ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ; ಆರೋಗ್ಯ ಸಚಿವ ಡಾ.ಸುಧಾಕರ್

ಇದರಲ್ಲೂ ಅನಗತ್ಯವಾಗಿ ರಾಜಕಾರಣ ಮಾಡಬೇಡಿ. ವಿಪಕ್ಷ ನಾಯಕರು ಕೇವಲ ಮಾತಿನಲ್ಲಿ ಮಾತ್ರ ಸಹಕರಿಸದೇ, ಕೃತಿಯಲ್ಲೂ ನಮ್ಮ ಜತೆ ಸಹಕಾರ ನೀಡಲಿ. ಇದರಲ್ಲಿ ಆಡಳಿತ ಪಕ್ಷ, ವಿಪಕ್ಷ ಅನ್ನೋದು ಇರಬಾರದು. ಒಬ್ಬ ವ್ಯಕ್ತಿ, ಒಂದು ಸರ್ಕಾರ ಹೊಡೆದೋಡಿಸಲು ಸಾಧ್ಯವಿಲ್ಲ; ಸಚಿವ ಡಾ.ಸುಧಾಕರ್

ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ; ಆರೋಗ್ಯ ಸಚಿವ ಡಾ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Follow us
guruganesh bhat
|

Updated on: Apr 27, 2021 | 10:49 PM

ಬೆಂಗಳೂರು: ರಾಜ್ಯ ಸರ್ಕಾರ ಮೃತ ಸೋಂಕಿತರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ. ಮೃತರ ಸಂಖ್ಯೆಯನ್ನು ಮುಚ್ಚಿಡುವ ಅಗತ್ಯವೂ ಇಲ್ಲ. ಎಲ್ಲ ಸತ್ಯವಾದ ಅಂಕಿ ಸಂಖ್ಯೆಯನ್ನೇ ನಾವು ನೀಡುತ್ತಿದ್ದೇವೆ. ಯಾವುದನ್ನೂ ನಾವು ಮುಚ್ಚಿಡುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.

ಇದರಲ್ಲೂ ಅನಗತ್ಯವಾಗಿ ರಾಜಕಾರಣ ಮಾಡಬೇಡಿ. ವಿಪಕ್ಷ ನಾಯಕರು ಕೇವಲ ಮಾತಿನಲ್ಲಿ ಮಾತ್ರ ಸಹಕರಿಸದೇ, ಕೃತಿಯಲ್ಲೂ ನಮ್ಮ ಜತೆ ಸಹಕಾರ ನೀಡಲಿ. ಇದರಲ್ಲಿ ಆಡಳಿತ ಪಕ್ಷ, ವಿಪಕ್ಷ ಅನ್ನೋದು ಇರಬಾರದು. ಒಬ್ಬ ವ್ಯಕ್ತಿ, ಒಂದು ಸರ್ಕಾರ ಹೊಡೆದೋಡಿಸಲು ಸಾಧ್ಯವಿಲ್ಲ. ಎಲ್ಲರೂ ಲಕ್ಷ್ಮಣ ರೇಖೆ ಹಾಕಿಕೊಂಡು ದಾಟದಿದ್ದರೆ ಮಾತ್ರ. ಕೊರೊನಾ ಸೋಂಕು ಓಡಿಸಲು ಸಾಧ್ಯ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಇಂದಿನ ಕೊರೊನಾ ಲೆಕ್ಕಾಚಾರ ಹೀಗಿದೆ

ಕರ್ನಾಟಕದಲ್ಲಿ ಮಂಗಳವಾರ (ಏಪ್ರಿಲ್ 27) ಒಟ್ಟು 31,830 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 180 ಜನರು ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 17,550 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 31,830 ಜನರಿಗೆ ಕೊರೊನಾ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 14,00,775ಕ್ಕೆ (14 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 180 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 14,807ಕ್ಕೆ ಮುಟ್ಟಿದೆ. ಸೋಂಕಿತರ ಪೈಕಿ 10,84,050 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,01,899 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು 17,550 ಜನರಲ್ಲಿ ಸೋಂಕು ದೃಢಪಟ್ಟಿದ್ದು, 97 ಜನರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 6,002ಕ್ಕೆ ಮುಟ್ಟಿದೆ. ಸೋಂಕಿತರ ಒಟ್ಟು ಸಂಖ್ಯೆ 6,87,751 ಮುಟ್ಟಿದೆ. ಈ ಪೈಕಿ 4,75,525 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,06,223 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 180. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 97 ಜನರು ಸಾವನ್ನಪ್ಪಿದ್ದಾರೆ. ಬಳ್ಳಾರಿ 18, ಮೈಸೂರು 9, ಕಲಬುರಗಿ 7, ರಾಮನಗರ 6, ಹಾಸನ, ಧಾರವಾಡ, ಬೀದರ್​ ಜಿಲ್ಲೆಯಲ್ಲಿ ತಲಾ ಐವರು, ವಿಜಯಪುರ 4, ತುಮಕೂರು, ಹಾವೇರಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ರಾಯಚೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

AI ಆಧಾರಿತ ಆಲ್ಗರಿದಂ ಬಳಸಿ ಸಂಗಾತಿ ಆಯ್ಕೆ, ರಾಜಕೀಯ ನಾಯಕರಿಗೆ ವೋಟು; ಏನ್ ಸ್ವಾಮಿ ಇದೆಲ್ಲಾ?

(Government is not covering up the death toll from Corona says Health Minister Dr Sudhakar)

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ