ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ವಿತರಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

| Updated By: ವಿವೇಕ ಬಿರಾದಾರ

Updated on: Jul 20, 2022 | 2:52 PM

1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ವಿತರಿಸಲು ನಿರ್ಧರಿಸಿದ ರಾಜ್ಯ ಸರ್ಕಾರ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ (Students) ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ (Egg), ಬಾಳೆಹಣ್ಣು (Banana) ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ (State Government) ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (Pradhan Mantri Poshan Shakti Nirman) ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು ಅನುದಾನ ಬಿಡುಗಡೆ  ಮಾಡಲು ಆರ್ಥಿಕ ಇಲಾಖೆ ಒಪ್ಪಿಕೊಂಡಿದೆ. ಒಂದು ದಿನದ ಘಟಕ ವೆಚ್ಚ 6 ರೂ. ನಂತೆ 46 ದಿನಗಳ ಕಾಲ ಶಾಲೆಗಳಲ್ಲಿ ವಿತರಿಸಲಾಗುತ್ತದೆ.

ಸ್ವಾಮೀಜಿಗಳ ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಮೊದಲು ಕಲ್ಯಾಣ ಕರ್ನಾಟಕದ  ಏಳು ಜಿಲ್ಲೆಗಳಿಗೆ ಮಾತ್ರ ಈ ಮೊಟ್ಟೆ ಯೋಜನೆ ರೂಪಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಶಾಲೆಗಳಿಗೂ ಮೊಟ್ಟೆ  ವಿತರಿಸಲು ನಿರ್ಧರಿಸಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುತ್ತದೆ.

ಶಾಲೆಗಳಲ್ಲಿ ಮಕ್ಕಳಿಗೆ ವರ್ಷದ 100 ದಿನ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಿಕ್ಷಣ ಇಲಾಖೆ ಮನವಿ ಸಲ್ಲಿಸಿತ್ತು. ಆದರೆ 100 ದಿನಗಳ ಬದಲು 46 ದಿನಗಳು ಮಾತ್ರ ವಿತರಿಸಲು ಒಪ್ಪಿಗೆ ನೀಡಲಾಗಿದೆ.