ಕಲಬುರಗಿ: ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸರ್ಕಾರಿ ಬಸ್ ಉರುಳಿಬಿದ್ದ ಘಟನೆ ಕಲಬುರಗಿ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ.
ಕಲಬುರಗಿಯಿಂದ ಚಿತ್ತಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ರಿಂಗ್ ರಸ್ತೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಓರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಸ್ನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಈ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರೈನ್ ಮೂಲಕ ಬಸ್ ಎತ್ತಲಾಯಿತು
ಹಳ್ಳಕ್ಕೆ ಉರುಳಿರುವ ಬಸ್