AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಜಾತಿ ವಿಚಾರವಾಗಿ ಸರ್ಕಾರಿ ಶಾಲಾ ಶಿಕ್ಷಕನ ಸಂದೇಶ ವೈರಲ್​​; ದೈಹಿಕ ಶಿಕ್ಷಕ ಅಮಾನತು

ಮೈಸೂರಿನ ಎಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರವಿ, ತಮ್ಮ ಎಡಗೈ ಸಮುದಾಯದ ಮಕ್ಕಳಿಲ್ಲದ ಶಾಲೆಗೆ ಶಿಕ್ಷಕನಾಗಿರಲು ಸಾಧ್ಯವಿಲ್ಲ, ರಾಜಿನಾಮೆ ಕೊಡುತ್ತೇನೆಂದು ಸಂದೇಶದಲ್ಲಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಸಚಿವ ಎಚ್.ಸಿ. ಮಹದೇವಪ್ಪ ಅವರ ಕುರಿತಾಗಿಯೂ ಸಂದೇಶದಲ್ಲಿ ಟೀಕೆ ಮಾಡಿದ್ದರು.

ಮೈಸೂರು: ಜಾತಿ ವಿಚಾರವಾಗಿ ಸರ್ಕಾರಿ ಶಾಲಾ ಶಿಕ್ಷಕನ ಸಂದೇಶ ವೈರಲ್​​; ದೈಹಿಕ ಶಿಕ್ಷಕ ಅಮಾನತು
ಸಾಮಾಜಿಕ ಜಾಲತಾಣದಲ್ಲಿ ಜಾತಿ ಕುರಿತು ವಿವಾದಾತ್ಮಕ ಸಂದೇಶ ಹಾಕಿರುವ ದೈಹಿಕ ಶಿಕ್ಷಕ ರವಿ
TV9 Web
| Updated By: ಭಾವನಾ ಹೆಗಡೆ|

Updated on:Oct 18, 2025 | 1:14 PM

Share

ಮೈಸೂರು, ಅಕ್ಟೋಬರ್ 18: ಮೈಸೂರಿನಲ್ಲಿ ದೈಹಿಕ ಶಿಕ್ಷಕರೊಬ್ಬರು ಜಾತಿ ವಿಚಾರವಾಗಿ ಕಳುಹಿಸಿದ್ದ ಸಂದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಎಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ (P. E Teacher) ರವಿ, ತಮ್ಮ ಎಡಗೈ ಸಮುದಾಯದ ಮಕ್ಕಳಿಲ್ಲದ ಶಾಲೆಗೆ ಶಿಕ್ಷಕನಾಗಿರಲು ಸಾಧ್ಯವಿಲ್ಲ, ರಾಜಿನಾಮೆ ಕೊಡುತ್ತೇನೆಂದು ವಾಟ್ಸಪ್‌ ಗ್ರೂಪ್​​ನಲ್ಲಿ ಸಂದೇಶ ಕಳುಹಿಸಿದ್ದರು. ಈ ಹಿನ್ನೆಲೆ ಬಲಗೈ ಸಮಾಜದ ಮುಖಂಡರು ದೂರು ನೀಡಿದ್ದು, ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಎಚ್.ಸಿ. ಮಹದೇವಪ್ಪ ಅವರ ಕುರಿತಾಗಿಯೂ ಸಂದೇಶದಲ್ಲಿ ಟೀಕೆ

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಎಡಗೈ ಜಿಲ್ಲಾ ನೌಕರರ ಸಂಘದ ವಾಟ್ಸಪ್‌ ಗ್ರೂಪ್​ನಲ್ಲಿ ಸಂದೇಶ ಕಳುಹಿಸಿದ್ದ ಶಿಕ್ಷಕ ರವಿ, ‘ಕಳೆದ 18 ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದೇನೆ. ಆದರೆ, ತಮ್ಮ ಶಾಲೆಯಲ್ಲಿ ಎಡಗೈ ಸಮುದಾಯದ ಒಬ್ಬರೂ ವಿದ್ಯಾರ್ಥಿಗಳಿಲ್ಲದಿರುವುದು ಮನಸ್ಸಿಗೆ ನೋವು ತಂದಿದ್ದು, ಇದರಿಂದ ಬೇಸತ್ತು ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಸಚಿವ ಎಚ್.ಸಿ.ಮಹದೇವಪ್ಪ ಅವರ ಕುರಿತಾಗಿಯೂ ಸಂದೇಶದಲ್ಲಿ ಟೀಕೆ ಮಾಡಿದ್ದಾರೆ.

ದೈಹಿಕ ಶಿಕ್ಷಕನ ಅಮಾನತು

ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ಬಲಗೈ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಶಿಕ್ಷಕನ ವಿರುದ್ಧ ಬ್ಲಾಕ್‌ ಶಿಕ್ಷಣಾಧಿಕಾರಿಗೆ (ಬಿಇಒ) ದೂರು ಸಲ್ಲಿಸಿದ್ದಾರೆ. ಅವರು, ರವಿ ಅವರ ಸಂದೇಶವು ಸಮುದಾಯಗಳ ಮಧ್ಯೆ ವೈಮನಸ್ಸು ಉಂಟುಮಾಡುವ ಪ್ರಚೋದನಕಾರಿ ಹೇಳಿಕೆ ಎಂದು ಆರೋಪಿಸಿದ್ದಾರೆ. ದೂರು ಮತ್ತು ವರದಿ ಆಧರಿಸಿ ಬಿಇಒ ಅವರು ಶಿಕ್ಷಕನ ವಿರುದ್ಧ ವಿಚಾರಣೆ ಕಾಯ್ದಿರಿಸಿ ಅಮಾನತು ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:11 pm, Sat, 18 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ