AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ನಿರ್ಧರಿಸಿದ ಸರ್ಕಾರ

ಕರ್ನಾಟಕ ಸರ್ಕಾರವು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲು ನಿರ್ಧರಿಸಿದೆ. ಗಣಿ ಮತ್ತು ಕಲ್ಯಾಣ ಕರ್ನಾಟಕದ 20 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಈ ಲಸಿಕಾ ಕಾರ್ಯಕ್ರಮ ಆರಂಭಿಸಲಾಗಿದೆ. ಈ ಲಸಿಕೆ ಹ್ಯೂಮನ್ ಪ್ಯಾಪಿಲೋಮವೈರಸ್ ಸೋಂಕನ್ನು ತಡೆಯುತ್ತದೆ, ಇದು ಗರ್ಭಕಂಠದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ.

14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ನಿರ್ಧರಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on:Jul 20, 2025 | 8:51 AM

Share

​ಬೆಂಗಳೂರು, ಜುಲೈ 20: ಗರ್ಭಕಂಠದ ಕ್ಯಾನ್ಸರ್​ (Cervical cancer) ತಡೆಯಲು ಕರ್ನಾಟಕ ಸರ್ಕಾರವು (Karnataka Government) 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ (HPV) ನೀಡಲು ನಿರ್ಧರಿಸಿದೆ. ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕದ 20 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿದೆ. ಗಣಿಗಾರಿಕೆಯಿಂದ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದ್ದು, 9 ಕೋಟಿ ರೂ. ವೆಚ್ಚದಲ್ಲಿ ಹೆಚ್‌ಪಿವಿ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳ 20 ತಾಲೂಕುಗಳಲ್ಲಿ 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ ನೀಡುವಂತೆ ಸೂಚನೆ ನೀಡಲಾಗಿದೆ.

ಏನಿದು ಹೆಚ್​ಪಿವಿ ಲಸಿಕೆ? ಏಕೆ ನೀಡಬೇಕು?

ಹೆಚ್‌ಪಿವಿ (HPV) ಲಸಿಕೆ ಎಂದರೆ ಹ್ಯೂಮನ್ ಪ್ಯಾಪಿಲೋಮವೈರಸ್ (Human Papillomavirus) ಲಸಿಕೆ. ಇದು ಗರ್ಭಕಂಠದ ಕ್ಯಾನ್ಸರ್ ಸೇರಿದಂತೆ ಕೆಲವು ಕ್ಯಾನ್ಸರ್ ಮತ್ತು ಜನನಾಂಗದ ನರಹುಣ್ಣುಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರನ್ನು ಭಾದಿಸುತ್ತಿರುವ ಎರಡನೆಯ ಅತಿ ಹೆಚ್ಚು ಕ್ಯಾನ್ಸರ್ ಆಗಿದೆ. ಲೈಂಗಿಕವಾಗಿ ಸಕ್ರಿಯವಾಗಿರುವವರಿಗೆಲ್ಲ ಒಂದಲ್ಲ ಒಂದು ಈ ಸೋಂಕು ಸಂದರ್ಭಗಳಲ್ಲಿ ಕಾಡಬಹುದು. ಆದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದಾಗ ಈ ಹೆಚ್​ಪಿವಿ ಸೋಂಕು ಯಾವುದೇ ತೊಂದರೆಯನ್ನುಂಟು ಮಾಡುವುದಿಲ್ಲ.

ಇದನ್ನೂ ಓದಿ: ಲೈಂಗಿಕ ಕ್ರಿಯೆಯಿಂದ ಕ್ಯಾನ್ಸರ್ ಬರಬಹುದು; ಈ ಬಗ್ಗೆ ಇರಲಿ ಎಚ್ಚರ!

ಲೈಂಗಿಕವಾಗಿ ಸಕ್ರಿಯವಾಗುವ ಮೊದಲು 9ರಿಂದ 14ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಇವರಿಗೆ 0 ಮತ್ತು 6 ತಿಂಗಳಲ್ಲಿ 2 ಡೋಸ್ ವೇಳಾಪಟ್ಟಿಯ ಪ್ರಕಾರ ನೀಡಲಾಗುತ್ತದೆ. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರ ಮತ್ತು ಪುರುಷರಿಗೆ 3 ಡೋಸ್ ವೇಳಾಪಟ್ಟಿ ಅಂದರೆ ಹೆಚ್.ಪಿ.ವಿ ಲಸಿಕೆ 0, 2 ಮತ್ತು 6ತಿಂಗಳಲ್ಲಿ ನೀಡಲಾಗುತ್ತದೆ. ಶೇ. 80ರಷ್ಟು ಹೆಣ್ಣುಮಕ್ಕಳಿಗೆ ಲಸಿಕೆ ನೀಡುವುದರಿಂದ ಗಂಡುಮಕ್ಕಳಿಗೆ ಹೆಚ್‌.ಪಿ.ವಿ ಸೋಂಕು ಹರಡುವಿಕೆ ತಡೆಯಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:48 am, Sun, 20 July 25

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​