AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಮಾ ದಾನ ಮಾಡಿದ್ರೇ ರಾಜ್ಯ ಸರ್ಕಾರದಿಂದ ಸಿಗುತ್ತೆ 5,000 ರೂ. ಆರೈಕೆ ಭತ್ಯೆ

ಬೆಂಗಳೂರು: ಕೊವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಹೌದು, ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು. ಹೀಗಾಗಿ, […]

ಪ್ಲಾಸ್ಮಾ ದಾನ ಮಾಡಿದ್ರೇ ರಾಜ್ಯ ಸರ್ಕಾರದಿಂದ ಸಿಗುತ್ತೆ 5,000 ರೂ. ಆರೈಕೆ ಭತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 15, 2020 | 6:53 PM

Share

ಬೆಂಗಳೂರು: ಕೊವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಹೌದು, ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು.

ಹೀಗಾಗಿ, ಗುಣಮುಖರಾದವರು ಅತಿ ಹೆಚ್ಚು ಸಂಖ್ಯೆಯಲ್ಲಿ ಬಂದು ಪ್ಲಾಸ್ಮಾ ದಾನ ಮಾಡೋಕೆ ಪ್ರೋತ್ಸಾಹಿಸಲು ಸರ್ಕಾರ 5 ಸಾವಿರ ರೂಪಾಯಿಗಳ‌ ಆರೈಕೆ ‌ಭತ್ಯೆ ನೀಡುವುದಾಗಿ ಘೋಷಣೆ ಮಾಡಿದೆ. ಪ್ಲಾಸ್ಮಾ ದಾನ ಮಾಡಿದವರಿಗೆ ಈ ಆರೈಕೆ ‌ಭತ್ಯೆಯ ಮೂಲಕ ಉತ್ತಮ ಗುಣಮಟ್ಟದ ಆಹಾರ ಖರೀದಿಸಲು ನೆರವಾಗಲಿದೆ ಎಂದು ನೀಡಲಾಗುತ್ತಿದೆ.

Published On - 6:52 pm, Wed, 15 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು