
ಬೆಂಗಳೂರು, ಫೆಬ್ರವರಿ 13: ಸರ್ಕಾರಿ ವೈದ್ಯರಿಗೆ ಖಾಸಗಿ ಐಪಿಡಿ (IPD) ಸೇವೆಗೆ ನಿರ್ಬಂಧ ಹೇರಿರುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರು ಪ್ರತಿಭಟನೆಗೆ (Protest) ಮುಂದಾಗಿದ್ದಾರೆ. ಆ ಮೂಲಕ ಸರ್ಕಾರಿ ವೈದ್ಯರು ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. 21 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ವ್ಯಾಪಿ ಒಪಿಡಿ ಸೇವೆ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಐಪಿಡಿ ಸೇವೆ ಸಲ್ಲಿಸುವ ಸರ್ಕಾರಿ ವೈದ್ಯರಿಗೆ ನಿರ್ಬಂಧಕ್ಕೆ ವಿರೋಧ ಸೇರಿದಂತೆ ಪ್ರಮುಖ 15 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿರುವ ವೈದ್ಯರು ಹಾಗೂ ಆರೋಗ್ಯ ಇಲಾಖೆ ನೌಕರರು ಇಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕೇಂದ್ರ ಆರೋಗ್ಯ ಇಲಾಖೆಯ ನೌಕರರ ಸಂಘದಿಂದ ಸಭೆ ಮಾಡಲಾಗಿದೆ. ಸಭೆಯಲ್ಲಿ ಸರ್ಕಾರಕ್ಕೆ 21 ದಿನಗಳ ಗಡುವು ನೀಡಲಾಗಿದ್ದು, ಅಷ್ಟರಲ್ಲಿ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟಿಸುವ ನಿರ್ಧಾರ ತಗೆದುಕೊಂಡಿದ್ದಾರೆ.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.