Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯವಿಲ್ಲ: ಹಿಡಿಶಾಪ ಹಾಕುತ್ತಿರುವ ಚಿತ್ರದುರ್ಗ ಜನರು

ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಈ ಪಟ್ಟಣದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಆಗಬೇಕೆಂಬ ಕನಸು ನನಸಾಗಿದೆ. ಆದರೆ 10 ಕೋಟಿ ರೂ. ವೆಚ್ಚದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ.

ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯವಿಲ್ಲ: ಹಿಡಿಶಾಪ ಹಾಕುತ್ತಿರುವ ಚಿತ್ರದುರ್ಗ ಜನರು
ಹೊಳಲ್ಕೆರೆ ಬಸ್ ನಿಲ್ದಾಣ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 04, 2021 | 12:21 PM

ಚಿತ್ರದುರ್ಗ: ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಆಗಿದೆ. ಕ್ಷೇತ್ರದ ಶಾಸಕರೇ ಸಾರಿಗೆ ನಿಗಮದ ಅಧ್ಯಕ್ಷರೂ ಆಗಿದ್ದಾರೆ. ಆದರೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಬಸ್ ನಿಲ್ದಾಣ ಮಾತ್ರ ಸಾರ್ವಜನಿಕ ಸೇವೆಗೆ ಲಭ್ಯವಾಗದೆ ಪಾಳು ಬಿದ್ದಿದೆ. ಈ ಬಗ್ಗೆ ತಲೆಕಡೆಸಿಕೊಳ್ಳುವವರು ಗತಿಯಿಲ್ಲದಂತಾಗಿದೆ.

ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಈ ಪಟ್ಟಣದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಆಗಬೇಕೆಂಬ ಕನಸು ನನಸಾಗಿದೆ. ಆದರೆ 10 ಕೋಟಿ ರೂ. ವೆಚ್ಚದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ. ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರೇ ಸದ್ಯ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದರೂ ಬಸ್ ನಿಲ್ದಾಣ ಸಾರ್ವಜನಿಕ ಸೇವೆಗೆ ಲಭ್ಯವಾಗದೇ ಪಾಳು ಬಿದ್ದಿದೆ. ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಸ್ವ ಪ್ರತಿಷ್ಠೆಯಿಂದಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಬಸ್ ನಿಲ್ದಾಣ ಸೇವೆಗೆ ಸಿಗದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಹೊಳಲ್ಕೆರೆ ಬಿಜೆಪಿ ಶಾಸಕ, ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅವರನ್ನು ಕೇಳಿದರೆ 10ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಪುರಸಭೆಗೆ ಸೇರಿದ ಜಾಗವನ್ನು ಬಸ್ ನಿಲ್ದಾಣಕ್ಕಾಗಿ ಸಾರಿಗೆ ಇಲಾಖೆಗೆ ನೀಡಲಾಗಿದೆ. ಆದರೆ ಕೆಲ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಹೈಕೋರ್ಟ್​ನಲ್ಲಿ ಪಿಟಿಷನ್ ಹಾಕಿದ್ದರು. ಹೀಗಾಗಿ ಬಸ್ ನಿಲ್ದಾಣ ಉದ್ಘಾಟನೆ ವಿಳಂಬವಾಗಿದೆ. ಇತ್ತೀಚೆಗಷ್ಟೇ ಅವರು ಹಾಕಿದ ಕೇಸು ವಜಾ ಆಗಿದ್ದು, ಶೀಘ್ರದಲ್ಲೇ ಸಾರಿಗೆ ಮಂತ್ರಿ ಲಕ್ಷ್ಮಣ್ ಸವದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲುರವರನ್ನು ಕರೆಸಿ ಬಸ್ ನಿಲ್ದಾಣ ಸೇರಿ ಇತರೆ ಕಾಮಗಾರಿಗಳ ಉದ್ಘಾಟನೆ ಮಾಡುತ್ತೇವೆ ಎಂದು ತಿಳಿಸುತ್ತಿದ್ದಾರೆ.

ಸಾರ್ವಜನಿಕ ಸೇವೆಗೆ ಲಭ್ಯವಾಗದೆ ಪಾಳು ಬಿದ್ದ ಬಸ್​ ನಿಲ್ದಾಣ

ದೂಳಿನಿಂದ ಕೂಡಿರುವ ಬಸ್​ ನಿಲ್ದಾಣ

ಕೋಟೆನಾಡು ಚಿತ್ರದುರ್ಗದಲ್ಲಿ ರಾಜಕೀಯ ಜಿದ್ದಾಜಿದ್ದಿನಿಂದಾಗಿ ಸಾರಿಗೆ ನಿಗಮದ ಅಧ್ಯಕ್ಷರ ತವರು ಕ್ಷೇತ್ರ ಹೊಳಲ್ಕೆರೆಯಲ್ಲೇ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಹೊಳಲ್ಕೆರೆಯ ಜನ ನಿತ್ಯ ಹಿಡಿಶಾಪ ಹಾಕುವಂತಾಗಿದೆ.

ಇದನ್ನು ಓದಿ

ಹಾವೇರಿ ಜಿಲ್ಲೆಯಲ್ಲಿ ಪಾಳುಬಿದ್ದ ಎರಡು ಗರಡಿಮನೆಗಳು; ಕಸರತ್ತಿಗೆ ಬಳಸುತ್ತಿದ್ದ ಪರಿಕರಗಳೆಲ್ಲ ಮಾಯ

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ನಂಜನಗೂಡು ಸರ್ಕಾರಿ ಬಸ್ ಸ್ಟಾಪ್..

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್