AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಹಣ ನಿಗದಿಪಡಿಸಿದ ಸರ್ಕಾರ

ಕರ್ನಾಟಕದಲ್ಲಿ ಧಾರಾಕಾರ ಮಳೆಯಿಂದಾಗಿ ಕರಾವಳಿ, ಮಲೆನಾಡು ಮತ್ತು ಬೆಳಗಾವಿ ಭಾಗದಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ತೀವ್ರ ಮಳೆಯಿಂದ ಮನೆಗಳು ಹಾನಿಗೊಳಗಾಗುತ್ತಿರುವ ಹಿನ್ನೆಲೆ ಹಾನಿಗೊಳಗಾದ ಮನೆಗಳಿಗೆ ಸರ್ಕಾರ ಪರಿಹಾರ ಹಣ ನಿಗದಿಪಡಿಸುವ ಮೂಲಕ ಆದೇಶ ಹೊರಡಿಸಿದೆ.

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಹಣ ನಿಗದಿಪಡಿಸಿದ ಸರ್ಕಾರ
ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ದರ ನಿಗದಿಪಡಿಸಿದ ಸರ್ಕಾರ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 07, 2024 | 11:11 PM

Share

ಬೆಂಗಳೂರು, ಆಗಸ್ಟ್​ 7: ರಾಜ್ಯದಲ್ಲಿ ತೀವ್ರ ಮಳೆಯಿಂದ ಮನೆಗಳು (rain) ಹಾನಿಗೊಳಗಾಗುತ್ತಿರುವ ಹಿನ್ನೆಲೆ ಹಾನಿಗೊಳಗಾದ ಮನೆಗಳಿಗೆ ಸರ್ಕಾರ (Government) ಪರಿಹಾರ ಹಣ ನಿಗದಿಪಡಿಸಿದೆ. ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯ, ಪ್ರವಾಹದಿಂದ ಗೃಹೋಪಯೋಗಿ ವಸ್ತು ಕಳೆದುಕೊಂಡರೆ ಅಂತವರಿಗೂ ಪರಿಹಾರ ನೀಡಲಾಗುತ್ತಿದೆ.

ಅತೀ ಸಣ್ಣ ಪ್ರಮಾಣದಲ್ಲಿ ಮನೆಗೆ ಹಾನಿಯಾಗಿದ್ದರೆ 6,500 ಸಾವಿರ ರೂ. ಮಧ್ಯಮ ಪ್ರಮಾಣದ ಮನೆಗೆ ಹಾನಿಯಾಗಿದ್ದರೆ 25 ಸಾವಿರ, ಶೇ.75ರಷ್ಟು ಮನೆ ಹಾನಿಯಾಗಿದ್ದರೆ 50 ಸಾವಿರ ಮತ್ತು ಮನೆಗೆ ಸಂಪೂರ್ಣ ಹಾನಿಯಾಗಿದ್ದರೆ 1.20 ಲಕ್ಷ ರೂ. ಪರಿಹಾರ ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?

ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯ ದೇವರಾಜ ಅರಸು ವಸತಿ ಯೋಜನೆ ಅಡಿ ಮನೆ ಹಂಚಿಕೆ ಪತ್ರ ವಿತರಣೆ, ಮನೆ ಹಾನಿ ಪ್ರಮಾಣ ಪರಿಶೀಲನೆಗೂ ನಿಗದಿಯ ಮಾರ್ಗಸೂಚಿ ಅನುಸರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅತಿವೃಷ್ಟಿ, ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಛಾವಣಿ ಕುಸಿತ (ಶೇ 75% ಕ್ಕಿಂತ ಹೆಚ್ಚು) ಹಾನಿಯಾದ ಮನೆಗಳನ್ನು ಸಂಫೂರ್ಣ ಹಾನಿಯಾದ ಮನೆಯೆಂದು ಪರಿಗಣಿಲಾಗುತ್ತದೆ.

ಮನೆಹಾನಿಯ ಪ್ರಮಾಣವನ್ನು ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳ ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸಬೇಕು. ನಿಗದಿಪಡಿಸಿರುವ ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಥರಿಗೆ ಪರಿಹಾರ ಪಾವತಿಸಲು ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: ಗುಡ್ಡ, ಭೂ ಕುಸಿತ: ಮುಳ್ಳಯ್ಯನಗಿರಿ, ಚಾರ್ಮಾಡಿ, ಶೃಂಗೇರಿ ಡೇಂಜರಸ್: ಸ್ಫೋಟಕ ವರದಿ ಬಹಿರಂಗ

ಭಾಗಶಃ ಮನೆ ಹಾನಿಗಾಗಿ 50 ಸಾವಿರ ರೂ. ಗಳ ವರೆಗೆ ಪಾವತಿಸಲಾಗುವ ಮನೆ ಹಾನಿ ಪರಿಹಾರ ಪಡೆಯುವ ಸಂತ್ರಸ್ಥರ ವಿವರಗಳಾದ, ಹಾನಿಯಾದ ಮನೆಯ ಜಿ.ಪಿ.ಎಸ್. ಛಾಯಾಚಿತ್ರ, ಆರ್.ಆರ್. ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಆರ್​​ಜಿಆರ್​ಹೆಚ್​​ಚಿಎಲ್​ (RGRHCL) ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ ಕರಾವಳಿ, ಮಲೆನಾಡು ಮತ್ತು ಬೆಳಗಾವಿ ಭಾಗದಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಪ್ರವಾಹದಿಂದಾಗಿ ಲಕ್ಷಾಂತರ ಜನರು ಈಗಾಗಲೇ ತಮ್ಮ ಮನೆ ಮಠವನ್ನು ಕಳಡೆದುಕೊಂಡಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 pm, Wed, 7 August 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ