Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ: ಬಿಕೆ ಹರಿಪ್ರಸಾದ್

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಈ ಕಾರ್ಯಕ್ರಮಕ್ಕೆ ವೀಕ್ಷಿಸಲು ಸಾವಿರಾರು ಜನ ಅಯೋಧ್ಯೆಗೆ ಹೋಗಲು ನಿರ್ಧರಿಸಿದ್ದಾರೆ. ಆದರೆ ಜನವರಿ 22 ರಂದು ಅಯೋಧ್ಯಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಎಂಎಲ್​ಸಿ ಬಿಕೆ ಹರಿಪ್ರಸಾದ್​​ ಸ್ಪೋಟಕ ಹೇಳಿಕೆ ನೀಡಿದ್ದಾರೆ.

22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ: ಬಿಕೆ ಹರಿಪ್ರಸಾದ್
ಬಿಕೆ ಹರಿಪ್ರಸಾದ್​​
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 03, 2024 | 12:53 PM

ಬೆಂಗಳೂರು, ಜನವರಿ 03: ಜನವರಿ 22ರಂದು ಅಯೋಧ್ಯೆಗೆ (Ayodhya) ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಗೋಧ್ರಾ (Godhra) ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ. ನಮಗೆ ಮಾಹಿತಿ ಸಿಗುತ್ತಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಕಾಂಗ್ರೆಸ್ ಮುಖಂಡ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ (B. K. Hariprasad) ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ ಇದೊಂದು ರಾಜಕೀಯ ಕಾರ್ಯಕ್ರಮ ಎಂದರು.

ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೇ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಉದ್ಘಾಟನೆಗೆ ಹೋಗುತ್ತಿದ್ದೇವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರೇನು ಧರ್ಮ ಗುರುಗಳಾ ಇದು ರಾಜಕೀಯ ಕಾರ್ಯಕ್ರಮ. ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಯಾರು ಈ ಶ್ರೀಕಾಂತ್ ಪೂಜಾರಿ? ರಾಮ ಜನ್ಮಭೂಮಿ ಹೋರಾಟಗಾರನ ಹಿನ್ನೆಲೆ ಇಲ್ಲಿದೆ ನೋಡಿ

ಅಯೋಧ್ಯೆ ಇತಿಹಾಸಕ್ಕೂ ಪುರಾಣಕ್ಕೂ ಬಹಳ ವ್ಯತ್ಯಾಸ ಇದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಪಕ್ಷದ ಅಭಿಪ್ರಾಯಕ್ಕೆ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಮಗೆ ಸಿದ್ದರಾಮಯ್ಯ ಅವರೇ ರಾಮ ಎಂದು ಹೆಚ್​ ಆಂಜನೇಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು  ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Wed, 3 January 24