AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ವಿಮೆ

ಕೊವಿಡ್ ಕರ್ತವ್ಯದಲ್ಲಿದ್ದ ಅವಧಿಯಲ್ಲಿ ಮೃತಪಟ್ಟ ಸರ್ಕಾರಿ ನೌಕರರ‌ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ವಿಮಾ ಮೊತ್ತ ಪರಿಹಾರ ನೀಡಲಾಗುತ್ತದೆ.

ಕೊವಿಡ್​ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ವಿಮೆ
ಕೊವಿಡ್ ವಾರಿಯರ್ಸ್​
shruti hegde
| Edited By: |

Updated on: Apr 30, 2021 | 6:41 PM

Share

ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿನ ತೀವ್ರತೆ ಹೆಚ್ಚಾಗಿ ಅದೆಷ್ಟೋ ಜನ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಗಲು ಇರುಳು ಎನ್ನದೇ ದಿನವಿಡೀ ಕೆಲಸ ಮಾಡಿ ಕೊವಿಡ್ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಕೊವಿಡ್ ಕರ್ತವ್ಯದಲ್ಲಿದ್ದ ಅವಧಿಯಲ್ಲಿ ಮೃತಪಟ್ಟ ಸರ್ಕಾರಿ ನೌಕರರ‌ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ವಿಮಾ ಮೊತ್ತ ಪರಿಹಾರ ನೀಡಲಾಗುತ್ತದೆ. ಈ ಕುರಿತಂತೆ ಕೊವಿಡ್ ಕರ್ತವ್ಯ ನಿರತ ಅನುದಾನಿತ ಶಾಲಾ ಶಿಕ್ಷಕರು ಕೂಡಾ ವಿಮಾ ವ್ಯಾಪ್ತಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 3 ಡ್ರೋಣ್​ಗಳ ಮೂಲಕ ಸ್ಯಾನಿಟೈಸೇಶನ್

ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಳೆಯಿಂದ 10 ದಿನಗಳ ಕಾಲ 3 ಡ್ರೋಣ್​ಗಳ ಮೂಲಕ ಸ್ಯಾನಿಟೈಸೇಶನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಂಸದ ಪಿ.ಸಿ. ಮೋಹನ್ ಸ್ವಂತ ವೆಚ್ಚದಲ್ಲಿ ಚೆನ್ನೈಯಿಂದ ಡ್ರೋಣ್​ಗಳನ್ನು ತರಿಸಿದ್ದು, ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ.

ಇಡೀ ದೇಶ ಕೊವಿಡ್ ಎದುರಿಸುತ್ತಿರುವ ಸಮಯದಲ್ಲಿ ರಾಜ್ಯದಲ್ಲಿ ಡ್ರೋಣ್ ಮೂಲಕ ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ. ಗರುಡಾ ಏರೋಸ್ಪೇಸ್ ಸಂಸ್ಥೆ ಉಚಿತವಾಗಿ ಡ್ರೋಣ್ ಮೂಲಕ ಸ್ಯಾನಿಟೈಸ್ ಮಾಡುವ ಕಾರ್ಯಕ್ಕೆ ಇಳಿದಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ. ಲಸಿಕೆ ಪೂರೈಕೆ ಆಗದ ಕಾರಣ ನಾಳೆಯಿಂದ ಲಸಿಕೆ ನೀಡಲ್ಲ. ನಾಳೆಯಿಂದ ಕೊರೊನಾ ವ್ಯಾಕ್ಸಿನ್ ನೀಡಿಕೆ ಆರಂಭ ಆಗುತ್ತಿಲ್ಲ. ಲಸಿಕೆ ಸಿಗದ ಕಾರಣ ವಿಳಂಬ ಆಗ್ತಿದೆ, ಇದು ವೈಫಲ್ಯ ಅಲ್ಲ. ಲಸಿಕೆ ಸಿಕ್ಕಿದ ಕೂಡಲೇ ಲಸಿಕೆ ನೀಡಿಕೆ ಆರಂಭ ಆಗುತ್ತದೆ. ಇದರಲ್ಲಿ ಅನಗತ್ಯವಾಗಿ ಪ್ರಧಾನಿ ಹೆಸರು ತರೋದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೆಂಟ್ರಲ್​ನಲ್ಲಿ ನಾಳೆಯಿಂದ ಡ್ರೋಣ್ ಮೂಲಕ ಸ್ಯಾನಿಟೈಸೇಶನ್; ಸಂಸದ ಪಿ ಸಿ ಮೋಹನ್ ಸ್ವಂತ ವೆಚ್ಚದಲ್ಲಿ ಡ್ರೋಣ್ ಖರೀದಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ