7ನೇ ರಾಜ್ಯ ವೇತನ ಆಯೋಗದ ಅವಧಿ 2024ರ ಮಾರ್ಚ್‌ 15ರವರೆಗೆ ವಿಸ್ತರಣೆ ಮಾಡಿದ ಸರ್ಕಾರ

7ನೇ ರಾಜ್ಯ ವೇತನ ಆಯೋಗದ ಕಾಲಾವಧಿ 2024ರ ಮಾರ್ಚ್‌ 15ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ವೇತನ ಆಯೋಗ ಸರ್ಕಾರಕ್ಕೆ ವಿವರವಾದ ವರದಿ ಸಲ್ಲಿಸಬೇಕಿದೆ. ಅವಧಿ ವಿಸ್ತರಣೆಗೆ ಸಚಿವಾಲಯ ನೌಕರರ ಸಂಘದಿಂದ ವಿರೋಧ ವ್ಯಕ್ತವಾಗಿದ್ದು, ಹೋರಾಟ ಮಾಡಲಿದ್ದಾರೆ. 

7ನೇ ರಾಜ್ಯ ವೇತನ ಆಯೋಗದ ಅವಧಿ 2024ರ ಮಾರ್ಚ್‌ 15ರವರೆಗೆ ವಿಸ್ತರಣೆ ಮಾಡಿದ ಸರ್ಕಾರ
ವಿಧಾನಸೌಧ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Nov 06, 2023 | 9:13 PM

ಬೆಂಗಳೂರು, ನವೆಂಬರ್​​​​​​ 06: 7ನೇ ರಾಜ್ಯ ವೇತನ ಆಯೋಗದ (State Pay Commission) ಕಾಲಾವಧಿ 2024ರ ಮಾರ್ಚ್‌ 15ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ವೇತನ ಆಯೋಗ ಸರ್ಕಾರಕ್ಕೆ ವಿವರವಾದ ವರದಿ ಸಲ್ಲಿಸಬೇಕಿದೆ. ಅವಧಿ ವಿಸ್ತರಣೆಗೆ ಸಚಿವಾಲಯ ನೌಕರರ ಸಂಘದಿಂದ ವಿರೋಧ ವ್ಯಕ್ತವಾಗಿದ್ದು, ಹೋರಾಟ ಮಾಡಲಿದ್ದಾರೆ.

ಈ ಹಿಂದೆ ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಕಾಲಾವಧಿ ವಿಸ್ತರಣೆ ಮಾಡಲಾಗಿದೆ.

2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ ತೆಗೆದಿಡಲಾಗಿತ್ತು. ಮಾರ್ಚ್​ ಒಳಗೆ ಮಧ್ಯಂತರ ವರದಿ ಪಡೆದು ಅವಲೋಕಿಸಿ 2023-24ರಲ್ಲಿಯೇ ಜಾರಿಗೊಳಿಸಲು ಸಿದ್ಧರಿದ್ದೇವೆ ಎಂದು ಈ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ನ. 19ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ.

ಮೇ 15ರಂದು ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿದೆ. ಪ್ರಸ್ತುತ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿ ನ. 18ರಂದು ಕೊನೆಗೊಳ್ಳುತ್ತಿದೆ.

ಇದನ್ನೂ ಓದಿ: ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ: ತಮ್ಮದೇ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಸಚಿವ ಮುನಿಯಪ್ಪ ಕರೆ

ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ 7ನೇ ವೇತನ ಆಯೋಗದಲ್ಲಿ ಹಳೇ ಪಿಂಚಣಿ ನೀತಿ​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 22ರಿಂದ 7 ದಿನಗಳ ಗಡುವು ನೀಡಿತ್ತು.

ಒಂದು ವೇಳೆ ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎಚ್ಚರಿಕೆ ನೀಡಿದ್ದರು. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1ರಿಂದಲೇ ಕರ್ತವ್ಯಕ್ಕೆ ಗೈರಾಗಲು ನೌಕರರು ಸಭೆಯಲ್ಲಿ ನಿರ್ಧಾರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Mon, 6 November 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ