ಚಿಕ್ಕಬಳ್ಳಾಪುರ: ಕರ್ತವ್ಯಲೋಪ, ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ; ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ
ನಾರಾಯಣಸ್ವಾಮಿ, ರಾಜೇಂದ್ರ ಪ್ರಸಾದ್, ನೌತಾಜ್ ಬಿ ಮತ್ತು ವೆಂಕಟೇಶ ಅಮಾನತು ಆದ ಅಧಿಕಾರಿಗಳು. ಅಧಿಕಾರಿಗಳು ಕರ್ತವ್ಯಲೋಪ, ಸಾಮಾಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆ ಅಮಾನತುಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ: ಕರ್ತವ್ಯಲೋಪ, ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ಕಂಡು ಬಂದ ಹಿನ್ನೆಲೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ 4 ಜನ ಅಧಿಕಾರಿಗಳ ಅಮಾನತುಗೊಂಡಿದ್ದಾರೆ. ನಾರಾಯಣಸ್ವಾಮಿ, ರಾಜೇಂದ್ರ ಪ್ರಸಾದ್, ನೌತಾಜ್ ಬಿ ಮತ್ತು ವೆಂಕಟೇಶ ಅಮಾನತು ಆದ ಅಧಿಕಾರಿಗಳು. ಅಧಿಕಾರಿಗಳು ಕರ್ತವ್ಯಲೋಪ, ಸಾಮಾಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆ ಅಮಾನತುಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಾರಾಯಣಸ್ವಾಮಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೆಶಕರಾಗಿ, ರಾಜೇಂದ್ರ ಪ್ರಸಾದ್ ಬಾಗೇಪಲ್ಲಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಯಾಗಿ, ನೌತಾಜ್ ಬಿ ಶಿಶು ಅಭಿವೃದ್ದಿ ಯೋಜನಾಧಿಕಾರಿಯಾಗಿ, ವೆಂಕಟೇಶ ಬಾಗೇಪಲ್ಲಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಕರ್ತವ್ಯಲೋಪದಡಿಯಲ್ಲಿ ಇದೀಗ ನಾಲ್ವರೂ ಅಮಾನತುಗೊಂಡಿದ್ದಾರೆ.
ಇದನ್ನೂ ಓದಿ
ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ; ಮಗನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು
Corona warriors: ಕೊರೊನಾ ಸೋಂಕಿತರ ನೆರವಿಗೆ ನಿಂತ ಉಡುಪಿ ಮೂಲದ ಉದ್ಯಮಿ; ವಿದೇಶದಿಂದಲೇ ಹಳ್ಳಿಗರ ಸಂಕಷ್ಟಕ್ಕೆ ಸಾಥ್
(Government has suspended four officers of the Department of Women and Child Development at Chikballapur)