ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲು ವೈದ್ಯರ ಹಿಂದೇಟು; ವಿಜಯಪುರ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆರೋಪ
ಹೆರಿಗೆ ಮಾಡಿಸಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ ಕಾರಣ ಮಹಿಳೆಯನ್ನು ನಗರದ ಸಂಜೀವಿನಿ ಆಸ್ಪತ್ರೆಗೆ ಕರೆತಂದರು. ಮಗುವಿನ ಅರ್ಧ ಕಾಲು ಹೊರ ಬಂದಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ. ಹೀಗಾಗಿ ಆಸ್ಪತ್ರೆಯ ಮುಂಭಾಗ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ: ಡೆಲಿವರಿ ಮಾಡಿಸಲು ವೈದ್ಯರಿಲ್ಲದೆ ಗರ್ಭಿಣಿ ಮಹಿಳೆಯೊಬ್ಬರು ಪರದಾಟ ಪಟ್ಟಿದ್ದಾರೆ. ಬಬಲೇಶ್ವರ ಪಟ್ಟಣದಿಂದ ಡೆಲಿವರಿಗೆಂದು ಮಹಿಳೆಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಪೋಷಕರು ಕರೆತಂದಿದ್ದರು. ಆದರೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಡೆಲಿವರಿ ಮಾಡಿಸಲು ತಡವಾಗುತ್ತದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಹೇಳಿದರು. ಹೀಗಾಗಿ ಆ್ಯಂಬುಲೆನ್ಸ್ ಮೂಲಕ ನಗರದ ಸಂಜೀವಿನಿ ಆಸ್ಪತ್ರೆಗೆ ಮಹಿಳೆಯನ್ನು ಕರೆ ತಂದಿದ್ದಾರೆ.
ಹೆರಿಗೆ ಮಾಡಿಸಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ ಕಾರಣ ಮಹಿಳೆಯನ್ನು ನಗರದ ಸಂಜೀವಿನಿ ಆಸ್ಪತ್ರೆಗೆ ಕರೆತಂದರು. ಮಗುವಿನ ಅರ್ಧ ಕಾಲು ಹೊರ ಬಂದಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ. ಹೀಗಾಗಿ ಆಸ್ಪತ್ರೆಯ ಮುಂಭಾಗ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರು ಗಲಾಟೆ ಮಾಡಿದ ಬಳಿಕ ಸಂಜೀವಿನ ಆಸ್ಪತ್ರೆ ವೈದ್ಯರು ಮಹಿಳೆಯನ್ನು ದಾಖಲಿಸಿಕೊಂಡಿದ್ದಾರೆ. ಚಿಕಿತ್ಸೆ ಸಿಗದೆ ಸೋಂಕಿತ ಸಾವು; ಕುಟುಂಬಸ್ಥರಿಂದ ಗಂಭೀರ ಆರೋಪ ಚಿಕ್ಕಬಳ್ಳಾಪುರ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ಯುವಕ ಸಾವನ್ನಪ್ಪಿದ್ದಾರೆ. 25 ವರ್ಷದ ಶಿವಶಂಕರ್ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗುಡಿಬಂಡೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಶಂಕರ್ ಪರಿಸ್ಥಿತಿ ಗಂಭೀರವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆವರೆಗೂ ರೋಗಿಯನ್ನು ವೈದ್ಯರು ಗಮನಿಸಿಲ್ಲ. ಜಿಲ್ಲಾಧಿಕಾರಿ ಸೂಚನೆ ನೀಡುವವರೆಗೆ ವೈದ್ಯರು ಚಿಕಿತ್ಸೆ ನೀಡಿಲ್ಲ ಅಂತ ಮೃತ ಶಿವಶಂಕರ್ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ.
ಇದನ್ನೂ ಓದಿ
ಜ್ವರ, ಕೆಮ್ಮು, ನೆಗಡಿಯಿಂದ ಅಸ್ವಸ್ಥಗೊಂಡ ಕೋತಿಗಳು; ಚಿಕ್ಕಬಳ್ಳಾಪುರದ ಜನತೆಗೆ ಹೆಚ್ಚಾದ ಕೊರೊನಾ ಆತಂಕ
(Government hospital doctors refused to treat pregnant woman at vijayapur)