Government Employees Strike: ಪರೀಕ್ಷೆ ಸಮಯದಲ್ಲಿ ಮುಷ್ಕರಕ್ಕೆ ಶಾಲಾ ಶಿಕ್ಷಕರ ಬೆಂಬಲ, ವಿದ್ಯಾರ್ಥಿ-ಪೋಷಕರಲ್ಲಿ ಆಂತಂಕ
7ನೇ ವೇತನ ಆಯೋಗದ ಶಿಫಾರಸುಗಳು ಜಾರಿಯಾಗಬೇಕೆಂದು ಸರ್ಕಾರಿ ನೌಕರರ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೂಡ ಬೆಂಬಲ ನೀಡಲಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಶಂಭುಲಿಂಗಗೌಡ ಹೇಳಿದ್ದಾರೆ.

ಬೆಂಗಳೂರು: ಇನ್ನೇನು ಕೆಲವೆ ದಿನಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಸಕಲ ಸಿದ್ದತೆಯಲ್ಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಪರೀಕ್ಷೆಯ ದುಗುಡ ಕೂಡ ಇದ್ದು, ಪರೀಕ್ಷೆ ಬೇಗ ಮುಗಿದು ಫಲಿತಾಂಶ ಬಂದರುವುದಕ್ಕೆ ಕಾಯುತ್ತಿದ್ದಾರೆ. ಆದರೆ ಈ ಮಧ್ಯೆ 7ನೇ ವೇತನ ಆಯೋಗದ ಶಿಫಾರಸುಗಳು (7th Pay Commission) ಜಾರಿಯಾಗಬೇಕೆಂದು, ನೂತನ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದು ಹಾಗೂ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ (ಮಾರ್ಚ್ 1) ರಿಂದ ರಾಜ್ಯ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆ ಮಾಡಲಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka Governmnet Primary School Teachers Association) ಕೂಡ ಬೆಂಬಲ ನೀಡಲಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಶಂಭುಲಿಂಗಗೌಡ ಹೇಳಿದ್ದಾರೆ.
ನಾಳೆ ಕರ್ತವ್ಯ ಗೈರಾಗಲು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನಿರ್ಧರಿಸುವ ಮೂಲಕ, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯದ 46 ಸಾವಿರ ಪ್ರಾಥಮಿಕ ಶಾಲೆಗಳ, 2 ಲಕ್ಷ ಶಿಕ್ಷಕರು ಕರ್ತವ್ಯಕ್ಕೆ ಗೈರಾಗುವ ಮೂಲಕ ತರಗತಿಗಳಿಂದ ಹೊರ ಉಳಿಯಲಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳು ಬಂದ್ ಆಗುವ ನಿರೀಕ್ಷೆ ಇದ್ದು, ಪರೀಕ್ಷಾ ಸಮಯದಲ್ಲಿ ಗೈರಾದರೆ ಪರೀಕ್ಷೆಯ ಅಂತಿಮ ಹಂತದ ತಯಾರಿಗೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಪರೀಕ್ಷೆಗಳ ಸಮಯದಲ್ಲಿ ತರಗತಿಯಿಂದ ಹೊರಗುಳಿಯುವ ಶಿಕ್ಷಕರ ನಿರ್ಧಾರದಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ ಹೆಚ್ಚಾಗಿದೆ.
ಸರ್ಕಾರಿ ಕಚೇರಿಗಳು ಬಂದ್ ಆಗುವ ಸಾದ್ಯತೆ; ಇಲ್ಲಿದೆ ಪಟ್ಟಿ
ಸರ್ಕಾರಿ ನೌಕರರಯ ಪಂಜಾಬ್, ರಾಜಸ್ಥಾನ, ಛತ್ತಿಸ್ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ NPS ರದ್ದುಗೊಳಿಸಿ OPS ಜಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆ ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಇರಲಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ