ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ: ಏನಿದರ ವಿಶೇಷ? ಇಲ್ಲಿದೆ ವಿವರ

Global Navigation Satellite System: ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ಟೋಲ್ ಸಂಗ್ರಹ ವ್ಯವಸ್ಥೆ ಅನುಷ್ಠಾನಗೊಳಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಹಿಂದೆ ಹಲವು ಬಾರಿ ಪ್ರಸ್ತಾಪಿಸಿದ್ದರು. ಇದೀಗ ಅವರು, ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇಯಲ್ಲಿ ನೂತನ ವಿಧಾನ ಅಳವಡಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಹೊಸ ವಿಧಾನ ಹೇಗಿರಲಿದೆ? ಅದರ ವಿಶೇಷ ಏನು ಎಂಬ ವಿವರ ಇಲ್ಲಿದೆ.

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ: ಏನಿದರ ವಿಶೇಷ? ಇಲ್ಲಿದೆ ವಿವರ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ
Follow us
|

Updated on: Feb 12, 2024 | 7:38 AM

ಬೆಂಗಳೂರು, ಫೆಬ್ರವರಿ 12: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ (Mysuru Bengaluru Expressway) ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು (Global Navigation Satellite System) ಪ್ರಾಯೋಗಿಕವಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಇತ್ತೀಚೆಗೆ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari), ಕರ್ನಾಟಕದಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಎನ್​​ಎಸ್​ಎಸ್ ಆಧಾರಿತ ತಡೆರಹಿತ ಟೋಲಿಂಗ್‌ನಂತಹ ಹೊಸ ತಂತ್ರಜ್ಞಾನಗಳ ಅನುಷ್ಠಾನದ ಕುರಿತು ಸಲಹೆಗಳನ್ನು ನೀಡಲು ಸರ್ಕಾರವು ಸಲಹೆಗಾರರನ್ನು ನೇಮಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಎಷ್ಟು ಸಂಚರಿಸಿದೆ ಎಂಬುದರ ಮಾಹಿತಿ ಕಲೆ ಹಾಕಲು ಮತ್ತು ಪ್ರಯಾಣಿಸಿದ ದೂರದ ಆಧಾರದ ಮೇಲೆ ಬಳಕೆದಾರರ ಶುಲ್ಕವನ್ನು ಲೆಕ್ಕಾಚಾರ ಮಾಡುವ ಸಾಮರ್ಥ್ಯವನ್ನು ಜಿಎನ್​​ಎಸ್​ಎಸ್ ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ಈ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ಮೂರು ವರ್ಷಗಳಿಂದ ಚಿಂತನೆ ನಡೆಸುತ್ತಾ ಇದೆ. ಇದು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಲ್ಲದೆ, ಟೋಲ್ ಪಾವತಿಗಾಗಿ ಸರದಿಯಲ್ಲಿ ಕಾಯುವುದನ್ನು ತಪ್ಪಿಸುತ್ತದೆ ಎಂದು ಫೆಬ್ರವರಿ 7ರಂದು ಗಡ್ಕರಿ ಹೇಳಿದ್ದರು.

ಹೇಗೆ ಕಾರ್ಯನಿರ್ವಹಿಸುತ್ತದೆ ಜಿಎನ್​​ಎಸ್​ಎಸ್?

ಜಿಎನ್​​ಎಸ್​ಎಸ್ ಟೋಲ್ ಸಂಗ್ರಹ ವ್ಯವಸ್ಥೆಯಡಿ ತಂತ್ರಜ್ಞಾನವು ವಾಹನದ ನೋಂದಣಿ ಫಲಕದ ಫೋಟೋವನ್ನು ಸೆರೆಹಿಡಿಯತ್ತದೆ. ವಾಹನವು ಹೆದ್ದಾರಿಯಲ್ಲಿ ಎಷ್ಟು ದೂರ ಹಾದುಹೋಗಿದೆ ಎಂಬುದರ ಲೆಕ್ಕಾಚಾರ ಆಧರಿಸಿ ಟೋಲ್ ಮೊತ್ತವನ್ನು ಡೆಬಿಟ್ ಮಾಡಲಾಗುತ್ತದೆ ಎಂದು ಗಡ್ಕರಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಪಘಾತ ಪ್ರಕರಣಗಳಿಂದ ಹೆಚ್ಚು ಸುದ್ದಿಯಾದ ಚಾಮರಾಜನಗರ! ಒಂದೇ ತಿಂಗಳಲ್ಲಿ 19 ಅಪಘಾತ; 26 ಮಂದಿ ಸಾವು

ಹೊಸ ಟೋಲ್ ಸಂಗ್ರಹ ವಿಧಾನಕ್ಕೆ 2016 ರಲ್ಲಿ ಹೊರತಂದ ಮತ್ತು ಜನವರಿ 2021 ರಿಂದ ಕಡ್ಡಾಯಗೊಳಿಸಿದ ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ ಆಧಾರಿತ ಫಾಸ್ಟ್‌ಟ್ಯಾಗ್‌ಗಳನ್ನು ಬದಲಾಯಿಸಬೇಕಾಗುತ್ತದೆ. ಅಂದಿನಿಂದ ಒಟ್ಟು 8.13 ಕೋಟಿ ಫಾಸ್ಟ್‌ಟ್ಯಾಗ್‌ಗಳನ್ನು ನೀಡಲಾಗಿದೆ ಮತ್ತು ಶೇ 98ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸ್ಯಾಟಲೈಟ್ ಆಧಾರಿತ ವ್ಯವಸ್ಥೆ ಅಳವಡಿಸುವ ಬಗ್ಗೆ ನಿತಿನ್ ಗಡ್ಕರಿ ಈ ಹಿಂದೆಯೇ ಹಲವು ಬಾರಿ ಪ್ರಸ್ತಾಪಿಸಿದ್ದರು. ಆದರೆ, ಇದೀಗ ಮೊದಲ ಬಾರಿಗೆ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇಯನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ