ಎಸ್.​ಸಿ, ಎಸ್​​.ಟಿ ಮನೆಗಳ ನಿರ್ಮಾಣಕ್ಕೆ 2 ಲಕ್ಷ ನೀಡಲು ತೀರ್ಮಾನಿಸಿದ ಸರ್ಕಾರ : ಸಿಎಂ ಬೊಮ್ಮಾಯಿ

ಇಂದು (ಜೂನ್​ 12) ರಂದು ಅನ್ನಪೂರ್ಣೇಶ್ವರಿ ನಗರದ ಬಳಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ೧೫ ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಇದ್ದು, ೧ ಲಕ್ಷ ಮನೆಗಳನ್ನ ನಗರ ಪ್ರದೇಶದಲ್ಲಿ ನಿರ್ಮಾಣ ಮಾಡಲಿದ್ದು, ಎಸ್ ಸಿ, ಎಸ್​​ಟಿಗಳ ಮನೆಗಳ ನಿರ್ಮಾಣಕ್ಕೆ ೨ ಲಕ್ಷ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಎಸ್.​ಸಿ, ಎಸ್​​.ಟಿ ಮನೆಗಳ ನಿರ್ಮಾಣಕ್ಕೆ 2 ಲಕ್ಷ ನೀಡಲು ತೀರ್ಮಾನಿಸಿದ ಸರ್ಕಾರ : ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 12, 2022 | 6:56 PM

ಬೆಂಗಳೂರು: ಇಂದು (ಜೂನ್​ 12) ರಂದು ಅನ್ನಪೂರ್ಣೇಶ್ವರಿ (Annapurneshwari) ನಗರದ ಬಳಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಆರ್‌.ಆರ್‌.ನಗರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ, ಉಲ್ಲಾಳ‌ ಮುಖ್ಯರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸೆಪರೇಟರ್ ನಿರ್ಮಾಣ ಕಾಮಗಾರಿಗೆ, ರಾಷ್ಟ್ರೀಯ ಹೆದ್ದಾರಿ ತುಮಕೂರು ರಸ್ತೆ ಜಂಕ್ಷನ್‌ನಿಂದ ನಾಯಂಡಹಳ್ಳಿ ಜಂಕ್ಷನ್‌ವರೆಗೆ ಮತ್ತು ಸಮನಹಳ್ಳಿ ಜಂಕ್ಷನ್‌ನಿಂದ ಅಂಬೇಡ್ಕರ್ ಕಾಲೇಜುವರೆಗೆ ಕಾಂಕ್ರೀಟ್ ತಡೆಗೋಡೆ ನಿರ್ಮಾಣ, ಸೇತುವೆಗಳು ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಿಎಂನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ  ಸಂಸದ ಡಿ.ಕೆ.ಸುರೇಶ್‌, ಸಚಿವರಾದ ಮುನಿರತ್ನ (Muniratna),  ವಿ.ಸೋಮಣ್ಣ (V Somanna), ಅಶ್ವತ್ಥ್‌ ನಾರಾಯಣ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿ ಹಲವರು ಭಾಗಿಯಾಗಿದ್ದರು.

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು ಇವತ್ತು ದೊಡ್ಡ ಬದಲಾವಣೆ, ಪರಿವರ್ತನೆಯ ದಿನವಾಗಿದೆ. ಬೆಂಗಳೂರು ಅಭಿವೃದ್ಧಿಯ ವೇಗ ಪಡೆದುಕೊಂಡಿದೆ. ಬೆಂಗಳೂರಿನತ್ತ ಜಗತ್ತು ನೋಡುತ್ತಿದೆ. ಇನ್ನೊಂದು ಕಡೆ ಬೆಂಗಳೂರಿಗೆ ಬೇರೆ ಬೇರೆ ಕಡೆಯಿಂದ ದುಡಿಮೆಗೆ ಬಂದಿದ್ದಾರೆ. ಅವರಿಗೆ ಸೂರು ಇಲ್ಲ ಹೀಗಾಗಿ ನಾನು ಅಧಿಕಾರಕ್ಕೇರಿದಾಗ ಬೆಂಗಳೂರಿಗೆ ನಗರೋತ್ಥಾನ ಯೋಜನೆ ನೀಡಿದೆ. ಈ ಯೋಜನೆಯಡಿ ಮನೆಗಳ ನಿರ್ಮಾಣ ಆಗುತ್ತಿವೆ ಎಂದರು.

ಇದನ್ನು ಓದಿ: ಕಾರ್ಯಕ್ರಮದಲ್ಲಿ ಬಿಜೆಪಿ‌ ನಾಯಕರ ಫೋಟೋ; ಇದು ಸರ್ಕಾರಿ ಕಾರ್ಯಕ್ರಮನಾ, ಪಕ್ಷದ ಕಾರ್ಯಕ್ರಮನಾ? ಎಂದು ಅಧಿಕಾರಿಗಳಿಗೆ ಡಿ.ಕೆ.ಸುರೇಶ್ ತರಾಟೆ

ದೇವರಾಜ್ ಅರಸು ಕಾಲದಿಂದಲೂ ಮನೆಗಳ ನಿರ್ಮಾಣ ಕಾರ್ಯವಾಗುತ್ತಿದೆ. ಬೆಳೆಯುತ್ತಿರುವ ಜನಸಂಖ್ಯೆಗೆ ಹಂತಹಂತವಾಗಿ ಮನೆಗಳ ಅವಶ್ಯಕತೆ ಇದೆ. ೧೫ ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಇದೆ. ೧ ಲಕ್ಷ ಮನೆಗಳನ್ನ ನಗರ ಪ್ರದೇಶದಲ್ಲಿ ಮಾಡಲಿದ್ದೇವೆ. ಯಾರಿಗೆ ಬ್ಯ‌ಾಂಕ್ ಲೋನ್ ಸಿಕ್ಕಿಲ್ವೋ ಅಂಥಹವರ ಪರವಾಗಿ ೫೦೦ ಕೋಟಿ ಮೊತ್ತವನ್ನ ಬ್ಯ‍ಾಂಕ್ ಗ್ಯಾರಂಟಿಗೆ ಸರ್ಕಾರ ಕೊಟ್ಟು ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳನ್ನ ಪೂರ್ಣಗೊಳಿಸುತ್ತೇವೆ. ಎಸ್ ಸಿ, ಎಸ್​​ಟಿಗಳ ಮನೆಗಳ ನಿರ್ಮಾಣಕ್ಕೆ ೨ ಲಕ್ಷ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

ಇದನ್ನು ಓದಿ: ಅವನ್ಯಾವನೋ ಪಠ್ಯದಲ್ಲಿ ಸಂವಿಧಾನ ಶಿಲ್ಪಿ ಎಂಬ ಪದವನ್ನೇ ತೆಗೆದಿದ್ದಾನೆ; ಹಾಗಾದ್ರೆ ಸಂವಿಧಾನ ಶಿಲ್ಪಿ ಅವನಾ? -ರೋಹಿತ್ ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜನ ಕಲ್ಯಾಣಕ್ಕಾಗಿ ಸ್ಪರ್ಧೆ ಇರಬೇಕು. ಅದಕ್ಕೆ ಆಡಳಿತ ವರ್ಗ ಎಚ್ಚರದಿಂದ ಇರುತ್ತೆ.ಲಗ್ಗೆರೆಯಲ್ಲಿ ನಿರ್ಮಿಸುತ್ತಿರುವ ಮನೆಗಳ ನಿರ್ಮಾಣಕ್ಕೆ ಯಾವುದೇ ತೊಡಕಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಇಲ್ಲಿ ಕೆಲ ಶೀಟ್ ಮನೆಗಳಿವೆ. ಈ ವೇಳೆ ಯಾಕೆ ಮುನಿ ಆ ಮನೆಗಳು ಆ ರೀತಿ ಇವೆ ಅಂತಾ ಮುನಿರತ್ನರನ್ನ ಮುಖ್ಯಮಂತ್ರಿಗಳು ಪ್ರಶ್ನೆಸಿದ್ದಾರೆ. ಇಲ್ಲ ಹಂತ ಹಂತವಾಗಿ ಮಾಡುತ್ತೇವೆ ಎಂದು ಮುನಿರತ್ನ ಅವರು ಉತ್ತರಿಸಿದರು. ಅವಕ್ಕೆ ನಾನು ಕಾಯಕಲ್ಪ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು. ನಮ್ಮ‌ ರಿಪೋರ್ಟ್ ಕಾರ್ಡ್ ನಿಮ್ಮ ಮುಂದಿದೆ. ಇದು ಅಭಿವೃದ್ಧಿ ಕೆಲಸ ಮಾಡುವ ಸಮಯ, ಯಾರನ್ನು ಆರಿಸಬೇಕು ಯಾರನ್ನು ಬಿಡಬೇಕು ಅಂತ ನೀವೇ ತೀರ್ಮಾನ ಮಾಡಿ. ಗೋಡಾ ಹೈ ಮೈದಾನ್ ಹೈ ಅಂತ ಮಾತು ಮುಗಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:56 pm, Sun, 12 June 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ