ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ

ನೌಕರರು ಸರ್ಕಾರದ ಮುಂದಿಟ್ಟಿರುವ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ. 6ನೇ ವೇತನ ಆಯೋಗ ಹೊರತುಪಡಿಸಿ ಉಳಿದ 8 ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ.

ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ
ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿ, ಬೆಂಗಳೂರು
ಅರುಣ್​ ಕುಮಾರ್​ ಬೆಳ್ಳಿ Edited By:

Updated on: Dec 15, 2020 | 9:06 PM

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ನಡೆಸಿದ ಮುಷ್ಕರ ಮತ್ತು ಅವರು ಮುಂದಿಟ್ಟಿರುವ ಬೇಡಿಕೆಗಳು ಕ್ರಮೇಣ ಈಡೇರುವಂತೆ ಕಾಣುತ್ತಿದೆ.

ನೌಕರರು ಸರ್ಕಾರದ ಮುಂದಿಟ್ಟಿರುವ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ. 6ನೇ ವೇತನ ಆಯೋಗ ಹೊರತುಪಡಿಸಿ ಉಳಿದ 8 ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ.

ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್​ಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ಬೆಂಗಳೂರು ನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಆಗ್ನೇಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಎನ್​ಡಬ್ಲ್ಯೂಕೆಆರ್​ಟಿಸಿ) ಮತ್ತು ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಎನ್​ಈಕೆಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

ಆರ್ಥಿಕ ಸ್ಥಿತಿಗತಿ ಪರಿಶೀಲಿಸಿ, 6ನೇ ವೇತನ ಆಯೋಗದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಸಮಿತಿಯ ಕಾರ್ಯದರ್ಶಿಯಾಗಿ ಕೆಎಸ್​ಆರ್​ಟಿಸಿಯ ಸದಸ್ಯರೊಬ್ಬರನ್ನು ನೇಮಕ ಮಾಡಲಾಗಿದೆ. ಹಾಗೆಯೇ, ನಿಗಮದ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ ಮತ್ತು ಅಂತರ್ ನಿಗಮ ವರ್ಗಾವಣೆ ಸಾಧ್ಯತೆಯನ್ನೂ ಈ ಸಮಿತಿ ಪರಿಶೀಲಿಸಲಿದೆ. ಅಧಿಕಾರಿಗಳಿಂದ ಕಿರುಕುಳವಾಗುತ್ತಿದೆಯೆಂದು ಆರೋಪಿಸಿದ್ದ ನೌಕರರು ಅದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದರು. ಈ ನಿಟ್ಟಿನಲ್ಲಿ ಒಂದು ಪ್ರತ್ಯೇಕ ಸಮಿತಿ ರಚಿಸಲು ಸಂಸ್ಥೆ ನಿರ್ಧರಿಸಿದೆ.

ಸಾರಿಗೆ ನೌಕರರು ಮುಷ್ಕರ ಹಿಂಪಡೆದ ಬೆನ್ನಲ್ಲೇ ಬಸ್​ ಸಂಚಾರ ಪುನರಾರಂಭ; ನಿಟ್ಟುಸಿರು ಬಿಟ್ಟ ಪ್ರಯಾಣಿಕರು

Published On - 9:06 pm, Tue, 15 December 20

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us