ಕೊಪ್ಪಳ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ರೆಸಾರ್ಟ್-ಹೋಮ್​ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಸುತ್ತೋಲೆ

ಐತಿಹಾಸಿಕ ಹಂಪಿ ಹೆಸರಿನಲ್ಲಿ ಸಣಾಪುರ, ಆನೆಗೊಂದಿ ಭಾಗದಲ್ಲಿ ನಾಯಿಕೊಡೆಯಂತೆ ಹೋಂ ಸ್ಟೇ, ರೆಸಾರ್ಟ್‌, ಹೋಟೆಲ್‌ಗಳು ತಲೆ ಎತ್ತಿದ್ದು, ಇದೀಗ ಇಸ್ರೇಲ್ ಮಹಿಳೆ, ರೆಸಾರ್ಟ್ ಮಾಲಕಿ ಮೇಲೆ ಗ್ಯಾಂಗ್​ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ರೆಸಾರ್ಟ್, ಹೋಮ್​ಸ್ಟೇಗಳಲ್ಲಿ ಭದ್ರತೆ & ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಏನಿದೆ ಎನ್ನುವ ವಿವರ ಇಲ್ಲಿದೆ.

ಕೊಪ್ಪಳ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ರೆಸಾರ್ಟ್-ಹೋಮ್​ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಸುತ್ತೋಲೆ
Resorts And Homestays
Edited By:

Updated on: Mar 11, 2025 | 5:23 PM

ಬೆಂಗಳೂರು, (ಮಾರ್ಚ್​ 11): ಕೊಪ್ಪಳದ (Koppal) ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್​ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣದಿಂದಾಗಿ ಹಂಪಿ ಪ್ರವಾಸಿತಾಣದ ಮೇಲೆ ದುಷ್ಟಪರಿಣಾಮ ಬೀರಿದೆ. ಇನ್ನು ಈ ಸಂಬಂಧ ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಇಂದು (ಮಾರ್ಚ್​ 11)   ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್​, ಹೋಮ್​ಸ್ಟೇಗಳಲ್ಲಿ(resorts and homestays) ಭದ್ರತೆ ಮತ್ತು ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ. ಹೋಮ್​ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಹಾಗೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕೊರೆದೊಯ್ಯುವಾಗ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದೆ.

ಮೊನ್ನೆ ಕೊಪ್ಪಳದ ಗಂಗಾವತಿಯ ಸಣಾಪುರದಲ್ಲಿ ಇಸ್ರೇಲ್ ಮಹಿಳೆ, ರೆಸಾರ್ಟ್ ಮಾಲಕಿ ಮೇಲೆ ಗ್ಯಾಂಗ್​ರೇಪ್ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖಂಡಿಸಿದ್ದಾರೆ. ಇದೀಗ ಸಿಎಂ ಸೂಚನೆ ಮೇರೆಗೆ ಗೃಹ ಇಲಾಖೆಯು ರೆಸಾರ್ಟ್, ಹೋಮ್​ಸ್ಟೇಗಳಲ್ಲಿ ಭದ್ರತೆ & ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಪ್ರವಾಸಿತಾಣಗಳಲ್ಲಿನ ರೆಸಾರ್ಟ್, ಹೋಮ್​ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: ಕೊಪ್ಪಳ ಗ್ಯಾಂಗ್​ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ

ಹೋಮ್​ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕೊರೆದೊಯ್ಯುವಾಗ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ. ಪೊಲೀಸ್ ಅಥವಾ ಅರಣ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಪ್ರವಾಸಿಗರನ್ನು ಕರೆದೊಯ್ದು ದುರ್ಘಟನೆ ಸಂಭವಿಸಿದರೆ ರೆಸಾರ್ಟ್​, ಹೋಂಸ್ಟೇಗಳ ಮಾಲೀಕರೇ ಜವಾಬ್ದಾರರು ಖಡಕ್ ಆಗಿ ತಿಳಿಸಲಾಗಿದೆ.

ಇದನ್ನೂ ಓದಿ
ಕೊಪ್ಪಳ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ
ಅಕ್ರಮ ದಂಧೆಗಳ ಅಡ್ಡೆಯಾದ ಕೊಪ್ಪಳದ ರೆಸಾರ್ಟ್, ಹೋಮ್ ಸ್ಟೇ, ಆರೋಪ
ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ
ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರಿಬ್ಬರ ಮೇಲೆ ಗ್ಯಾಂಗ್​ರೇಪ್: ​ಇಬ್ಬರ ಬಂಧನ

ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ತೊಂದರೆಯಾದರೆ ರೆಸಾರ್ಟ್, ಹೋಮ್​ಸ್ಟೇ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗಲಿದ್ದು, ಕಾನೂನಿನ ಅನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆಂದು ಸುತ್ತೋಲೆ ರೆಸಾರ್ಟ್ ಮತ್ತು ಹೋಮ್​ಸ್ಟೇಗಳಿಗೆ ರಾಜ್ಯ ಗೃಹ ಇಲಾಖೆ ಸುತ್ತೋಲೆ ಮೂಲಕ ಖಡಕ್ ಎಚ್ಚರಿಕೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us