ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ

ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೇ, ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, 2024 ಆರಂಭದಿಂದ ಇಲ್ಲಿಯವರೆಗೆ ಹಾವುಗಳ ಕಡಿತ್ತಕ್ಕೆ ಒಳಗಾದವರ ಸಂಖ್ಯೆ ಹೆಚ್ಚಿದೆ. ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 2316 ಜನರಿಗೆ ಹಾವು ಕಡಿದಿದ್ದು, 18 ಜನರು ಮೃತಪಟ್ಟಿದ್ದಾರೆ. ಮೂರು ವರ್ಷಗಳಲ್ಲಿ 13 ಸಾವಿರ ಜನರಿಗೆ ಹಾವು ಕಡಿದಿದ್ದು, ಈ ಪೈಕಿ 46 ಮಂದಿ ಮೃತಪಟ್ಟಿದ್ದಾರೆ.

ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:May 08, 2024 | 7:33 AM

ಬೆಂಗಳೂರು, ಮೇ 08: ಈ ಬಾರಿಯ ಬೇಸಿಗೆ ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದ್ದಂತೆ ರಾಜ್ಯದ ಜನರನ್ನು ಹೈರಾಣಾಗಿಸಿದೆ. ಮನೆಯಲ್ಲಿದ್ದರೂ ಬಿಸಿಲ ಧಗೆ, ಇನ್ನು ಹೊರಗೆ ಬಂದರೇ ಕೆಂಡದಲ್ಲಿ ಬಿದ್ದಂತೆ ಆಗುತ್ತದೆ. ಈ ನಡುವೆ ಬಿಸಲಿನ ಧಗೆ ತಡೆಯದೆ ಹಾವುಗಳು ಹೊರಗಡೆ ಬರುತ್ತಿದ್ದು ಹಾವು ಕಡಿತ (Snake bight) ಹೆಚ್ಚಾಗಿದೆ.

ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ಹೆಚ್ಚಾಗಿದೆ. ಉರಿಯುವ ಬಿಸಿಲಿಗೆ ಸನ್​ ಸ್ಟ್ರೋಕ್ ಭೀತಿ ಒಂದು ಕಡೆಯಾದರೆ, ಮತ್ತೊಂದಡೆ ಖಾಯಿಲೆಗಳ ಏರಿಕೆಯ ಆತಂಕ ಶುರವಾಗಿದೆ. ಈ ನಡುವೆ ತಾಪಮಾನ ಏರಿಕೆ ಬೆನ್ನಲ್ಲೇ ಹಾವುಗಳು ಹೆಚ್ಚಾಗಿ ಹೊರಗಡೆ ಬರುತ್ತಿರುವುದರಿಂದ ರಾಜ್ಯದಲ್ಲಿ ಹಾವು ಕಡಿತ ಪ್ರಮಾಣ ಹೆಚ್ಚಾಗಿದೆ.

ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೇ, ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, 2024 ಆರಂಭದಿಂದ ಇಲ್ಲಿಯವರೆಗೆ ಹಾವುಗಳ ಕಡಿತ್ತಕ್ಕೆ ಒಳಗಾದವರ ಸಂಖ್ಯೆ ಹೆಚ್ಚಿದೆ. ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 2316 ಜನರಿಗೆ ಹಾವು ಕಡಿದಿದ್ದು, 18 ಜನರು ಮೃತಪಟ್ಟಿದ್ದಾರೆ. ಮೂರು ವರ್ಷಗಳಲ್ಲಿ 13 ಸಾವಿರ ಜನರಿಗೆ ಹಾವು ಕಡಿದಿದ್ದು, ಈ ಪೈಕಿ 46 ಮಂದಿ ಮೃತಪಟ್ಟಿದ್ದಾರೆ.

ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಹೀಗಿದ್ದರೂ, ಹಾವು ಕಡಿತದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹವು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತದ ಚಿಕಿತ್ಸೆಗೆ ಅಗತ್ಯ ಇರುವ ಔಷಧ ದಾಸ್ತಾನು ಇಟ್ಟುಕೊಳ್ಳಬೇಕು. ಆದರೆ, ಹಾವು ಕಡಿತದ ಔಷಧಿ ಕೊರತೆ ಇದೆ. ಹಾವು ಕಡಿತದ 83,620 ವೈಲ್‌ ಚುಚ್ಚುಮದ್ದಿಗೆ ಇತ್ತೀಚೆಗೆ ಆರೋಗ್ಯ ಇಲಾಖೆ ಟೆಂಡರ್‌ ಆಹ್ವಾನಿಸಿತ್ತು. ಆದರೆ ಪೂರೈಕೆಯಾಗಿರುವುದು ಮಾತ್ರ 20,905 ವೈಲ್‌ ಮಾತ್ರ ಉಳಿದ 62,715 ವೈಲ್‌ ಚುಚ್ಚುಮದ್ದು ಈವರೆಗೆ ಸರಬರಾಜು ಆಗಿಲ್ಲ ಹೀಗಾಗಿ ಹಾವು ಕಡಿತಕ್ಕೆ ಒಳಗಾದವರ ಸಾವಿನ ಪ್ರಮಾಣ ಏರಿಕೆ ಕಂಡಿದೆ ಎಂಬ ಮಾತು ಕೇಳಿಬುರತ್ತಿದೆ.

ಕಳೆದ 3 ವರ್ಷಗಳಲ್ಲಿ ಹಾವು ಕಡಿತದ ಪ್ರಕರಣ ಹಾಗೂ ಸಾವು

2021 – 950 ಕಡಿತ, ಸಾವು – 0

2022 – 3439 ಕಡಿತ, ಸಾವು – 17

2023 – 6596 ಕಡಿತ, ಸಾವು – 19

2024 April – 2316 ಕಡಿತ , ಸಾವು – 18

2021ರಲ್ಲಿ 906 ಹಾವು ಕಡಿತದ ಪ್ರಕರಣಗಳು ವರದಿಯಾಗಿದ್ದು, 2023ರಲ್ಲಿ ಈ ಸಂಖ್ಯೆ 6,596ಕ್ಕೆ ಏರಿಕೆಯಾಗಿದೆ. ಈ ವರ್ಷ ಏಪ್ರಿಲ್ ಅಂತ್ಯಕ್ಕೆ 2316 ಪ್ರಕರಣಗಳು ವರದಿಯಾಗಿದ್ದು, 18 ಮಂದಿ ಬಲಿಯಾಗಿದ್ದಾರೆ. ಹಾವು ಕಡಿದು ಮೃತಪಟ್ಟವರಲ್ಲಿ ತುಮಕೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ ಈ ಜಿಲ್ಲೆಯಲ್ಲಿ 19 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

ಸರ್ಕಾರದಿಂದ ಅಧಿಸೂಚಿತ ಕಾಯಿಲೆ

ಇದೇ ವರ್ಷ ಫೆಬ್ರವರಿ 12ರಂದು ರಾಜ್ಯ ಸರಕಾರ ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ. ರಾಜ್ಯದ ಎಲ್ಲ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳ ರೋಗಿಗಳು, ಹೊರ ರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ನೋಂದಾಯಿಸಬೇಕು ಎಂದು ಆದೇಶಿಸಿದೆ. ಕರ್ನಾಟಕದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸಾವಿನ ಸಂಖ್ಯೆ ಮಾತ್ರ ತಗ್ಗಿಲ್ಲ.

ಹಾವು ಕಡಿತಕ್ಕೆ ಚಿಕಿತ್ಸೆ ಏನು?

ಹಾವಿನ ಕಡಿತಕ್ಕೆ ವಿಷ ನಿರೋಧಕ ಔಷಧ ಅಂದರೆ ಎಎಸ್‌ವಿ ಏಕೈಕ ಚಿಕಿತ್ಸೆಯಾದೆ. ಹಾವು ಕಡಿತ ಪತ್ತೆಯಾದ ತಕ್ಷಣ ಎಎಸ್‌ವಿ ನೀಡಬೇಕು. ಉಸಿರಾಟದ ತೊಂದರೆ, ಉರಿ, ಊತ, ನರದೌರ್ಬಲ್ಯ, ರಕ್ತದೊತ್ತಡದಲ್ಲಿ ಏರುಪೇರು, ಕಣ್ಣುಗಳ ರೆಪ್ಪೆ ಮುಚ್ಚಿದ್ದು ಮುಂತಾದವು ಕಂಡುಬಂದಲ್ಲಿ ಆ್ಯಂಟಿ ಸ್ನೇಕ್‌ ವೀನೋಮ್‌ ಎಎಸ್‌ವಿ ಕೊಟ್ಟು ತುರ್ತು ನಿಗಾ ಘಟಕಕ್ಕೆ ವರ್ಗಾಯಿಸಲಾಗುತ್ತದೆ. ಸದ್ಯ ದೇಶದಲ್ಲಿ ಈ ಔಷಧ ತಯಾರಿಕೆ ಘಟಕ ಇರುವುದು ಚೆನೈ ಹಾಗೂ ಪುಣೆಯಲ್ಲಿ ಮಾತ್ರ. ಹೀಗಾಗಿ ತುರ್ತು ಬೇಡಿಕೆಯಷ್ಟು ಔಷಧ ಲಭ್ಯವಾಗುತ್ತಿಲ್ಲ ರಾಜ್ಯದಲ್ಲಿಯೂ ಈ ಘಟಕ ತಯಾರಿಕೆ ಮಾಡಬೇಕು ಎಂದು ತಜ್ಞರು ಅಭಿಪ್ರಯಾಪಟ್ಟಿದ್ದಾರೆ.

ಒಟ್ಟಿನಲ್ಲಿ ಬೇಸಿಗೆಯ ಎಫೆಕ್ಟ್​ಗೆ ಹಾವುಗಳ ಕಡಿತ ಹಾಗೂ ಸಾವು ಹೆಚ್ಚಾಗಿದ್ದು ರಾಜ್ಯ ಸರ್ಕಾರ ಎಚ್ಚೆತ್ತುಗೊಳ್ಳಬೇಕಿದೆ. ರಾಜ್ಯದಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ಆ್ಯಂಟಿ ಸ್ನೇಕ್‌ ವೀನೋಮ್‌ ಔಷಧ ಪೂರೈಕೆ ಮಾಡಿ ಸಿಬ್ಬಂದಿಗೆ ತರಬೇತಿ ನೀಡಬೇಕಿದೆ ಈ ಮೂಲಕ ಹಾವು ಕಡಿತದಿಂದ ಎದುರಾಗುವ ಸಾವಿನ ಪ್ರಮಾಣ ತಗ್ಗಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:21 am, Wed, 8 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ