಿ ಹಣ ಮರುಪಾವತಿಗೆ ತೊಂದರೆಯಾಗಬಹುದು ಎಂದು ಕೆಎಸ್ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ವಿದ್ಯಾರ್ಥಿಗಳ ವಿಶೇಷವಾಗಿ ಎಚ್ಚರಿಕೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:04 pm, Sun, 28 June 26

Follow Us